ಧರ್ಮಸ್ಥಳ ಠಾಣಾ ವ್ಯಾಪ್ತಿಯ ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಇಬ್ಬರು ಯುವಕರು ಅಕ್ರಮವಾಗಿ ಪ್ರವೇಶಿಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಸ್ಥಳೀಯರು ಅವರುಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿರುತ್ತಾರೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದು, ಸದ್ರಿ ಯುವಕರು ಪೂರ್ವಾನುಮತಿ ಪಡೆಯದೇ ರಕ್ಷಿತಾರಣ್ಯಕ್ಕೆ ತೆರಳಿದ ಹಿನ್ನೆಲೆಯಲ್ಲಿ, ಅವರುಗಳ ವಿರುದ್ಧ ಅರಣ್ಯ ಇಲಾಖೆಯು ದೂರರ್ಜಿ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ಜರುಗಿಸುವುದಾಗಿ ಅರಣ್ಯ ಇಲಾಖೆಯಿಂದ ಮಾಹಿತಿ ನೀಡಿದೆ.
ಸದ್ರಿ ಇಬ್ಬರು ಯುವಕರು ಠಾಣೆಗೆ ಬಂದಾಗ ಅವರುಗಳ ಮೇಲೆ ಯಾವುದೇ ಹಲ್ಲೆ ಅಥವಾ ಯಾವುದೇ ತೊಂದರೆಯಾಗಿದ್ದಲ್ಲಿ ದೂರು ನೀಡಲು ಸೂಚಿಸಿದ್ದು, ಯುವಕರು ತಾವುಗಳು ಈ ಬಗ್ಗೆ ಚರ್ಚಿಸಿ ಅಗತ್ಯವಿದ್ದಲ್ಲಿ ದೂರು ನೀಡುವುದಾಗಿ ತಿಳಿಸಿರುತ್ತಾರೆ. ಸದ್ರಿ ಘಟನೆಗೆ ಸಂಬಂಧಿಸಿದಂತೆ ಪ್ರಸ್ತುತ ಯಾವುದೇ ದೂರು ದಾಖಲಾಗಿರುವುದಿಲ್ಲ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











