27.8 C
ಪುತ್ತೂರು, ಬೆಳ್ತಂಗಡಿ
September 20, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನೆ-ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ನಿರ್ಮಾಣ ಮಾಡಿಕೊಳ್ಳಬೇಕು: ಉಷಾ ನಾಯಕ್

ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2026–27ನೇ ಶೈಕ್ಷಣಿಕ ವರ್ಷದ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಕಾಲೇಜಿನಲ್ಲಿ ನಡೆಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಸವಿತಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ವೆಂಕಟರಮಣ ಮಹಿಳಾ ಕಾಲೇಜು, ಕಾರ್ಕಳ ಇಲ್ಲಿನ ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಉಷಾ ನಾಯಕ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ನಿರ್ಮಾಣ ಮಾಡಿಕೊಳ್ಳಬೇಕು. ಸೇವಾ ಮನೋಭಾವವನ್ನು ಬೆಳೆಸಿಕೊಂಡು ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಬದುಕಬೇಕು. ಎನ್‌ಎಸ್‌ಎಸ್‌ನಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಹಾಗೂ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳುತ್ತಾರೆ ಎಂದು ಅವರು ಹೇಳಿದರು.

ದೀಪ ಪ್ರಜ್ವಲಿಸುವ ಮೂಲಕ 2026–27ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಿ ಶುಭ ಹಾರೈಸಿದರು.

ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ಶ್ರೀ ಬಿ.ಎ. ಶಮೀವುಲ್ಲಾ ಅವರು ವರ್ಷಪೂರ್ತಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳ ಸಂಪೂರ್ಣ ವಿವರವನ್ನು ನೀಡಿದರು.

ಸಹ ಯೋಜನಾಧಿಕಾರಿ ಶ್ರೀ ಸತೀಶ್ ಸಾಲಿಯಾನ್ ಅವರು ಸ್ವಾಗತಿಸಿದರು. ಮತ್ತೋರ್ವ ಸಹ ಯೋಜನಾಧಿಕಾರಿ ಶ್ರೀಮತಿ ಸುವರ್ಣ ಪೈ ಅವರು ಮುಖ್ಯ ಅತಿಥಿಗಳ ಪರಿಚಯವನ್ನು ಮಾಡಿದರು. ಸಹ ಯೋಜನಾಧಿಕಾರಿ ಶ್ರೀಮತಿ ಅಂಬಿಕಾ ಅವರು ವಂದಿಸಿದರು.

ಘಟಕದ ನಾಯಕರಾದ ಮನಘೋಷಿತ್, ದ್ವಿತೀಯ ಬಿಸಿಎ ಹಾಗೂ ಸ್ವಾತಿ, ದ್ವಿತೀಯ ಬಿಸಿಎ ಅವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕರು ಎನ್‌ಎಸ್‌ಎಸ್ ಗೀತೆಯನ್ನು ಹಾಡಿದರು. ಕಾಲೇಜಿನ ಉಪನ್ಯಾಸಕರು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು ಉಪಸ್ಥಿತರಿದ್ದರು.

Related posts

ಭಾರತೀಯ ಕಿರಿಯ ಪುರುಷರ ಹ್ಯಾಂಡ್‌ಬಾಲ್ ತಂಡಕ್ಕೆ ಎಸ್‌.ಡಿ.ಎಂ ಕಾಲೇಜಿನ ವಿದ್ಯಾರ್ಥಿ ಅಭಿಷೇಕ್ ಎಚ್. ಆಯ್ಕೆ

Suddi Udaya

ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya

ಶಿರ್ತಾಡಿ: ಸಾಯಿ ಎಂಟರ್ಪ್ರೈಸಸ್ ನಲ್ಲಿ 4 ನೇ ಹಂತದ ಲಕ್ಕಿ ಸ್ಕೀಮ್: 15 ಸದಸ್ಯರನ್ನು ಸೇರಿಸಿದ ಸದಸ್ಯರಿಗೆ ಸ್ಕೀಮ್ ಕಾರ್ಡ್ ಉಚಿತ

Suddi Udaya

ಪುಂಜಾಲಕಟ್ಟೆ : ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಗೇರುಕಟ್ಟೆಯಲ್ಲಿ ಅಪೂರ್ವವಾಗಿ ನಡೆದ ಮಾತೃ ವಂದನಾ ಕಾರ್ಯಕ್ರಮ

Suddi Udaya
error: Content is protected !!