November 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಪೋಕ್ಸೋ ಪ್ರಕರಣದಲ್ಲಿ ಆರೋಪಿ ಅಬ್ದುಲ್ ಲತೀಫ್ ಗೆ ಶಿಕ್ಷೆ ಪ್ರಕಟ

ಬೆಳ್ತಂಗಡಿ: ಪೋಕ್ಸೋ ಹಾಗೂ ಬಿಎನ್‌ಎಸ್ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ವಾಸ ಹಾಗೂ ರೂ.80,000 ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ನಿವಾಸಿ ಅಬ್ದುಲ್ ಲತೀಫ್ ಶಿಕ್ಷೆಗೊಳಗಾದ ಆರೋಪಿ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಂದಿನ ಪೊಲೀಸ್ ನಿರೀಕ್ಷಕರಾದ ಅನಂತ ಪದ್ಮನಾಭರವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಧೀಶರಾದ ಶ್ರೀ ಮಾನು ಕೆ.ಎಸ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 19, 2026ರಂದು ಈ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಪರವಾಗಿ ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.

Related posts

ಬೆಳ್ತಂಗಡಿ: ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್‌ಗೆ ಗಣ್ಯರ ಆಹ್ವಾನ- ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಶಿಶಿಲ ಪರಿಶಿಷ್ಟ ಪಂಗಡ ಕಾಲೋನಿಗೆ ಪೊಲೀಸ್ ಅಧಿಕಾರಿಗಳ ಭೇಟಿ: ಸೈಬರ್ ಅಪರಾಧ, ಪೋಕ್ಸೋ ವಂಚನೆಗಳ ಬಗ್ಗೆ ಜಾಗೃತಿ

Suddi Udaya

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

Suddi Udaya

ಕೆನರಾ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲರಾಗಿ ಡಾ. ಮಹೇಶ್ ಪ್ರಸನ್ನ ಕೆ.

Suddi Udaya

ಮಾಚಾರು: ಬದನಾಜೆ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ 45ನೇ ವರ್ಷದ ಶಾರದಾ ಪೂಜೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ರವರ ಉಚಿತ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

Suddi Udaya
error: Content is protected !!