31.4 C
ಪುತ್ತೂರು, ಬೆಳ್ತಂಗಡಿ
September 20, 2026
ಪ್ರಮುಖ ಸುದ್ದಿಬೆಳ್ತಂಗಡಿಸಮಸ್ಯೆ

ವೇಣೂರು ಹೊಳೆಯಲ್ಲಿ ಅಕ್ರಮ ಮರಳುಗಾರಿಕೆ -ಮೂವರ ವಿರುದ್ಧ ಪ್ರಕರಣ

ಬೆಳ್ತಂಗಡಿ: ನಿಟ್ಟಡೆ ಗ್ರಾಮದ ಕಾಜೋಡಿ ಹೊಳೆಯಲ್ಲಿ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಮೂವರ ವಿರುದ್ಧ ವೇಣೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವೇಣೂರು ಠಾಣಾ ಪಿಎಸ್‌ಐ ಅಕ್ಷಯ್ ಡವಗಿ ಅವರು ಸಿಬ್ಬಂದಿಗಳಾದ ಹೆಚ್‌ಸಿ ನಾಗರಾಜಪ್ಪ ಹಾಗೂ ಪಿಸಿ ವಸಂತ ಅವರೊಂದಿಗೆ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 19ರಂದು ರೌಂಡ್ಸ್ ಕರ್ತವ್ಯದಲ್ಲಿದ್ದರು. ಈ ವೇಳೆ ನಿಟ್ಟಡೆ ಗ್ರಾಮದ ಕಾಜೋಡಿ ಹೊಳೆಯಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಮಾಹಿತಿ ಆಧರಿಸಿ ಪೊಲೀಸರು 4.40 ರ ಸುಮಾರಿಗೆ ಸ್ಥಳಕ್ಕೆ ತೆರಳಿದಾಗ, ಮೂವರು ವ್ಯಕ್ತಿಗಳು ಹೊಳೆಯಲ್ಲಿ ಮರಳು ತೆಗೆಯುತ್ತಿರುವುದು ಪತ್ತೆಯಾಗಿದೆ. ಮರಳು ತೆಗೆಯಲು ಸಂಬಂಧಪಟ್ಟ ಇಲಾಖೆಯಿಂದ ಪರವಾನಿಗೆ ಇದೆಯೇ ಎಂದು ವಿಚಾರಿಸಿದಾಗ ಯಾವುದೇ ಪರವಾನಿಗೆ ಇಲ್ಲದಿರುವುದು ಬೆಳಕಿಗೆ ಬಂದಿದೆ.ಆರೋಪಿಗಳನ್ನು ನಿಟ್ಟಡೆ ಗ್ರಾಮದ ಹರೀಶ್ ಪಿ.ಎಸ್. (40), ರಾಜೇಶ್ (25) ಹಾಗೂ ಅಶ್ವತ್ (20) ಎಂದು ಗುರುತಿಸಲಾಗಿದೆ.

ಸ್ಥಳ ಪರಿಶೀಲನೆ ನಡೆಸಿದಾಗ ಹೊಳೆ ಬದಿಯಲ್ಲಿ ಸುಮಾರು 2 ಯೂನಿಟ್ ಮರಳನ್ನು ರಾಶಿ ಹಾಕಿರುವುದು ಪತ್ತೆಯಾಗಿದ್ದು, ಇದರ ಅಂದಾಜು ಮೌಲ್ಯ ಸುಮಾರು 8 ಸಾವಿರ ರೂ. ಎಂದು ತಿಳಿದುಬಂದಿದೆ. ಅಕ್ರಮ ಮರಳುಗಾರಿಕೆಗೆ ಬಳಸಿದ್ದ ಒಂದು ಹಾರೆ, ಎರಡು ಪ್ಲಾಸ್ಟಿಕ್ ಬುಟ್ಟಿಗಳು, ಎರಡು ಕಬ್ಬಿಣದ ಬಕೆಟ್‌ಗಳು ಹಾಗೂ ಒಂದು ಕಬ್ಬಿಣದ ಸ್ಟ್ಯಾಂಡ್‌ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸರಕಾರದ ರಾಜಸ್ವಕ್ಕೆ ನಷ್ಟ ಉಂಟುಮಾಡಿ ಅಕ್ರಮವಾಗಿ ಮರಳುಗಾರಿಕೆ ನಡೆಸಿದ ಆರೋಪದಡಿ ವೇಣೂರು ಪೊಲೀಸ್ ಠಾಣೆಯಲ್ಲಿ ಮೂವರು ಆರೋಪಿಗಳ ವಿರುದ್ಧ BNS ಕಲಂ 303(2), Karnataka Minor Mineral Concession Rules 1994ರ ಕಲಂ 42, 43, 44 ಹಾಗೂ MMRD Act 1957ರ ಕಲಂ 4(1), 4(1A), 21(1), 21(1A) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related posts

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya

ಬೆಳ್ತಂಗಡಿ : ವಾಣಿ ಶಿಕ್ಷಣ ಸಂಸ್ಥೆಯಲ್ಲಿ ‘ವಾಣಿ ವಿದ್ಯಾ ಸಮ್ಮಾನ್’ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಅರಸಿನಮಕ್ಕಿ ಶ್ರೀ ಕ್ಷೇ.ಧ.ಶೌ.ವಿ.ನಿ. ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಬರುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ ಚಲಿಸಲು: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ಪುತ್ತೂರು ಕ.ರಾ.ರ.ಸಾ.ನಿಗಮದ ನಿಯಂತ್ರಣಾಧಿಕಾರಿಯವರಿಗೆ ಮನವಿ

Suddi Udaya

ಅಶ್ರಫ್ ಆಲಿಕುಂಞಿ (ಅಚ್ಚು) ಮುಂಡಾಜೆ ಅವರಿಗೆ ಲಯನ್ಸ್ ಜಿಲ್ಲಾ “ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್” ಪುರಸ್ಕಾರ

Suddi Udaya
error: Content is protected !!