27.8 C
ಪುತ್ತೂರು, ಬೆಳ್ತಂಗಡಿ
September 20, 2026
ಅಪರಾಧ ಸುದ್ದಿವರದಿ

ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಇಬ್ಬರು ಯುವಕರು ಅಕ್ರಮವಾಗಿ ಪ್ರವೇಶ: ಅರಣ್ಯ ಇಲಾಖೆಯಿಂದ ದೂರರ್ಜಿ ದಾಖಲು

ಧರ್ಮಸ್ಥಳ ಠಾಣಾ ವ್ಯಾಪ್ತಿಯ ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಇಬ್ಬರು ಯುವಕರು ಅಕ್ರಮವಾಗಿ ಪ್ರವೇಶಿಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಸ್ಥಳೀಯರು ಅವರುಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿರುತ್ತಾರೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದು, ಸದ್ರಿ ಯುವಕರು ಪೂರ್ವಾನುಮತಿ‌ ಪಡೆಯದೇ ರಕ್ಷಿತಾರಣ್ಯಕ್ಕೆ ತೆರಳಿದ ಹಿನ್ನೆಲೆಯಲ್ಲಿ, ಅವರುಗಳ ವಿರುದ್ಧ ಅರಣ್ಯ ಇಲಾಖೆಯು ದೂರರ್ಜಿ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ಜರುಗಿಸುವುದಾಗಿ ಅರಣ್ಯ ಇಲಾಖೆಯಿಂದ ಮಾಹಿತಿ ನೀಡಿದೆ.

ಸದ್ರಿ ಇಬ್ಬರು ಯುವಕರು ಠಾಣೆಗೆ ಬಂದಾಗ ಅವರುಗಳ ಮೇಲೆ ಯಾವುದೇ ಹಲ್ಲೆ ಅಥವಾ ಯಾವುದೇ ತೊಂದರೆಯಾಗಿದ್ದಲ್ಲಿ ದೂರು‌ ನೀಡಲು ಸೂಚಿಸಿದ್ದು, ಯುವಕರು ತಾವುಗಳು ಈ ಬಗ್ಗೆ ಚರ್ಚಿಸಿ ಅಗತ್ಯವಿದ್ದಲ್ಲಿ ದೂರು ನೀಡುವುದಾಗಿ ತಿಳಿಸಿರುತ್ತಾರೆ. ಸದ್ರಿ ಘಟನೆಗೆ ಸಂಬಂಧಿಸಿದಂತೆ ಪ್ರಸ್ತುತ ಯಾವುದೇ ದೂರು ದಾಖಲಾಗಿರುವುದಿಲ್ಲ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಪುತ್ರಬೈಲು ಕಿಂಡಿ ಅಣೆಕಟ್ಟುಗಳಲ್ಲಿ ಸಿಕ್ಕಿಹಾಕಿಕೊಂಡ ಬೃಹತ್ ಗಾತ್ರದ ಮರಗಳ ತೆರವು ಕಾರ್ಯ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ನಿತ್ಯಶ್ರೀ. ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ದೇಶದಲ್ಲಿ ನೋಂದಾವಣೆಯಾಗದಿರುವ ದೊಡ್ಡ ಸಂಸ್ಥೆ ಆರ್.ಎಸ್.ಎಸ್. ಮಾತ್ರ,: ಕೆಪಿಸಿಸಿ ವಕ್ತಾರ ಅಮಲ ರಾಮಚಂದ್ರ

Suddi Udaya

ಅಕ್ರಮ ದಾಸ್ತಾನು ಡಿಸೇಲ್ ಪತ್ತೆ ಪ್ರಕರಣ:ಡಿಸೇಲ್ ಹರಾಜು ಮಾಡಿದ ಕಂದಾಯ ಇಲಾಖೆ

Suddi Udaya

ಬೆಳ್ತಂಗಡಿ ಪ.ಪಂ. ನಾಮ ನಿರ್ದೇಶಿತ ಸದಸ್ಯರಾಗಿ ಹೆನ್ರಿ ಲೋಬೊ ಆಯ್ಕೆ

Suddi Udaya

ಡಾ. ಡಿ ವಿರೇಂದ್ರ ಹೆಗ್ಗಡೆ ರವರ ಹುಟ್ಟು ಹಬ್ಬದ ಪ್ರಯುಕ್ತ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!