28.3 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಡಂಗೆ ಸರ್ಕಾರಿ ಶಾಲೆಯಲ್ಲಿ ‘ರಾಜಕೇಸರಿ ಸ್ವಚ್ಛಾಲಯ ಅಭಿಯಾನ’; 20ಕ್ಕೂ ಅಧಿಕ ಸ್ವಯಂಸೇವಕರಿಂದ ಶೌಚಾಲಯ ದುರಸ್ತಿ, ಸ್ವಚ್ಛತೆ ಹಾಗೂ ನವೀಕರಣ

ಬಂಟ್ವಾಳ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಆರೋಗ್ಯ ಹಾಗೂ ನೈರ್ಮಲ್ಯದ ಹಿತದೃಷ್ಟಿಯಿಂದ ಶೌಚಾಲಯಗಳನ್ನು ಸ್ವಚ್ಛಗೊಳಿಸಿ, ದುರಸ್ತಿ ಹಾಗೂ ನವೀಕರಣಗೊಳಿಸುವ ‘ರಾಜಕೇಸರಿ ಸ್ವಚ್ಛಾಲಯ ಅಭಿಯಾನ’ ಭಾರತ್ ಆಗ್ರೋವೆಟ್ ಇಂಡಸ್ಟ್ರೀಸ್ ಸಹಯೋಗದೊಂದಿಗೆ ಕೊಡಂಗೆ ನೇತಾಜಿ ಸುಭಾಷ್ ಚಂದ್ರ ಬೋಸ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.20ರಂದು ನಡೆಯಿತು.

ರಾಜಕೇಸರಿ ಸೇವಾ ಟ್ರಸ್ಟ್‌ ಬಂಟ್ವಾಳ ಘಟಕದ ನೇತೃತ್ವದಲ್ಲಿ ನಡೆದ ಅಭಿಯಾನದಲ್ಲಿ ಸುಮಾರು 20 ಸ್ವಯಂಸೇವಕರು ಭಾಗವಹಿಸಿ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಶ್ರಮದಾನ ಮಾಡಿದರು. ಶಾಲೆಯಲ್ಲಿನ ಶೌಚಾಲಯಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ, ಅಗತ್ಯ ದುರಸ್ತಿ ಕಾರ್ಯಗಳನ್ನು ಕೈಗೊಂಡು, ಬಣ್ಣ ಬಳಿದು ನವೀಕರಿಸುವ ಮೂಲಕ ಸುಸಜ್ಜಿತ ಸ್ವಚ್ಛಾಲಯವನ್ನಾಗಿ ಪರಿವರ್ತಿಸಲಾಯಿತು.

ಅಭಿಯಾನದ ಸಂದರ್ಭದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಸ್ವಯಂಸೇವಕರ ಕಾರ್ಯವನ್ನು ವೀಕ್ಷಿಸಿದರು. ಬಳಿಕ ಸ್ವಯಂಸೇವಕರನ್ನು ಪ್ರೋತ್ಸಾಹಿಸಿ, ಸಮಾಜಮುಖಿ ಕಾರ್ಯಗಳ ಮಹತ್ವದ ಕುರಿತು ಪ್ರೇರಣಾದಾಯಕವಾಗಿ ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿನ ನಿರ್ಲಕ್ಷ್ಯಕ್ಕೊಳಗಾದ ಶೌಚಾಲಯಗಳನ್ನು ಸುಧಾರಿಸುವುದು ಹಾಗೂ ಮಕ್ಕಳಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜಕೇಸರಿ ಸೇವಾ ಟ್ರಸ್ಟ್‌ ಕಳೆದ ಎರಡು ವರ್ಷಗಳಿಂದ ಈ ಅಭಿಯಾನವನ್ನು ನಡೆಸಿಕೊಂಡು ಬರುತ್ತಿದೆ. ಬಾಲಕಿಯರ ಆರೋಗ್ಯ, ನೈರ್ಮಲ್ಯ ದೃಷ್ಟಿಯಿಂದಲೂ ಶೌಚಾಲಯಗಳ ಸುಧಾರಣೆಗೆ ಆದ್ಯತೆ ನೀಡಲಾಗುತ್ತಿದೆ.

ಇದೇ ಸಂದರ್ಭದಲ್ಲಿ ರಾಜಕೇಸರಿ ಸೇವಾ ಟ್ರಸ್ಟ್‌ನ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸಂತೋಷ್ ಕೊಲ್ಯ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕೇಶ್ ಕುಲಾಲ್ ಮಂಗಳಾದೇವಿ, ಜಿಲ್ಲಾ ಸಂಚಾಲಕರಾದ ಗುರುಪ್ರಸಾದ್ ಕುಲಾಲ್, ಬಂಟ್ವಾಳ ಘಟಕದ ಅಧ್ಯಕ್ಷ ಗೌತಮ್ ಪೂಜಾರಿ, ನೆಲ್ಲಿಗುಡ್ಡೆ ಘಟಕದ ಅಧ್ಯಕ್ಷ ರವಿರಾಜ್, ಬೆಳ್ತಂಗಡಿ ಘಟಕದ ಅಧ್ಯಕ್ಷ ಜಗದೀಶ್ ಲಾಯಿಲ ಸೇರಿದಂತೆ ಟ್ರಸ್ಟ್‌ನ ಇತರ ಪದಾಧಿಕಾರಿಗಳು ಹಾಗೂ ಸದಸ್ಯರು ಈ ‘ರಾಜಕೇಸರಿ ಸ್ವಚ್ಛಾಲಯ ಅಭಿಯಾನ’ ಕ್ಕೆ ಕೈ ಜೋಡಿಸಿದ್ದರು .

Related posts

ನ.29: ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಹೆಚ್.ಬಿ ಲೀಲಾವತಿ ಸೇವಾ ನಿವೃತ್ತಿ

Suddi Udaya

ಮೊಗ್ರು : ಮುಗೇರಡ್ಕ ದೈವಸ್ಥಾನ ವತಿಯಿಂದ ಮುಗೇರಡ್ಕ ಮುಳುಗು ಸೇತುವೆ ಸಂಚಾರಕ್ಕೆ ಮುಕ್ತ

Suddi Udaya

ಮೇ 7ರಂದು ಮೇಲಂತಬೆಟ್ಟು ಜೇಸಿಂತ ಮೋನಿಸ್ ರವರ ಅಂತ್ಯಕ್ರಿಯೆ

Suddi Udaya

ಬೆಳ್ತಂಗಡಿ: ಸರಕಾರಿ ಪ.ಪೂ. ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಪದ್ಮಲತಾ ನಿಗೂಢ ಸಾವು ಪ್ರಕರಣ: ಎಸ್‌ಐಟಿಗೆ ದೂರು ನೀಡಲು ಸಿಪಿಐಎಂ ನಾಯಕರ ಜೊತೆ ಆಗಮಿಸಿದ ಮೃತಳ ಸಹೋದರಿ

Suddi Udaya

ಮಲ್ನಾಡ್ ಐಕಾನ್ ಅಶ್ವತ್ಥ್ ಎಸ್.ಎಲ್. ಅವರಿಗೆ ಒಕ್ಕಲಿಗ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನ

Suddi Udaya
error: Content is protected !!