30.5 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮೋಹನ್ ಗೌಡ ನೇತೃತ್ವದಲ್ಲಿ ಕರ್ನಾಟಕ ಸಾವಯವ ಕೃಷಿ ಯೋಜ‌ನೆಯಿಂದ 150ಕ್ಕೂ ಹೆಚ್ಚು ಕೃಷಿಕರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಕೃಷಿಕ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ಸಾವಯವ ಕೃಷಿ ಯೋಜನೆಯ ವತಿಯಿಂದ 2026ನೇ ಸಾಲಿನ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳನ್ನು ಒಳಗೊಂಡ ಮಂಗಳೂರು ವಿಭಾಗದ 150ಕ್ಕೂ ಹೆಚ್ಚು ಕೃಷಿಕರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಕೃಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸೆ.21ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಿತು.

ಶ್ರೀಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ದುರ್ಗಾಂಬಾ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಮೋಹನದಾಸ ಸ್ವಾಮೀಜಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಅವರು ಕೃಷಿ ಪ್ರಶಸ್ತಿ ಸನ್ಮಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕರ್ನಾಟಕ ಸಾವಯವ ಕೃಷಿ ಯೋಜನೆಯ ಆಡಳಿತ ನಿರ್ದೇಶಕ ಮೋಹನ್ ಗೌಡ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳನ್ನು ಒಳಗೊಂಡ ಮಂಗಳೂರು ವಿಭಾಗದ 150ಕ್ಕೂ ಹೆಚ್ಚು ಕೃಷಿಕರನ್ನು ಜಿಲ್ಲಾ ಮಟ್ಟದ ಅತ್ಯುತ್ತಮ ಕೃಷಿಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಾವಯವ ಕೃಷಿ, ಕೃಷಿ ಕ್ಷೇತ್ರದಲ್ಲಿನ ಸಾಧನೆ ಹಾಗೂ ಕೃಷಿ ಚಟುವಟಿಕೆಗಳಿಗೆ ನೀಡಿದ ಕೊಡುಗೆಗಳನ್ನು ಗುರುತಿಸಿ ಕೃಷಿಕರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಕಸ್ತೂರಿ ರಂಗನ್ ಹೋರಾಟ ಸಮಿತಿ ಸಂಚಾಲಕ ಕಿಶೋರ್ ಗೌಡ ಶಿರಾಡಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು, 2025ನೇ ಸಾಲಿನ ಕೃಷಿ ಪ್ರಶಸ್ತಿ ಸನ್ಮಾನಿತರಾದ ನಿವೃತ್ತ ಸೈನಿಕ ಅಮ್ಮಣ್ಣ ರೈ ಪುತ್ತೂರು, ಪೊಸಂದೊಡಿ ದುಗ್ಗಪ್ಪ ಗೌಡ, 2025ನೇ ಸಾಲಿನ ಕೃಷಿ ಪ್ರಶಸ್ತಿ ವಿಜೇತರಾದ ಮಾಳ ವಿನೀತ್ ಹೆಗ್ಡೆ, ರಾಮಮೂರ್ತಿ ಕಲ್ಕೂರ್ ಹೆಬ್ರಿ, ಲ್ಯಾನ್ಸಿ ಪಿರೇರಾ ಬಂಟ್ವಾಳ, ಆನಂದ ಸಿ.ಎಚ್. ಕಾರಡ್ಕ, ಮನ್ಮಥ ನಾಯಕ್ ಹೆಬ್ರಿ, ಸತೀಶ್ ಹೆಗ್ಡೆ ಕುಂದಾಪುರ, ಕೃಷ್ಣ ಭಟ್ ಎಡನೀರು ಉಪಸ್ಥಿತರಿದ್ದರು.


ದ.ಕ. ಹಿರಿಯ ಮುಖ್ಯಾಧಿಕಾರಿ ಭಾರತಿ ರೈ ಪುತ್ತೂರು, ಉಡುಪಿ ಹಿರಿಯ ಮುಖ್ಯಾಧಿಕಾರಿ ಶಾರದಾ ಶೆಟ್ಟಿ ಕಾರ್ಕಳ, ಕಾಸರಗೋಡು ಜಿಲ್ಲಾ ಹಿರಿಯ ಅಧಿಕಾರಿ ಪೂರ್ಣಿಮಾ ಅಡೂರ್ ಹಾಗೂ ಕರ್ನಾಟಕ ಸಾವಯವ ಕೃಷಿ ಯೋಜನೆಯ ಸಹ ಆಡಳಿತ ನಿರ್ದೇಶಕಿ ಅಶ್ವಿನಿ ಮೋಹನ್ ಕುಮಾರ್ ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿಗಳು, ಕೃಷಿಕರು ಸಹಕರಿಸಿದರು.

Related posts

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ರೈತ ವಿರೋಧಿ ಕಾಂಗ್ರೆಸ್ ಸರಕಾರದ ನಿಲುವು ವಿರೋಧಿಸಿ ರೈತ ಮೋರ್ಚಾರವರಿಂದ ತಹಶೀಲ್ದಾರರ ಮುಖಾಂತರ ಸಿ.ಎಂ ಸಿದ್ದರಾಮಯ್ಯರಿಗೆ ಮನವಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ್‌

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಕಾಲೇಜು : ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪೂರ್ವಾಭ್ಯಾಸ ಶಿಬಿರ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!