30.5 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ್ತೂರಿ ರಂಗನ್ ವರದಿ: ಶಿರ್ಲಾಲು ಗ್ರಾಮ ಪಂಚಾಯತ್ ವಿಶೇಷ ಸಭೆಗೆ ಅಧಿಕಾರಿಗಳ ಗೈರು; ಗ್ರಾಮಸ್ಥರ ಆಕ್ರೋಶ

ಶಿಲಾ೯ಲು: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶಗಳ ಘೋಷಣೆ ಕುರಿತು ಕೇಂದ್ರ ಪರಿಸರ , ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಕಸ್ತೂರಿ ರಂಗನ್ ವರದಿಯ ಅಧಿಸೂಚನೆ ಹೊರಡಿಸಿದ್ದು , ಇದರ ವಿರುದ್ಧ ಶಿರ್ಲಾಲು ಗ್ರಾಮ ಪಂಚಾಯತ್ ನ ವಿಶೇಷ ಗ್ರಾಮಸಭೆಗೆ ಯಾವುದೇ ಇಲಾಖೆಯ ಅಧಿಕಾರಿಗಳು ಭಾಗವಹಿಸದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಇಂದು ಶಿರ್ಲಾಲಿನಲ್ಲಿ ನಡೆದಿದೆ ‌.

ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗಳ ಸೂಚನೆಯಂತೆ ತಾಲೂಕಿನ ಕಸ್ತೂರಿ ರಂಗನ್ ವರದಿ ಭಾದಿತ ಪ್ರದೇಶಗಳ ಗ್ರಾಮ ಪಂಚಾಯತ್ ಗಳಲ್ಲಿ ವಿಶೇಷ ಗ್ರಾಮಸಭೆ ನಡೆಸಲು ಆದೇಶ ನೀಡಲಾಗಿತ್ತು. ಅದರಂತೆ ಇಂದು ಶಿರ್ಲಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ವಿಶೇಷ ಗ್ರಾಮಸಭೆ ಏರ್ಪಡಿಸಲಾಗಿತ್ತು. ಸಂತ್ರಸ್ತರು ಕೂಡ ನೂರಾರು ಸಂಖ್ಯೆಯಲ್ಲಿ ಬೆಳಗ್ಗೆ 10 ಘಂಟೆಗೆ ಗ್ರಾಮ ಪಂಚಾಯತ್ ನಲ್ಲಿ ರಾಜರಿದ್ದರು. ಆದರೆ ಮಧ್ಯಾಹ್ನ 12 ಘಂಟೆ ತನಕವೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಯಾವುದೇ ಇಲಾಖೆಯ ಒಬ್ಬನೇ ಒಬ್ಬ ಅಧಿಕಾರಿಗಳು ವಿಶೇಷ ಗ್ರಾಮಸಭೆಗೆ ಹಾಜರಾಗದಿರುವುದು ಜನರನ್ನು ಆತಂಕದ ಜೊತೆಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ‌.

ಸಭೆ ಕರೆದು ರಜೆ ಹಾಕಿದ ಪಿಡಿಓ: ಕಸ್ತೂರಿ ರಂಗನ್ ಅಧಿಸೂಚನೆ ವಿರುದ್ಧ ಸಪ್ಟೆಂಬರ್ 21 ರಂದು ಶಿರ್ಲಾಲು ಗ್ರಾಮದ ವ್ಯಾಪ್ತಿಗೆ ಒಳಪಟ್ಟ ಗ್ರಾಮಸ್ಥರ ಆಕ್ಷೇಪಣೆ , ಸಲಹೆ ಪಡೆಯುವ ನಿಟ್ಟಿನಲ್ಲಿ ವಿಶೇಷ ಗ್ರಾಮಸಭೆಯನ್ನು ಶಿರ್ಲಾಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಶೀಲಾ ಆಯೋಜಿಸಿದ್ದರು. ಆದರೆ ಅವರು ಕೆಲಸಕ್ಕೆ ರಜೆ ಹಾಕಿದ್ದರು.


ಇತರ ಅಧಿಕಾರಿಗಳು ಗೈರು: ವಿಶೇಷ ಗ್ರಾಮಸಭೆಯಲ್ಲಿ ಅರಣ್ಯ , ಕಂದಾಯ , ಕೃಷಿ , ತೋಟಗಾರಿಕೆ ಸೇರಿದಂತೆ ಕೆಲವು ಅಗತ್ಯವಾದ ಇಲಾಖೆಗಳು ಹಾಜರಿರದೆ ಮಧ್ಯಾಹ್ನ 1 ಘಂಟೆಯ ಹೊತ್ತಿಗೆ ಶಿರ್ಲಾಲು ಗ್ರಾಮ ಪಂಚಾಯತ್ ನ ಆಡಳಿತಾಧಿಕಾರಿ ಮಂಜುನಾಥ್ ಮತ್ತು ಸಹಾಯಕ ಅರಣ್ಯಾಧಿಕಾರಿ ಹರಿಪ್ರಸಾದ್ ಆಗಮಿಸಿದರು. ಇದು ಕೂಡ ಜನರ ಆಕ್ರೋಶಕ್ಕೆ ಕಾರಣವಾಯಿತು.

ವಿಶೇಷ ಗ್ರಾಮಸಭೆ ನಿಗದಿ ಮಾಡಿದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸಂಜೀವಿನಿ ಒಕ್ಕೂಟದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು , ಇದರಿಂದಾಗಿ ಜನರು ಪಂಚಾಯತ್ ಕಚೇರಿ ಎದುರು ಬಿಸಿಲಿನಲ್ಲಿ ನಿಲ್ಲುವಂತಾಯಿತು. ಈ ಆಕ್ರೋಶಿತ ಜನರು ಪಂಚಾಯತ್ ಕಚೇರಿ ಬಾಗಿಲ ಎದುರು ಕುಳಿತು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ರಕ್ಷಿತ್ ಶಿವರಾಂ ಭೇಟಿ: ವಿಶೇಷ ಗ್ರಾಮಸಭೆಗೆ ಅಧಿಕಾರಿಗಳು ಗೈರು ಹಾಜರಿ ಬಗ್ಗೆ ಸಂತ್ರಸ್ತರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಮಾಹಿತಿ ನೀಡಿದ್ದು , ಮಂಗಳೂರಿನ ಕಾರ್ಯಕ್ರಮವೊಂದನ್ನು ಮುಗಿಸಿ ನೇರವಾಗಿ ಶಿರ್ಲಾಲು ಪಂಚಾಯತ್ ಗೆ ಆಗಮಿಸಿದರು. ಈ ಸಂದರ್ಭದಲ್ಲಿ ಹಾಜರಿದ್ದ ಆಡಳಿತಾಧಿಕಾರಿಯವನ್ನು ತರಾಟೆಗೆ ತೆಗೆದುಕೊಂಡರು. ಜನರ ಭವಿಷ್ಯದ ಬಗ್ಗೆ ಕಾಳಜಿ ಇಲ್ಲದ ಅಧಿಕಾರಿಗಳು ರಾಜಿನಾಮೆ ನೀಡಿ ಮನೆಗೆ ನಡೆಯಿರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳದಿಂದಲೇ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರವರಿಗೆ ದೂರವಾಣಿ ಕರೆ ಮಾಡಿದ್ದು , ಕಸ್ತೂರಿ ರಂಗನ್ ವಿಶೇಷ ಗ್ರಾಮಸಭೆಯ ಬಗ್ಗೆ ನಿರ್ಲಕ್ಷ್ಯ ವಹಿಸಿರುವ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಸಪ್ಟೆಂಬರ್ 23 ರಂದು ಮತ್ತೆ ಗ್ರಾಮಸಭೆ: ಅಧಿಕಾರಿಗಳ ನಿರ್ಲಕ್ಷ್ಯತೆಯಿಂದ ಇಂದಿನ ಸಭೆ ರದ್ದುಗೊಳಿಸಿ , ಮತ್ತೆ ಸಪ್ಟೆಂಬರ್ 23 ರಂದು ಮತ್ತೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ವಿಶೇಷ ಕಸ್ತೂರಿ ರಂಗನ್ ಗ್ರಾಮಸಭೆ ನಡೆಸಲಾಗುತ್ತದೆ ಎಂದು ಆಡಳಿತಾಧಿಕಾರಿ ಮಂಜುನಾಥ್ ರವರು ಪ್ರಕಟಿಸಿದರು.

ಈ ಸಂದರ್ಭದಲ್ಲಿ ಕಸ್ತೂರಿ ರಂಗನ್ ವಿರೋಧಿ ಹೋರಾಟ ಸಮಿತಿಯ ಸಹ ಸಂಚಾಲಕರಾದ ಎಂ.ಕೆ ಪ್ರಸಾದ್ ಶಿರ್ಲಾಲು , ಜಯಾನಂದ ಪಿಲಿಕಲ , ಶೇಖರ್ ಲಾಯಿಲ , ತಾಲೂಕು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಪೂಜಾರಿ ಉಪಸ್ಥಿತರಿದ್ದರು.

Related posts

ವಿಶ್ವಕರ್ಮ ಜಯಂತಿ ಹಾಗೂ ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕಲ್ಮಂಜದಲ್ಲಿ ವಿಶೇಷ ಪೂಜೆ

Suddi Udaya

ಭಾರೀ ಮಳೆಗೆ ತೆಕ್ಕಾರು ಜುಮ್ಮಾ ಮಸೀದಿಯ ಆವರಣದ ತಡೆಗೋಡೆ ಕುಸಿತ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸ: ವಿ.ಪ. ಸದಸ್ಯ ಬಿ.ಕೆ. ಹರಿಪ್ರಸಾದ್ ರಿಗೆ ಆಹ್ವಾನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಸಭೆ

Suddi Udaya

ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!