30.5 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಸಂತಸದ ವಿಚಾರ: ದೇವೇಂದ್ರ ಹೆಗ್ಡೆ ಕೊಕ್ರಾಡಿ

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ರಾಜ್ಯಭಾಷೆಯಾಗಿ ಘೋಷಿಸಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ ಎಂದು ರಾಜ್ಯ ತುಳು ಮಹಾಸಭೆಯ ಅಂತಾರಾಷ್ಟ್ರೀಯ ಅಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ ತಿಳಿಸಿದ್ದಾರೆ.

ತುಳು ಭಾಷೆಗೆ ಅಧಿಕೃತ ಸ್ಥಾನಮಾನ ದೊರಕಲು ಹಲವು ವರ್ಷಗಳಿಂದ ತುಳು ಸಂಘಟನೆಗಳು, ಹಿರಿಯರು ಹಾಗೂ ವಿವಿಧ ಹೋರಾಟಗಾರರು ನಿರಂತರವಾಗಿ ಶ್ರಮಿಸುತ್ತಾ ಬಂದಿದ್ದಾರೆ. ಈ ಹೋರಾಟದಲ್ಲಿ ನಮ್ಮೊಂದಿಗೆ ಇದ್ದ ಅನೇಕ ಹಿರಿಯರು ಹಾಗೂ ಹೋರಾಟಗಾರರು ಇಂದು ನಮ್ಮೊಂದಿಗಿಲ್ಲ. ಅವರ ಆಶಯ ಮತ್ತು ಕನಸು ನನಸಾಗುವತ್ತ ಹೆಜ್ಜೆ ಇಟ್ಟಿರುವುದು ಸಂತಸದ ಸಂಗತಿಯಾಗಿದೆ ಎಂದು ಅವರು ಹೇಳಿದರು.

ತುಳು ಭಾಷೆಗೆ ಅಧಿಕೃತ ಸ್ಥಾನಮಾನ ದೊರಕಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸರ್ಕಾರದ ಪ್ರಯತ್ನವನ್ನು ಅಭಿನಂದಿಸುತ್ತೇನೆ. ಆದರೆ ಈ ನಿರ್ಧಾರಕ್ಕೆ ಅಧಿಕೃತ ದಾಖಲೆ ರೂಪದಲ್ಲಿ ರಾಜ್ಯಪಾಲರ ಅಂಕಿತ ದೊರಕುವ ಪ್ರಕ್ರಿಯೆ ಪೂರ್ಣಗೊಳ್ಳಬೇಕಿದೆ. ಆ ಬಳಿಕ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ದೊರಕಿದಂತಾಗಲಿದೆ ಎಂದು ಅವರು ತಿಳಿಸಿದರು.

ತುಳು ಭಾಷೆಗೆ ಅಧಿಕೃತ ಸ್ಥಾನಮಾನ ದೊರಕಬೇಕು ಎಂಬುದು ಹಲವು ವರ್ಷಗಳ ಚಿಂತನೆ ಹಾಗೂ ಬೇಡಿಕೆಯಾಗಿತ್ತು. ಈ ನಿಟ್ಟಿನಲ್ಲಿ ಹಿರಿಯರು, ತುಳು ಸಂಘಟನೆಗಳು ಹಾಗೂ ವಿವಿಧ ಸಂಸ್ಥೆಗಳು ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿವೆ. ಇದೀಗ ಆ ಪ್ರಯತ್ನಗಳಿಗೆ ಫಲ ದೊರಕುವ ಕಾಲ ಸನ್ನಿಹಿತವಾಗಿದೆ. ಇದಕ್ಕಾಗಿ ಹೋರಾಟ ನಡೆಸಿದ ಎಲ್ಲ ಸಂಘಟನೆಗಳು, ಹಿರಿಯರು ಹಾಗೂ ತುಳುಪರ ಹೋರಾಟಗಾರರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ದೇವೇಂದ್ರ ಹೆಗ್ಡೆ ಕೊಕ್ರಾಡಿ ತಿಳಿಸಿದ್ದಾರೆ.

Related posts

ಕನ್ಯಾಡಿ -2 ಸ.ಉ. ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಡೆಂಗ್ಯೂ ಜಾಗೃತಿ- ಡಾ. ಕಲಾಮಧು ದಂಪತಿಗಳಿಗೆ ಸನ್ಮಾನ

Suddi Udaya

ಶಿರ್ಲಾಲು: ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ : ಹರೀಶ್ ಪೂಂಜ

Suddi Udaya

ಬಳ್ಳಮಂಜ ವಿದ್ಯಾಸಾಗರ ಸಿ.ಬಿ.ಎಸ್ಇ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

Suddi Udaya
error: Content is protected !!