29.4 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದ ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಬೆಳ್ತಂಗಡಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದ್ದು, ವಿಶೇಷ ತನಿಖಾ ತಂಡ (SIT) ರಚಿಸಿ ಮೂರು ತಿಂಗಳೊಳಗೆ ತನಿಖಾ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದೆ. ಪ್ರಕರಣ ನಡೆದು 14 ವರ್ಷಗಳ ಬಳಿಕ ಮರು ತನಿಖೆಗೆ ನ್ಯಾಯಾಲಯ ಆದೇಶ ನೀಡಿರುವುದು ಒಂದು ಮಹತ್ವದ ಬೆಳವಣಿಗೆಯಾಗಿದೆ.

2012ರ ಅಕ್ಟೋಬರ್ 9ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆಗೀಡಾಗಿದ್ದರು. ಪ್ರಕರಣದ ತನಿಖೆಯನ್ನು ಆರಂಭದಲ್ಲಿ ಸ್ಥಳೀಯ ಪೊಲೀಸರು ನಡೆಸಿದ್ದು, ಬಳಿಕ ಸಿಐಡಿ ಹಾಗೂ ಸಿಬಿಐಗೆ ವಹಿಸಲಾಗಿತ್ತು. ಸಿಬಿಐ ತನಿಖೆಯ ಬಳಿಕ ಸಂತೋಷ್ ರಾವ್ ಅವರನ್ನು ಆರೋಪಿಯನ್ನಾಗಿ ಮಾಡಲಾಗಿತ್ತು. ಆದರೆ, 2023ರ ಜೂನ್ 16ರಂದು ಸಿಬಿಐ ವಿಶೇಷ ನ್ಯಾಯಾಲಯವು ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿತ್ತು.

ಖುಲಾಸೆ ಬಳಿಕ ಪ್ರಕರಣದ ನೈಜ ಆರೋಪಿಗಳನ್ನು ಪತ್ತೆಹಚ್ಚಲು ಮರುತನಿಖೆ ನಡೆಸಬೇಕೆಂಬ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿತ್ತು. ಸೌಜನ್ಯ ಕುಟುಂಬವೂ ಮರುತನಿಖೆಗೆ ಆಗ್ರಹಿಸಿತ್ತು. 2024ರಲ್ಲಿ ಕರ್ನಾಟಕ ಹೈಕೋರ್ಟ್‌ನಲ್ಲಿ ಮರುತನಿಖೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆದಿತ್ತು.

2026ರಲ್ಲಿ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಮರುತನಿಖೆ ನಡೆಸುವ ವಿಧಾನ ಮತ್ತು ಯಾವ ತನಿಖಾ ಸಂಸ್ಥೆಯ ಮೂಲಕ ತನಿಖೆ ನಡೆಸಬೇಕು ಎಂಬ ವಿಚಾರದಲ್ಲಿ ವಾದ-ಪ್ರತಿವಾದಗಳು ನಡೆದಿದ್ದವು. ರಾಜ್ಯ ಸರ್ಕಾರವೂ ಅಗತ್ಯವಿದ್ದಲ್ಲಿ SIT ರಚಿಸಲು ಸಿದ್ಧವಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿತ್ತು.

ಇದೀಗ ಸುಪ್ರೀಂ ಕೋರ್ಟ್ SIT ಮೂಲಕ ಮರುತನಿಖೆಗೆ ಅವಕಾಶ ನೀಡಿದ್ದು, ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಿರುವುದು ಪ್ರಕರಣದಲ್ಲಿ ಮಹತ್ವದ ತಿರುವಾಗಿದೆ. ತನಿಖೆಯ ಬಳಿಕ ಸೌಜನ್ಯ ಪ್ರಕರಣದ ನೈಜ ಘಟನೆಗಳ ಕುರಿತು ಯಾವ ಅಂಶಗಳು ಬೆಳಕಿಗೆ ಬರುತ್ತವೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

Related posts

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹೋರಾಟ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ, ಮನವಿ ಸಲ್ಲಿಕೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ: ಹಿರಿಯ ಸಂಶೋಧಕ ಡಾ. ಎಸ್.ಡಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ಮೊಗ್ರು : ಮುಗೇರಡ್ಕ ದೈವಸ್ಥಾನ ವತಿಯಿಂದ ಮುಗೇರಡ್ಕ ಮುಳುಗು ಸೇತುವೆ ಸಂಚಾರಕ್ಕೆ ಮುಕ್ತ

Suddi Udaya

ದಸ್ಕತ್ ಸಿನೆಮಾ ನಿರ್ದೇಶಕರಿಂದ ಹೊಸ ಚಿತ್ರ ‘ಅಜ್ಜಿಕಥೆ’ : ದುಬೈನಲ್ಲಿ ಚಿತ್ರದ ಶೀರ್ಷಿಕೆ ಅನಾವರಣ

Suddi Udaya

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡೆರೆಗೌಜಿ-ಗಮ್ಮತ್ ಉದ್ಘಾಟನೆ: ಮಾಜಿ ಸೈನಿಕರಿಗೆ ಸಂಘದ ವತಿಯಿಂದ ಗೌರವಾಪ೯ಣೆ – ಆದ್ದೂರಿಯಾಗಿ ನಡೆದ ತುಳು ಜಾನಪದ ಶೈಲಿಯ ಪಥ ಸಂಚಲನ

Suddi Udaya
error: Content is protected !!