30.5 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯ: ಕಾಡುಹಂದಿ ಬೇಟೆ: ಆರೋಪಿಯ ಬಂಧನ: ಬೇಟೆಗೆ ಬಳಸಿದ ಪರಿಕರಗಳ ವಶ

ಬೆಳ್ತಂಗಡಿ: ತಾಲೂಕಿನ ನೆರಿಯ ಗ್ರಾಮದ ಮುಚ್ಚರಾಳಿ ಎಂಬಲ್ಲಿ ಕಾಡುಹಂದಿಯನ್ನು ಬೇಟೆಯಾಡಿ, ಮಾಂಸ ಮಾಡಿ ದಾಸ್ತಾನಿಟ್ಟಿದ್ದ ಆರೋಪದ ಮೇಲೆ ಓರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ನೆರಿಯ ಗ್ರಾಮದ ಮುಚ್ಚಳ್ಳಿ ಮನೆ ನಿವಾಸಿ ಕುಕ್ಕಪ್ಪ ಗೌಡ ಅವರ ಪುತ್ರ ಸುರೇಶ್ ಎಂ.ಕೆ. (38) ಬಂಧಿತ ಆರೋಪಿ. ಸೆ.20ರಂದು ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಕಾಡುಹಂದಿ ಬೇಟೆಯಾಡಿರುವುದು ಪತ್ತೆಯಾಗಿದ್ದು, ಆರೋಪಿಯಿಂದ ಬೇಟೆಗೆ ಬಳಸಿದ್ದ ಕೋವಿ, ಕತ್ತಿ ಹಾಗೂ ಇತರ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಮಹೇಶ್ ಎಂ. ದೇವಡಿಗ ಅವರ ಮಾರ್ಗದರ್ಶನದಲ್ಲಿ ನೆರಿಯ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ರವಿಚಂದ್ರ ಅವರು ತನಿಖೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪತ್ತೆ ಕಾರ್ಯದಲ್ಲಿ ಉಪ ವಲಯ ಅರಣ್ಯಾಧಿಕಾರಿಗಳಾದ ಕಮಲಾ, ದೀಪಾ ವಿ. ಗಡಗಿ,ರಂಜಿತ್ ಕುಮಾರ್ ಎಸ್., ಪಿ.ಜಿ.ನಾಗೇಶ್ ಗೌಡ ಹಾಗೂ ಗಸ್ತು ಅರಣ್ಯ ಪಾಲಕ ವೀರೇಶ್ ಸಹಕರಿಸಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಧೀಶರ ಸಮಕ್ಷಮ ಹಾಜರುಪಡಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

Related posts

ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ: ನಿನ್ನಿಕಲ್ಲು ಗುಡ್ಡ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜನ ಸಹಭಾಗಿತ್ವದಲ್ಲಿ 8ನೇ ವರ್ಷದ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16529 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶಿಶಿಲ ದೇವಾಲಯದ ಸಮಿತಿ ರಚನೆ ಕುರಿತು ಬಿ.ಜಯರಾಮ ನೆಲ್ಲಿತ್ತಾಯ ರಿಂದ ಪ್ರಧಾನಮಂತ್ರಿ ಸಾರ್ವಜನಿಕ ಹಿತಾಸಕ್ತಿ ವಿಭಾಗಕ್ಕೆ ದೂರು ಸಲ್ಲಿಕೆ

Suddi Udaya

ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಮನೋವಿಜ್ಞಾನ ವಿಭಾಗಕ್ಕೆ ಪ್ರತಿಷ್ಠಿತ “ಇನ್‌ಸ್ಪಾ” ಶೈಕ್ಷಣಿಕ ಉತ್ಕೃಷ್ಟತಾ ಪ್ರಶಸ್ತಿ

Suddi Udaya

ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನಲ್ಲಿ ವನಮಹೋತ್ಸವ

Suddi Udaya
error: Content is protected !!