ಉಜಿರೆ: ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಎಸ್‌ಡಿಎಂ ಇಂಗ್ಲಿಷ್ ಮೀಡಿಯಂ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ) ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ರನ್ನರ್-ಅಪ್ ಸ್ಥಾನ ಪಡೆದುಕೊಂಡಿತು.
ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಶಾಲೆಯ ಆರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಆರ್. ಸುಮಂತ್, ಮಹಮ್ಮದ್ ಶಕೀಲ್, ಅಭಿಷೇಕ್, ಸಮರ್ಥ್ ಜಿ. ಭಟ್, ಗೌತಮ್, ಧೀರಜ್ ಆರ್. ಗೌಡ ಆಯ್ಕೆಯಾದ ವಿದ್ಯಾರ್ಥಿಗಳು.
ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾವಳಿ ಸೆ. 27ರಂದು ನಡೆಯಲಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ, ಮುಂದಿನ ಹಂತದ ಸ್ಪರ್ಧೆಗೆ ಶುಭ ಹಾರೈಸಿದರು.











