28.6 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್ ಡಿ ಎಂ ತಾಂತ್ರಿಕ ಕಾಲೇಜು ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರಶಿಕ್ಷಣ ಕಾರ್ಯಕ್ರಮ

ಉಜಿರೆ: ಉಜಿರೆಯ ಎಸ್ ಡಿ ಎಂ ಶಿಕ್ಷಣ ಸಂಸ್ಥೆ ಸೇರುವ ನಿಮ್ಮ ನಿರ್ಧಾರ ವ್ಯಕ್ತಿತ್ವ ರೂಪಿಸಿಕೊಳ್ಳಲು ಒಳ್ಳೆಯ ಮಾರ್ಗ ಬದುಕನ್ನು ಕಟ್ಟಿಕೊಳ್ಳಲು ಶಿಕ್ಷಣದ ಜತೆಗೆ ಕಲಿಕೆ,ಜೀವನ ,ವ್ಯಕ್ತಿತ್ವ ನಿರ್ಮಾಣ ,ನಿರೀಕ್ಷೆಯೊಂದಿಗೆ ಜವಾಬ್ದಾರಿಯೂ ಇದೆ. ಸಂಸ್ಕಾರದಿಂದ ಜೀವನದಲ್ಲಿ ಸವಾಲುಗಳನ್ನು ಎದುರಿಸುವ ಶಕ್ತಿ ಬರುತ್ತದೆ. ವ್ಯಕ್ತಿತ್ವ ರೂಪಿಸಿಕೊಳ್ಳಲು ಪ್ರಾಮಾಣಿಕತೆಯೂ ಪ್ರಮುಖ ಕಾರಣ. ಪಠ್ಯದ ಜತೆಗೆ ಇತರ ಚಟುವಟಿಕೆಗಳೊಂದಿಗೆ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಕೇರಳ ಸೆಂಟ್ರಲ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿದ್ದು ಪಿ .ಅಲಗೂರು ನುಡಿದರು. ಅವರು ಸೆ 19ರಂದು ಉಜಿರೆ ಎಸ್ ಡಿ ಎಂ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಎಸ್ ಡಿ ಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ ವರ್ಷದ ಇಂಜಿನೀಯರಿಂಗ್ ವಿದ್ಯಾರ್ಥಿಗಳ ಪ್ರಶಿಕ್ಷಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ನಿಮ್ಮಲ್ಲಿ ಆತ್ಮವಿಶ್ವಾಸವಿರಲಿ. ಪ್ರಾಮಾಣಿಕತೆ,ನಿರ್ಮಲ ಮನಸ್ಸು, ದೊಡ್ಡ ಕನಸು ಕಂಡು ,ಸಮಯಕ್ಕನುಸಾರ ಮನಸ್ಥಿತಿಯನ್ನು ಬದಲಿಸಿ ಮೊದಲು ಮಾನವೀಯತೆಯ ಮಾನವನಾಗಿ , ಮನುಷ್ಯತ್ವವಿರುವ ಮನುಷ್ಯರಾಗಿ ಬದುಕು ಸಾರ್ಥಕಪಡಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಶಿಕ್ಷಣ ಸಂಸ್ಥೆ ಶಿಸ್ತಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತದೆ. ಬದುಕಿನಲ್ಲಿ ಶಿಸ್ತು ಅತ್ಯವಶ್ಯ. ಸಂಸ್ಕಾರಯುತ ವೈವಿಧ್ಯಮಯ ಶಿಕ್ಷಣ ವ್ಯವಸ್ಥೆಗೆ ಹೊಂದಿಕೊಳ್ಳುವುದು ಮುಖ್ಯ. ಆರೋಗ್ಯದ ಬಗೆಗೆ ಕಾಳಜಿ,ಗಮನ ಹರಿಸುತ್ತೇವೆ. ಯಾವುದೇ ಕೀಳರಿಮೆ, ಭಯ ಬಿಟ್ಟು ,ಯಾವುದೇ ಮಾತಿಗೆ ಕಿವಿಗೊಡದೆ ಒಳ್ಳೆಯ ಸಂಸ್ಥೆಗೆ ಸೇರಿದ್ದೇವೆ ಎಂಬ ಒಳ್ಳೆಯ ಮನಸ್ಸಿನಲ್ಲಿ ಜ್ಞಾನದೀಪದ ಮೆಟ್ಟಿಲನ್ನೇರಿ ಜ್ಞಾನವಂತರಾಗಿ ಹೊರಬನ್ನಿ ಎಂದು ಶುಭ ಹಾರೈಸಿದರು. ಕಾಲೇಜು ಪ್ರಾಂಶುಪಾಲ ಡಾ!ಸಂದೀಪ್ ಆರ್ ಅಧ್ಯಕ್ಷತೆ ವಹಿಸಿ, ಪ್ರಸ್ತಾವಿಸಿ, ಕಾಲೇಜು ನಡೆದು ಬಂದ ಹಾದಿಯ ಕುರಿತು ಪರಿಪೂರ್ಣ ಮಾಹಿತಿ ನೀಡಿದರು . ಕಾಲೇಜಿನ ಉಪಪ್ರಾಂಶುಪಾಲ ಡಾ| ಗಿರೀಶ್ ಕುಮಾರ್ ಸ್ವಾಗತಿಸಿ, ಪ್ರಥಮ ವರ್ಷದ ಡೀನ್ ಡಾ. ನವೀನ ಕುಮಾರ್ ವಂದಿಸಿದರು. ಪ್ರಥಮ ವರ್ಷದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಗ್ರಾಮೀಣ ಕುಶಲ ಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಸಾಧನಾ ಸಲಕರಣೆ ವಿತರಣೆ

Suddi Udaya

ಡಿ.5 : ನೇತ್ರಾನಗರ ಧರ್ಮಸ್ಥಳದಲ್ಲಿ “ಯಾತ್ರಾ ಆತಿಥ್ಯ” ಶುಭಾರಂಭ: ಪ್ರವಾಸಿಗರಿಗೆ, ಯಾತ್ರಾರ್ಥಿಗಳಿಗೆ ಅನುಕೂಲ, ಸುಮಾರು 108 ರೂಮ್ಸ್

Suddi Udaya

ಬೆಳ್ತಂಗಡಿ ವರ್ತಕರ ಸಂಘ ಹಾಗೂ ಬೆಳ್ತಂಗಡಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ವತಿಯಿಂದ ಸ್ವಾತಂತ್ರ ದಿನಾಚರಣೆ

Suddi Udaya

ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ

Suddi Udaya

ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾ.ಪಂ. ವ್ಯಾಪ್ತಿಯ ಅಭಿಮಾನಿಗಳಿಂದ ಶಾಸಕ ಹರೀಶ್ ಪೂoಜರವರ ಹುಟ್ಟುಹಬ್ಬ ಆಚರಣೆ

Suddi Udaya
error: Content is protected !!