28.6 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಕ್ಷಭಾರತಿ ಸರಣಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ತಾಳಮದ್ದಳೆ

ಕನ್ಯಾಡಿ : ಯಕ್ಷಭಾರತಿ ಸಂಸ್ಥೆಯ ಉದ್ದೇಶಿತ ಸಂಘ ಶತಾಬ್ದಿ ನಿಮಿತ್ತ ನಡೆಯುವ ಸರಣಿ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮ ಸೆ.18 ರಂದು ಕನ್ಯಾಡಿ ನೇರೋಳ್ ಪಲ್ಕೆ ಮಾತೃಶ್ರೀಯಲ್ಲಿ ನಡೆಯಿತು.

ಪುತ್ತೂರು ಜಿಲ್ಲಾ ಸಂಘ ಚಾಲಕರಾದ ವಿನಯಚಂದ್ರ ಅವರು ದೀಪ ಪ್ರಜ್ವಲಿಸುವುದರ ಮೂಲಕ ಸರಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಗುಮಂತು ಕಾರ್ಯ ಪ್ರಮುಖ್ ಸುದರ್ಶನ್ ಕೆ. ವಿ ಉಪಸ್ಥಿತರಿದ್ದರು. ಯಕ್ಷಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಯೋಜಿಸುವಲ್ಲಿ ಸಹಕರಿಸಿದ ಸಂಸ್ಥೆಯ ಟ್ರಸ್ಟಿ ಶಶಿಧರ ಕನ್ಯಾಡಿ ಮತ್ತು ಶ್ರೀಮತಿ ಮಮತಾ ದಂಪತಿಗಳನ್ನು ಗೌರವಿಸಲಾಯಿತು.


ಸಂಸ್ಥೆಯ ಕಾರ್ಯದರ್ಶಿ ದಿವಾಕರ ಆಚಾರ್ಯ ಅವರು ಕಾರ್ಯಕ್ರಮ ನಿರೂಪಿಸಿದರು. ಶ್ರೀನಿವಾಸ್ ರಾವ್ ಕಲ್ಮಂಜ ವಂದೇಮಾತರಂ ಹಾಡಿದರೆ, ಟ್ರಸ್ಟಿ ರವೀಂದ್ರ ಶೆಟ್ಟಿ ವಂದಿಸಿದರು. ಯಕ್ಷಭಾರತಿ ಟ್ರಸ್ಟಿಗಳು, ಸದಸ್ಯರು ಉಪಸ್ಥಿತರಿದ್ದರು.

ಬಳಿಕ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ತಾಳಮದ್ದಳೆ “ಸುದರ್ಶನ ಗರ್ವಭಂಗ” ಆಖ್ಯಾನ ನಡೆಯಿತು.

ಭಾಗವತರಾಗಿ ಮಹೇಶ್ ಕನ್ಯಾಡಿ, ಚೆಂಡೆ ಮದ್ದಳೆಯಲ್ಲಿ ಜಗನ್ನಿವಾಸ ರಾವ್ ಪುತ್ತೂರು, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ ಚಕ್ರತಾಳದಲ್ಲಿ ಕೌಸ್ತುಭ ಕನ್ಯಾಡಿ ಸಹಕರಿಸಿದರು.

ಮುಮ್ಮೇಳದಲ್ಲಿ ವಿಷ್ಣುವಾಗಿ ರಾಧಾಕೃಷ್ಣ ಕಲ್ಚಾರ್, ಲಕ್ಷ್ಮಿಯಾಗಿ ಹರೀಶ್ ಬಳಂತಿಮೊಗರು, ಸುದರ್ಶನನಾಗಿ ಸುಣ್ಣಂಬಳ ವಿಶ್ವೇಶ್ವರ ಭಟ್, ಶತ್ರುಪ್ರಸೂಧನನಾಗಿ ಸುರೇಶ ಕುದ್ರೆಂತ್ತಾಯ, ದೇವೇಂದ್ರನಾಗಿ ಹರಿದಾಸ ಗಾಂಭೀರ ಪಾತ್ರ ನಿರ್ವಹಿಸಿದರು.

Related posts

ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ವರ್ಗಾವಣೆ

Suddi Udaya

ಉರುವಾಲು: ಹಲೇಜಿ ನಿವಾಸಿ ಲಲಿತಾ ನಿಧನ

Suddi Udaya

ಉಜಿರೆ ಎಸ್ ಡಿ ಎಂ ಪಿ.ಯು ಕಾಲೇಜಿನಲ್ಲಿ ಯೋಗ ಶಿಬಿರ ಸಮಾರೋಪ 

Suddi Udaya

ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಕಂಬಳ: ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯರ ಕೋಣಗಳು, ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ, ಒಂದು ಲಕ್ಷ ನಗದು, 16 ಗ್ರಾಂ ಚಿನ್ನ ಮತ್ತು ಟ್ರೋಫಿ

Suddi Udaya

ರೂ. 1.50 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿದೆ ಕನಸಿನ ಹೊಸ ʻಭವ್ಯ ಕುಲಾಲ ಸಮುದಾಯ ಭವನʼ:ಮಾ.19 ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಮೊರಾರ್ಜಿ ದೇಸಾಯಿ/ಇಂದಿರಾಗಾಂಧಿ/ ಡಾ. ಬಿಆರ್ ಅಂಬೇಡ್ಕರ್/ನಾರಾಯಣ ಗುರು ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!