September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 2025/26ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಸಜೀಪಮೂಡ ಸುಭಾಷ್ ನಗರದ ಶ್ರೀ ಗುರು ಕಲ್ಯಾಣ ಮಂಟಪದಲ್ಲಿ ನಡೆಯಿತು.

ಸಂಸ್ಥೆಯು ಕಳೆದ ಸಾಲಿನಲ್ಲಿ 18523 ಸದಸ್ಯರು 395,49,75,346.49 ರೂ. ವ್ಯವಹಾರವನ್ನು ಮಾಡಿ 34,80,251.51 ರೂ. ಲಾಭ ಗಳಿಸಿದೆ. ಸದಸ್ಯರಿಗೆ ಶೇ.25 ಡಿವಿಡೆಂಟ್ ಘೋಷಿಸಿದೆ. ಸಹಕಾರಿ ಸಂಘವು ಕಳೆದ 21 ವರ್ಷಗಳಿಂದ ತಾಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿ 18 ಶಾಖೆಯನ್ನು ಹೊಂದಿದೆ. ಸುದ್ದಿಸಂಸ್ಥೆಯಿಂದ “ಕರ್ನಾಟಕ ಐಡಲ್” ಪ್ರಶಸ್ತಿ ಪುರಸ್ಕೃತರಾದ ಕೆ.ಸಂಜೀವ ಪೂಜಾರಿ ಅವರನ್ನು ಸಂಘದ ಆಡಳಿತ ಮಂಡಳಿ ವತಿಯಿಂದ ಸಮ್ಮಾನಿಸಲಾಯಿತು.

ಗೆಜ್ಜೆಗಿರಿ ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ಮುಖ್ಯ ಅತಿಥಿಗಳಾಗಿದ್ದರು. ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಮಮತಾ ಜಿ. ವಾರ್ಷಿಕ ವರದಿ ಮಂಡಿಸಿದರು. ಯಕ್ಷಗಾನ ಕಲಾವಿದ ಕಡಬ ದಿನೇಶ್ ರೈ ಅವರನ್ನು ಸಮ್ಮಾನಿಸಲಾಯಿತು. ಸಂಘದ ಮೂರ್ತೆದಾರರ ಸದಸ್ಯರನ್ನು ಗೌರವಿಸಲಾಯಿತು. ನೂರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.

ಸಂಘದ ಉಪಾಧ್ಯಕ್ಷ ವಿಠಲ ಬೆಳ್ಚಾಡ, ನಿರ್ದೇಶಕರಾದ ಸುಂದರ ಪೂಜಾರಿ, ರಮೇಶ್ ಅನ್ನಪ್ಪಾಡಿ, ಗಿರೀಶ್ ಕುಮಾರ್ ಪೆರ್ವ, ಜಯಶಂಕರ ಕಾನ್ಸಾಲೆ, ಕೆ. ಸುಜಾತ ಎಂ., ವಾಣಿ ವಸಂತ್, ಆಶಿಶ್ ಪೂಜಾರಿ, ಚಿದಾನಂದ ಎಂ.ಕಡೇಶ್ವಾಲ್ಯ, ಎಂ.ಕೆ.ಪ್ರಸಾದ್ ಉಪಸ್ಥಿತರಿದ್ದರು.

Related posts

ಕನ್ಯಾಡಿ: ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುತ್ತಮ ಅಂಕ ಪಡೆದ ಯಕ್ಷಿತಾರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya

ಫೆ 3 -7: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಸಂಸತ್ತು ಚುನಾವಣೆ

Suddi Udaya

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡೆರೆಗೌಜಿ-ಗಮ್ಮತ್ ಉದ್ಘಾಟನೆ: ಮಾಜಿ ಸೈನಿಕರಿಗೆ ಸಂಘದ ವತಿಯಿಂದ ಗೌರವಾಪ೯ಣೆ – ಆದ್ದೂರಿಯಾಗಿ ನಡೆದ ತುಳು ಜಾನಪದ ಶೈಲಿಯ ಪಥ ಸಂಚಲನ

Suddi Udaya

ಕಾಂಗ್ರೆಸ್ ಸರಕಾರ ರಚನೆ ಹಿನ್ನೆಲೆ: ಕೊಕ್ಕಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮೋತ್ಸವ

Suddi Udaya
error: Content is protected !!