September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿರಿಯರ ಹಲವು ದಶಕಗಳ ಹೋರಾಟಕ್ಕೆ ಸಂದ ಫಲ: ಸತೀಶ್ ಕೆ. ಕಾಶಿಪಟ್ಣ

ಬೆಳ್ತಂಗಡಿ: ತುಳುನಾಡಿನ ಆಚಾರ–ವಿಚಾರ, ಸಂಸ್ಕೃತಿ ಹಾಗೂ ಪರಂಪರೆ ಅತ್ಯಂತ ಶ್ರೀಮಂತವಾಗಿದ್ದು, ದೈವಾರಾಧನೆ, ದೇವರಾಧನೆ, ನಾಗಾರಾಧನೆ, ಯಕ್ಷಗಾನ, ಕಂಬಳ ಸೇರಿದಂತೆ ಇಲ್ಲಿನ ವಿಶಿಷ್ಟ ಆಚರಣೆಗಳು ಹಾಗೂ ಕಲಾ ಪ್ರಕಾರಗಳು ತುಳುನಾಡಿನ ವೈಶಿಷ್ಟ್ಯವನ್ನು ಜಗತ್ತಿಗೆ ಪರಿಚಯಿಸಿವೆ ಎಂದು ಬೆಳ್ತಂಗಡಿ ಕಾಂಗ್ರೆಸ್ ಅಧ್ಯಕ್ಷ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣ ಹೇಳಿದರು.

ತುಳು ಭಾಷೆ ತುಳುನಾಡಿನ ಜನರ ಬದುಕು, ಭಾವನೆ, ಸಂಸ್ಕೃತಿ, ಪರಂಪರೆ ಮತ್ತು ಜೀವನಶೈಲಿಯೊಂದಿಗೆ ಬೆಸೆದುಕೊಂಡಿರುವ ಜೀವಂತ ಭಾಷೆಯಾಗಿದೆ. ಪಾಡ್ದನ, ಜನಪದ ಸಾಹಿತ್ಯ, ದೈವಾರಾಧನೆ ಸೇರಿದಂತೆ ಹಲವು ಸಾಂಸ್ಕೃತಿಕ ಪರಂಪರೆಗಳು ತುಳು ಭಾಷೆಯ ಮೂಲಕವೇ ತಲೆತಲಾಂತರಗಳಿಂದ ಉಳಿದು ಬಂದಿವೆ. ಇಂತಹ ಶ್ರೀಮಂತ ಭಾಷೆಗೆ ಅಧಿಕೃತ ಸ್ಥಾನಮಾನ ದೊರೆತಿರುವುದು ತುಳುವರ ಪಾಲಿಗೆ ಅತ್ಯಂತ ಸಂತಸದ ಹಾಗೂ ಹೆಮ್ಮೆಯ ವಿಚಾರವಾಗಿದೆ ಎಂದರು.

ತುಳು ಭಾಷೆಗೆ ಅಧಿಕೃತ ಮಾನ್ಯತೆ ದೊರೆಯಬೇಕೆಂಬ ಬೇಡಿಕೆ ಹಲವು ದಶಕಗಳಿಂದಲೂ ಇದ್ದು, ಹಿರಿಯರು, ತುಳುಪರ ಸಂಘಟನೆಗಳು ಹಾಗೂ ಭಾಷಾಭಿಮಾನಿಗಳು ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿದ್ದಾರೆ. ಅವರ ಪರಿಶ್ರಮ ಮತ್ತು ಹೋರಾಟಕ್ಕೆ ಇದೀಗ ಐತಿಹಾಸಿಕ ಫಲ ದೊರೆತಿರುವುದು ಸಂತಸ ತಂದಿದೆ ಎಂದು ಅವರು ಹೇಳಿದರು.

ತುಳು ಭಾಷೆಗೆ ಈ ಐತಿಹಾಸಿಕ ಮಾನ್ಯತೆ ನೀಡುವ ಮಹತ್ವದ ನಿರ್ಧಾರ ಕೈಗೊಂಡ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಸರಕಾರಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲು ಸಂತೋಷಪಡುತ್ತೇನೆ ಎಂದು ಸತೀಶ್ ಕೆ. ಕಾಶಿಪಟ್ಣ ತಿಳಿಸಿದರು.

Related posts

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

Suddi Udaya

ಎಸ್.ಡಿ.ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದ ಪ್ರಾಂಶುಪಾಲ ಡಾ| ಪ್ರಶಾಂತ್ ಶೆಟ್ಟಿ ಹಾಗೂ ಚಾರ್ಮಾಡಿ ಹಸನಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಲಾಯಿಲ: ಸಾರಿ ಫೋಲ್ಡಿಂಗ್, ಬ್ರೈಡಲ್ ಮೇಕಪ್ ಹಾಗೂ ಸಾರಿ ಗೊಂಡೆ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಇದರ ಸಮಾಲೋಚನಾ ಸಭೆ

Suddi Udaya

ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ

Suddi Udaya

ಉಜಿರೆ ಎಸ್.ಡಿ.ಎಂ ( ಸ್ವಾಯತ್ತ) ಕಾಲೇಜು : ಪೋಷಕ ಶಿಕ್ಷಕರ ಸಂಘದ ಸಭೆ

Suddi Udaya
error: Content is protected !!