September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.20ರಂದು ಸಂಘದ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂತೋಷ್ ಪಿ. ಕೋಟ್ಯಾನ್, ಸುಮಾರು 48 ವರ್ಷಗಳ ಸುದೀರ್ಘ ಪರಂಪರೆಯನ್ನು ಹೊಂದಿರುವ ಸಂಘವು ಇದೀಗ ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿದೆ. ಎಲ್ಲರ ಸಹಕಾರ, ಪ್ರೀತಿ ಹಾಗೂ ಸಹಭಾಗಿತ್ವದಿಂದ ಸಂಘವು ನಿರಂತರವಾಗಿ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಕಲೆ, ಕ್ರೀಡೆ ಹಾಗೂ ಸಾಹಿತ್ಯ ಕ್ಷೇತ್ರಗಳಲ್ಲಿ ಸಂಘವು ತನ್ನದೇ ಆದ ಕೊಡುಗೆ ನೀಡುತ್ತಾ, ಊರಿನ ಸಮಗ್ರ ಪ್ರಗತಿಗೆ ಶ್ರಮಿಸುತ್ತಿದೆ ಎಂದರು.

ಶ್ರೀ ನಾರಾಯಣ ಗುರುಗಳ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಮಾನವತೆಯ ಸಂದೇಶ ಹಾಗೂ ಶಿಕ್ಷಣ, ಸಂಘಟನೆ ಮತ್ತು ಸಾಮಾಜಿಕ ಸುಧಾರಣೆಯ ಆದರ್ಶಗಳನ್ನು ಮುಂದಿಟ್ಟುಕೊಂಡು ಸಂಘವು ಸಮಾಜಮುಖಿ ಚಟುವಟಿಕೆಗಳನ್ನು ನಡೆಸುತ್ತಿದೆ.ಎಲ್ಲರನ್ನೂ ಒಗ್ಗೂಡಿಸಿ, ಶಿಕ್ಷಣ ಮತ್ತು ಸಂಸ್ಕಾರಕ್ಕೆ ಪ್ರೋತ್ಸಾಹ ನೀಡುವ ಮೂಲಕ ಸಮಾಜದ ಅಭಿವೃದ್ಧಿಗೆ ಕೈಜೋಡಿಸುವುದು ಸಂಘದ ಪ್ರಮುಖ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಸಂಘದ ಸದಸ್ಯರು ಸಂಘದ ಮುಂದಿನ ಅಭಿವೃದ್ಧಿಗೆ ಪೂರಕವಾದ ಹಲವು ಸಲಹೆ-ಸೂಚನೆಗಳನ್ನು ನೀಡಿದರು. ಈಗಾಗಲೇ ಸಂಘಕ್ಕೆ ಅಗತ್ಯವಿರುವ ಹಲವು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದ್ದು,ಮುಂದಿನ ದಿನಗಳಲ್ಲಿ ಸಂಘದ ಶಾಶ್ವತ ಅಭಿವೃದ್ಧಿಗೆ ಪೂರಕವಾಗುವ ಮತ್ತಷ್ಟು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಅಗತ್ಯವಿದೆ ಎಂದು ಅಧ್ಯಕ್ಷರು ತಿಳಿಸಿದರು.

ಸಂಘದ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ,ನಿರ್ದೇಶಕರಾದ ಸಂತೋಷ್ ಕುಮಾರ್ ಕಾಪಿನಡ್ಕ, ಮನೋಹರ್ ಬಳಂಜ, ಸಂತೋಷ್ ಕುಮಾರ್ ಹಿಮರಡ್ಡ, ಪ್ರವೀಣ್ ಡಿ. ಕೋಟ್ಯಾನ್, ಪೂರ್ವಾಧ್ಯಕ್ಷ ಸುರೇಶ್ ಪೂಜಾರಿ ಜೈಮಾತ,ಯುವ ಬಿಲ್ಲವ ವೇದಿಕೆ ಕಾರ್ಯದರ್ಶಿ ಸತೀಶ್ ಕೋಟ್ಯಾನ್, ಮಹಿಳಾ ಬಿಲ್ಲವ ವೇದಿಕೆ ಕಾರ್ಯದರ್ಶಿ ಸಂಧ್ಯಾ ಹೆಚ್.ಡಿ. ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಸಂಘದ ಕೋಶಾಧಿಕಾರಿ ಪ್ರವೀಣ್ ಕುಮಾರ್ ಹೆಚ್.ಎಸ್. ಸ್ವಾಗತಿಸಿ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ ವಾರ್ಷಿಕ ವರದಿ ವಾಚಿಸಿದರು. ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಭಾರತಿ ಸಂತೋಷ್ ವಂದಿಸಿದರು.

ಜನಪರ ಕಾರ್ಯಗಳ ಮೂಲಕ ಸಂಘವು ಸಮಾಜದ ಗಮನ ಸೆಳೆದಿದೆ.

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯು ಪ್ರಸಕ್ತ ಆರ್ಥಿಕ ವರ್ಷದಲ್ಲಿ ಉತ್ತಮ ವ್ಯವಹಾರ ನಡೆಸಿದ್ದು, ಸಂಘಕ್ಕೆ ಅಗತ್ಯವಿರುವ ಹಲವು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಿದೆ. ಶ್ರೀ ಗುರುಪೂಜೆ, ಸತ್ಯನಾರಾಯಣ ಪೂಜೆ, ದೀಕ್ಷಾಗ್ರಂಥಿ ಧಾರಣೆ, ವೈಭವದ ಶ್ರೀ ಶಾರದೋತ್ಸವ, ಬೊಳ್ಳಜ್ಜ ದೈವದ ಅಗೇಲು ಸೇವೆ, ದತ್ತಿನಿಧಿಯಿಂದ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಕ್ರೀಡಾಕೂಟ, ರಕ್ಷಾಬಂಧನ, ತರಬೇತಿ ಕಾರ್ಯಾಗಾರ, ದೀಪಾವಳಿ ಆಚರಣೆ, ಆಟಿಕೂಟ,ಸಾಧಕರಿಗೆ ಸನ್ಮಾನ ಸೇರಿದಂತೆ ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಂಘವು ಜನರ ಗಮನ ಸೆಳೆದಿದೆ ಎಂದು ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ಹೇಳಿದರು.

ಸುವರ್ಣ ಸಂಭ್ರಮಕ್ಕೆ ಶಾಶ್ವತ ಯೋಜನೆಗಳು:
ಸಂಘವು ಇದೀಗ ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿದ್ದು, ಮುಂದಿನ ದಿನಗಳಲ್ಲಿ ಹಲವು ಶಾಶ್ವತ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಈಗಾಗಲೇ ಸಂಘಕ್ಕೆ ಅತ್ಯಗತ್ಯವಾಗಿದ್ದ ಅನ್ನಛತ್ರ ನಿರ್ಮಾಣ ಕಾರ್ಯ ಪೂರ್ಣಗೊಂಡಿರುವುದು ಸಂತಸದ ವಿಚಾರವಾಗಿದೆ. ಮುಂದಿನ ದಿನಗಳಲ್ಲಿ ಸಂಘದ ಮೂಲಸೌಕರ್ಯ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ಹೊಂದಲಾಗಿದೆ.ಸಂಘದ ಬೆಳವಣಿಗೆಗೆ ವಿಶೇಷವಾಗಿ ಸಹಕಾರ ನೀಡಿದ ಆಡಳಿತ ಮಂಡಳಿ, ಸಂಘದ ಸದಸ್ಯರು, ಶಾಸಕ ಹರೀಶ್ ಪೂಂಜ, ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳು ಹಾಗೂ ಸಂಘದ ಪ್ರತಿಯೊಂದು ಕಾರ್ಯದಲ್ಲೂ ಕೈಜೋಡಿಸಿದ ಸರ್ವರಿಗೂ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ಕೃತಜ್ಞತೆ ಅರ್ಪಿಸಿದರು.

Related posts

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆ: ಪ್ರತಿಯೊಬ್ಬರೂ ಉನ್ನತವಾದ ಸ್ಥಾನದಲ್ಲಿ ಇರಬೇಕಾದರೆ ಮುಖ್ಯ ಕಾರಣ ಶಿಕ್ಷಕರು: ಕಿಶೋರ್ ಕುಮಾರ್

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಶಾಲಾ ಸಂಸತ್ತು ಚುನಾವಣೆ

Suddi Udaya

ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳಂಜ ಇಲ್ಲಿ ಜುಲೈ 28 ರಂದು ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಐದು ದೇವರ ಗುಡಿಗಳ ಶಿಲಾನ್ಯಾಸ

Suddi Udaya
error: Content is protected !!