September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾ.ಪಂ. ಒಕ್ಕೂಟದ ವಾರ್ಷಿಕ ಮಹಾಸಭೆ

ಅಂಡಿಂಜೆ : ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಅಂಡಿಂಜೆ ಇದರ ವಾರ್ಷಿಕ ಮಹಾಸಭೆ ಒಕ್ಕೂಟದ ಅಧ್ಯಕ್ಷೆ ಸುದರ್ಶಿನಿ ಹೆಗ್ಡೆ ಇವರ ಉಪಸ್ಥಿತಿಯಲ್ಲಿ ಅಂಡಿಂಜೆ ಶ್ರೀ ರಾಮ ಶ್ರೀ ವಿನಾಯಕ ಭಜನಾ ಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ರಮಣಿ ಹೆಗ್ಡೆ ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಿ., ಶ್ರೀಮತಿ ಶ್ವೇತಾ ಸ್ವಾಗತಿಸಿದರು. ವೇದಿಕೆಯಲ್ಲಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ ಸಂಜೀವಿನಿ ಯೋಜನೆಗಳ ಬಗ್ಗೆ ಪ್ರಸ್ತಾವಿಕ ಮಾಹಿತಿ ನೀಡಿದರು. ಒಕ್ಕೂಟದ ವಲಯ ಮೇಲ್ವಿಚಾರಕ ಸ್ವಸ್ತಿಕ್ ಜೈನ್ ಒಕ್ಕೂಟದ ಪದಗ್ರಹಣ.,ಸದಸ್ಯರಿಗೆ ಕ್ವಿಜ್ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ತಾಲೂಕು ಆರೋಗ್ಯ ಅಧಿಕಾರಿ ಶ್ರೀಮತಿ ಅಮ್ಮಿ ಆರೋಗ್ಯ ಪೌಷ್ಟಿಕಾಂಶ, ಹದಿಹರೆಯದ ಮಕ್ಕಳ ಸಮಸ್ಯೆಗಳ ಬಗ್ಗೆ ಸ್ತನ ಕ್ಯಾನ್ಸರ್ ಬಗ್ಗೆ, ಗರ್ಭಕೋಶದ ಸಮಸ್ಯೆಯ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರಾದ ಮಲ್ಲಿಕಾ ಎನ್ ಒಕ್ಕೂಟದ ಒಂದು ವರ್ಷದ ವರದಿ ಜಮಾ ಖರ್ಚು ವಿವರವನ್ನು ಸಭೆಗೆ ಮಂಡಿಸಿದ್ದು.ಅನುಮೋದನೆಯನ್ನು ಪಡೆಯಲಾಯಿತು. ಪದಗ್ರಹಣ ನಡೆಸಿ ಹಳೆಯ ಪದಾಧಿಕಾರಿಗಳನ್ನು ಗೌರವಿಸಿದರು. ಉತ್ತಮ ದಾಖಲಾತಿ ಹೊಂದಿರುವ ಸಂಘವನ್ನು ಗುರುತಿಸಿ ಬಹುಮಾನ ನೀಡಲಾಯಿತು. ಯಶಸ್ವಿ ಮಹಿಳಾ ಸಾಧಕಿಯರನ್ನು ಗೌರವಿಸಲಾಯಿತು. ಸೌಮ್ಯ ನಿರೂಪಿಸಿ ವತ್ಸಲಾ ಧನ್ಯವಾದ ನೀಡಿದರು.

Related posts

ಅಖಿಲ ಭಾರತ ವೃತ್ತಿ ಪರೀಕ್ಷೆ : ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಗೆ ಶೇ. 98 ಫಲಿತಾಂಶ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾಸಿಕ ಸಭೆ

Suddi Udaya

ಬಣಕಲ್ ಸಾಯಿಕೃಷ್ಣ ಹೆಲ್ತ್ ಸೆಂಟರ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ

Suddi Udaya

ಸಿಎ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೇಶವ ಕಾಮತ್ ತೇರ್ಗಡೆ

Suddi Udaya

ನಾವೂರು ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!