September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟ

ಬೆಳ್ತಂಗಡಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟವು ಸರ್ಕಾರಿ ಪದವಿಪೂರ್ವ ಕಾಲೇಜು ಅಳದಂಗಡಿಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೆeಸರರಾದ ಶಿವಪ್ರಸಾದ್ ಅಜಿಲರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ವಿದ್ಯಾರ್ಥಿಗಳು ಸಕಾರಾತ್ಮಕ ಮನೋಭಾವ ದಿಂದ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಸಮಾಜಮುಖಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯ ಶಿಕ್ಷಕರಾದ ಯಶೋಧರ ಸುವರ್ಣ, ಪ್ರೌಢಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸದಾಶಿವ ಪೂಜಾರಿ, ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಶಾಂತಿಮರಿಯ ಸಲ್ದಾನ, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಶೇಖರ್ ಮತ್ತು ಆಮಂತ್ರಣ ಪತ್ರಿಕೆಯ ವಿಜಯಕುಮಾರ್ ಜೈನ್ ಉಪಸ್ಥಿತರಿದ್ದರು.

ಸಂಸ್ಥೆಯ ಪ್ರಾಂಶುಪಾಲರಾದ ಸನ್ನಿ ಕೆ ಎಮ್ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಉಪನ್ಯಾಸಕ ಪ್ರಶಾಂತ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ: ಭಾರತೀಯ ಜೀವ ವಿಮಾ ನಿಗಮ ದಿಂದ ಡಾ.ಹೆಗ್ಗಡೆಯವರಿಗೆ ಗೌರವಾರ್ಪಣೆ; ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

Suddi Udaya

ಜೆಸಿಐ ಮಡಂತ್ಯಾರು “ವಿಜಯ 2024” ವತಿಯಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಶಾಸಕರು ತಮ್ಮ ಅಪ್ತರ ಮೂಲಕ ಅಕ್ರಮ ಮರ ಸಾಗಾಟ, ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿ ಚುಣಾವಣೆಗೆ ಹಣ ಖರ್ಚು ಮಾಡಿದ್ದಾರೆ: ಮನೋಹರ ಕುಮಾರ್ ಆರೋಪ ; ಬ್ಲಾಕ್ ಕಾಂಗ್ರೆಸ್ ನಿಂದ ಪತ್ರಿಕಾಗೋಷ್ಠಿ

Suddi Udaya

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಧನೆಗೆ ವಿಮಾ ಕ್ಷೇತ್ರದ ಗೌರವ

Suddi Udaya

ಕರಾಟೆ ಚಾಂಪಿಯನ್ಶಿಪ್: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಹೀರ್ ಅನಸ್ ಕುಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ ಪದಕ

Suddi Udaya
error: Content is protected !!