September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಸಂಪೂರ್ಣ ಹದಗೆಟ್ಟ ರಸ್ತೆಗಳು: ದುರಸ್ತಿಗೊಳಿಸುವಂತೆ ಒತ್ತಾಯ; ಚುನಾವಣೆ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ

ಇಂದಬೆಟ್ಟು: ಇಂದಬೆಟ್ಟು ಗ್ರಾಮದ ಅತ್ಯಂತ ಪ್ರಮುಖ ರಸ್ತೆಗಳು ಅಭಿವೃದ್ಧಿ ಕಾಣದೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ಸುಮಾರು 250ಕ್ಕೂ ಹೆಚ್ಚು ಕುಟುಂಬಗಳು ದಿನನಿತ್ಯ ಓಡಾಡಲು ಕಷ್ಟ ಪಡುವಂತ ಸ್ಥಿತಿ ನಿರ್ಮಾಣವಾಗಿದೆ.

ಇಂದಬೆಟ್ಟು ಗ್ರಾಮದ ಅಗ್ಗೋಟ್ಟು, ಎರ್ಮಲ, ಬೈರೋಟ್ಟು, ಪಿಚಲಾರು ಮುಖಾಂತರ ಬಂಗಾಡಿ ಮುಖ್ಯರಸ್ತೆಗೆ ಸಂಪರ್ಕಿಸುವ 5 ಕಿ.ಮೀ ಉದ್ದದ ರಸ್ತೆ ಹಾಗೂ ಪಿಚಲಾರು ಎಂಬಲ್ಲಿಂದ ದೇಸೊಟ್ಟು, ಎರ್ಮಳದವರೆಗಿನ 4 ಕಿ.ಮೀ ರಸ್ತೆ ಸೇರಿದಂತೆ ಒಟ್ಟು 9ಕಿ.ಮೀ ರಸ್ತೆ ಕಳೆದ ಹಲವು ವರ್ಷಗಳಿಂದ ದುಸ್ಥಿತಿಯಲ್ಲಿದೆ. ರಸ್ತೆಯಲ್ಲಿ ಹೊಂಡಗುಂಡಿಗಳು ಬಿದ್ದು, ಮಳೆಗಾಲದಲ್ಲಿ ಕೆಸರುಮಯವಾಗಿ ವಾಹನ ಸಂಚಾರವಿರಲಿ, ಕಾಲ್ನಡಿಗೆಯೂ ಕಷ್ಟಕರವಾಗಿದೆ.

ಈ ಭಾಗದಲ್ಲಿ 250ಕ್ಕೂ ಹೆಚ್ಚು ಮನೆಗಳಿದ್ದು, ಶಾಲಾ ಮಕ್ಕಳು, ವೃದ್ಧರು, ಅಂಗನವಾಡಿ, ಆಸ್ಪತ್ರೆಗೆ ತೆರಳುವವರು ಪ್ರತಿನಿತ್ಯ ಈ ಹದಗಟ್ಟ ರಸ್ತೆಯಲ್ಲೇ ಸಂಚರಿಸಬೇಕಾಗಿದೆ. ಅನಾರೋಗ್ಯದ ತುರ್ತು ಸಂದರ್ಭದಲ್ಲಿ ಆಂಬ್ಯುಲೆನ್ಸ್ ಕೂಡ ಬರಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ರಸ್ತೆಯ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ಗ್ರಾಮಸ್ಥರು ಕಳೆದ ಹಲವು ವರ್ಷಗಳಿಂದ ಶಾಸಕರು, ಸಂಸದರು, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದಾರೆ. ಆದರೂ ಇದುವರೆಗೆ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ, ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸರ್ಕಾರ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಬೇಸತ್ತಿರುವ ಗ್ರಾಮಸ್ಥರು ಮುಂದಿನ ಚುನಾವಣೆಯನ್ನು ಬಹಿಷ್ಕರಿಸಲು ಗ್ರಾಮಸ್ಥರು ಸರ್ವಾನುಮತದಿಂದ ನಿರ್ಧರಿಸಿದ್ದಾರೆ.”ಮುಂದಿನ ಚುನಾವಣೆ ಬರುವ ಮುಂಚೆ ನಮ್ಮ ಮುಖ್ಯ ಬೇಡಿಕೆಯಾದ ಈ 9 ಕಿ.ಮೀ ರಸ್ತೆಯನ್ನು ದುರಸ್ತಿ ಮಾಡಿ ಅಭಿವೃದ್ಧಿಪಡಿಸಿಕೊಟ್ಟ ನಂತರವೇ ನಾವು ನಮ್ಮ ಮತದಾನದ ಹಕ್ಕನ್ನು ಚಲಾಯಿಸುತ್ತೇವೆ. ಇಲ್ಲದಿದ್ದರೆ ಯಾವುದೇ ಪಕ್ಷದ ಅಭ್ಯರ್ಥಿಗಳಿಗೂ ಮತ ಹಾಕುವುದಿಲ್ಲ” ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಕೂಡಲೇ ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳು ರಸ್ತೆಯನ್ನು ಪರಿಶೀಲಿಸಿ, ಶಾಶ್ವತ ದುರಸ್ತಿ ಕಾರ್ಯ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ತಾಲೂಕಿನಲ್ಲಿ ಅತೀ ಹೆಚ್ಚು ಕೃಷಿ ಉಪಕರಣ ಖರೀದಿಸಿದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ ಹಾಗೂ ವಿಠಲ್ ಗೌಡ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕೊಕ್ಕಡ ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ಬೆಳ್ತಂಗಡಿ ಹಾಗೂ 9 ವಲಯಗಳ ಆಶ್ರಯದಲ್ಲಿ ಆಟಿದ ಕಮ್ಮೆನ ಮತ್ತು ಆಟೋಟ ಸ್ಪರ್ಧೆ

Suddi Udaya
error: Content is protected !!