November 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ. 27: ಉಜಿರೆಯಲ್ಲಿ ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಶಿಕ್ಷಕರ ದಿನಾಚರಣೆ

ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ನೇತೃತ್ವದಲ್ಲಿ ವಿವಿಧ ವಿಷಯವಾರು ಉಪನ್ಯಾಸಕರ ಸಂಘಗಳು, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ, ಅನುದಾನಿತ ಪದವಿಪೂರ್ವ ಕಾಲೇಜುಗಳ ನೌಕರರ ಸಂಘ, ರಾಜ್ಯ ಪದವಿಪೂರ್ವ ಉಪನ್ಯಾಸಕರ ಸಂಘದ ಜಿಲ್ಲಾ ಘಟಕ ಹಾಗೂ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಜಿಲ್ಲಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಸೆ. 27ರಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ‘ಇಂದ್ರಪ್ರಸ್ಥ’ ಸಭಾಂಗಣದಲ್ಲಿ ನಡೆಯಲಿದೆ.

ದಕ್ಷಿಣಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ (ಪದವಿಪೂರ್ವ)ಯ ಉಪನಿರ್ದೇಶಕರಾದ ರಾಜೇಶ್ವರಿ ಹೆಚ್. ಹೆಚ್. ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯರಾದ ಎಸ್. ಎಲ್. ಭೋಜೇಗೌಡ ಅವರು ಉದ್ಘಾಟಿಸಲಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಯು. ಟಿ. ಖಾದರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಮಧು ಬಂಗಾರಪ್ಪ, ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ, ಪುತ್ತೂರು ಶಾಸಕರಾದ ಅಶೋಕ್ ರೈ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ, ಶೇ. 100ರಷ್ಟು ಫಲಿತಾಂಶ ದಾಖಲಿಸಿದ ಪದವಿಪೂರ್ವ ಕಾಲೇಜುಗಳ ಸಿಬ್ಬಂದಿಗೆ ಸನ್ಮಾನ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ನೃತ್ಯ ವೈಭವ, ಜಿಲ್ಲೆಯ ಆಯ್ದ ಉಪನ್ಯಾಸಕರಿಂದ ಸಂಗೀತ ರಸಮಂಜರಿ ಹಾಗೂ ಉಪನ್ಯಾಸಕರು ಮತ್ತು ಸಿಬ್ಬಂದಿಗಾಗಿ ನೃತ್ಯ ಸ್ಪರ್ಧೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಇದರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಉಪನ್ಯಾಸಕರ ಪೈಕಿ ಅದೃಷ್ಟಶಾಲಿಗಳಿಗೆ ಐಫೋನ್ ಸೇರಿದಂತೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು.

ಕಾರ್ಯಕ್ರಮವು ಜಿಲ್ಲೆಯ ಪದವಿಪೂರ್ವ ಶಿಕ್ಷಣ ಕ್ಷೇತ್ರದ ಉಪನ್ಯಾಸಕರು ಹಾಗೂ ಸಿಬ್ಬಂದಿಯ ಸೌಹಾರ್ದ, ಪ್ರತಿಭೆ ಮತ್ತು ಸಾಧನೆಗಳನ್ನು ಸಂಭ್ರಮಿಸುವ ವಿಶೇಷ ವೇದಿಕೆಯಾಗಲಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಡಾ. ನವೀನ್ ಶೆಟ್ಟಿ ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಹೆಚ್.ಎಸ್ ಆಯ್ಕೆ

Suddi Udaya

ಬಿ.ಕೆ.ಶಂಕರ ಮೊಗೆರಾಯ ನಿಧನ

Suddi Udaya

ಅಳದಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.95 ಫಲಿತಾಂಶ

Suddi Udaya

ನವೋದಯ ಸ್ವಸಹಾಯ ತಂಡದ ಮಹಿಳ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಜು.26: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ಪಂಜಿನ ಮೆರವಣಿಗೆ

Suddi Udaya

ನ.29: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನೆರಿಯ, ಪುದುವೆಟ್ಟು, ಮುಂಡಾಜೆ, ಕಲ್ಮಂಜದಲ್ಲಿ ಜನಸ್ಪಂದನಾ ಸಭೆ

Suddi Udaya
error: Content is protected !!