ತುಳು ಭಾಷೆ ನಮ್ಮ ತಾಯಿ ಭಾಷೆಯಾಗಿದ್ದು,ಶ್ರೀಮಂತ ಸಂಸ್ಕೃತಿ ಹಾಗೂ ಪರಂಪರೆಯ ಪ್ರತೀಕವಾಗಿದೆ. ತುಳುನಾಡಿನ ನೆಲ, ಜಲ ಹಾಗೂ ಭಾಷೆಗೆ ವಿಶೇಷ ಮಹತ್ವವಿದ್ದು, ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ತುಳು ಭಾಷೆಗೆ ಕರ್ನಾಟಕ ಸರ್ಕಾರವು ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ನೀಡಿರುವುದು ಸಂತಸದ ವಿಚಾರವಾಗಿದೆ ಎಂದು ನಿವೃತ್ತ ಎಸ್‌ಪಿ ಪೀತಾಂಬರ ಹೆರಾಜೆ ತಿಳಿಸಿದ್ದಾರೆ.
ತುಳು ಭಾಷೆಗೆ ಮಾನ್ಯತೆ ನೀಡಬೇಕೆಂಬ ತುಳುವರ ಹಲವು ವರ್ಷಗಳ ಹೋರಾಟಕ್ಕೆ ಸರ್ಕಾರ ಸ್ಪಂದಿಸಿದ್ದು, ತಾಯಿನಾಡಿನ ನುಡಿಗೆ ಸಿಗಬೇಕಾದ ರಾಜಮರ್ಯಾದೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ಸಮಯದಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಸಹೋದ್ಯೋಗಿಗಳಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.











