September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಳು ನಮ್ಮ ಹೆಮ್ಮೆ, ಸಮೃದ್ಧ ಸಂಸ್ಕೃತಿಯ ಪ್ರತೀಕ: ಮೋಹನ್ ಗೌಡ ಕಲ್ಮಂಜ

ತುಳು ನಮ್ಮ ಮಾತೃಭಾಷೆಯಾಗಿದ್ದು, ಜನಪದ ಇತಿಹಾಸ, ಕಲೆ, ಕಂಬಳ, ಕ್ರೀಡೆ, ಸಾಹಿತ್ಯ, ರಂಗಭೂಮಿ, ದೈವ ಪಾಡ್ದನ, ಪುರುಷರ ಕುಣಿತ, ಗುಮ್ಮಟೆ, ಕರಂಗೋಲು, ಆಟಿ ಕಳೆಂಜ, ಹುಲಿವೇಷ ಸೇರಿದಂತೆ ವೈವಿಧ್ಯಮಯ ಕಲೆ–ಸಂಸ್ಕೃತಿಯ ಸಮೃದ್ಧ ಪರಂಪರೆಯನ್ನು ಹೊಂದಿದೆ. ಜಾತಿ, ಮತ, ಭೇದಗಳನ್ನು ಮರೆತು ತುಳುನಾಡಿನ ಜನರು ತಮ್ಮ ಭಾಷೆ ಹಾಗೂ ಸಂಸ್ಕೃತಿಯ ಮೂಲಕ ವಿಶಿಷ್ಟವಾಗಿ ಗುರುತಿಸಿಕೊಂಡಿದ್ದಾರೆ ಎಂದು ಯುವ ನಾಯಕ ಮೋಹನ್ ಗೌಡ ಕಲ್ಮಂಜ ಹೇಳಿದರು.

ಕರ್ನಾಟಕ ಸರ್ಕಾರವು ತುಳು ಭಾಷೆಯನ್ನು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಿಸಿರುವುದು ತುಳುವರ ಬಹುದಿನಗಳ ಬೇಡಿಕೆಗೆ ದೊರೆತ ಮಾನ್ಯತೆಯಾಗಿದೆ. ತುಳು ಭಾಷೆಯ ಅಭಿವೃದ್ಧಿಗಾಗಿ ಹಿಂದಿನ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರ ಅವಧಿಯಲ್ಲಿ ತುಳು ಸಾಹಿತ್ಯ ಅಕಾಡೆಮಿ ಸ್ಥಾಪನೆಯಾಗಿದ್ದು, ಬಳಿಕ ತುಳುವಿಗೆ ಹೆಚ್ಚಿನ ಮಾನ್ಯತೆ ನೀಡುವ ನಿಟ್ಟಿನಲ್ಲಿ ಹಲವು ವರ್ಷಗಳಿಂದ ಹೋರಾಟಗಳು ಹಾಗೂ ಕಾರ್ಯಕ್ರಮಗಳು ನಡೆದಿವೆ ಎಂದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸುತ್ತೇನೆ. ತುಳುನಾಡಿನ ಜನರ ಭಾಷಾಭಿಮಾನ ಹಾಗೂ ಬೇಡಿಕೆಗೆ ಸ್ಪಂದಿಸಿರುವ ಸರ್ಕಾರಕ್ಕೆ ಅಭಿನಂದನೆಗಳು. ಈ ಪ್ರಯತ್ನದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಹಾಗೂ ರಕ್ಷಿತ್ ಶಿವರಾಂ ಸೇರಿದಂತೆ ಹಲವರ ಪ್ರಯತ್ನವೂ ಇದೆ ಎಂದು ಮೋಹನ್ ಗೌಡ ಕಲ್ಮಂಜ ಹೇಳಿದರು.

ತುಳು ಭಾಷೆಯ ಮುಂದಿನ ಬೆಳವಣಿಗೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು. ತುಳುವಿನಲ್ಲಿಯೇ ಶಾಲಾ ಹಂತದಲ್ಲಿ ತರಗತಿಗಳು ನಡೆಯುವಂತೆ, ಭಾಷಾ ಕಲಿಕೆ ಹಾಗೂ ತುಳು ಲಿಪಿಯ ಅಧ್ಯಯನಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಗಮನಹರಿಸಬೇಕು. ತುಳು ಭಾಷೆಯ ಆಡಳಿತಾತ್ಮಕ ಬಳಕೆಯ ಜೊತೆಗೆ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲೂ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು ಎಂದು ಅವರು ಒತ್ತಾಯಿಸಿದರು.

Related posts

ಭವಿಷ್ಯದ ಚಿತ್ರರಂಗದ ಭರವಸೆಯ ಕಲಾವಿದ ರಾಜ್ ಚರಣ್ ಬ್ರಹ್ಮಾವರ್

Suddi Udaya

ಕೊಕ್ಕಡ ಪ್ರೌಢ ಶಾಲೆಯಿಂದ ರೂ. 3.20 ಲಕ್ಷ ಮೌಲ್ಯದ ಬ್ಯಾಟರಿ ಕಳವು ಮಾಡಿದ ಮೂವರ ಬಂಧನ

Suddi Udaya

ಪ.ರಾ.ಶಾಸ್ತ್ರಿ ಅಭಿನಂದನೆ: ಆಹ್ವಾನ ಪತ್ರಿಕೆ ಅನಾವರಣ

Suddi Udaya

ಮದಡ್ಕ: ಶ್ರೀ ರಾಮನವಮಿ ಉತ್ಸವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆ, ನಾಲ್ಕೂರು ಎ.ಬಿ ಒಕ್ಕೂಟದ ಪದಗ್ರಹಣ ಸಮಾರಂಭ: ನವಜೀವನ ಸಮಿತಿ ಸದಸ್ಯರಿಗೆ ಹಾಗೂ ಹಿರಿಯ ಸದಸ್ಯರಿಗೆ ಸನ್ಮಾನ

Suddi Udaya

ನೆರಿಯ: ಹಿರಿಯ ದೈವ ನರ್ತಕ ತನಿಯಪ್ಪ ನಲಿಕೆ ನಿಧನ

Suddi Udaya
error: Content is protected !!