November 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತುಳು ಭಾಷೆಗೆ ಅಧಿಕೃತ ಮಾನ್ಯತೆ: ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಹೊಸ ಅಧ್ಯಾಯ : ಡಾ. ಯು.ಸಿ. ಪೌಲೋಸ್

ಬೆಳ್ತಂಗಡಿ: ತುಳು ಭಾಷೆಗೆ ಹೆಚ್ಚುವರಿ ಅಧಿಕೃತ ಆಡಳಿತ ಭಾಷೆಯ ಸ್ಥಾನಮಾನ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರವು ಕರಾವಳಿಯ ಭಾಷಾ, ಸಾಂಸ್ಕೃತಿಕ ಹಾಗೂ ಪರಂಪರೆಯ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದೆ. ಸೆ. 18ರಂದು ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಳುವಿಗೆ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ.

ತುಳು ಕೇವಲ ಒಂದು ಭಾಷೆಯಲ್ಲ; ಅದು ಕರಾವಳಿಯ ಜನಜೀವನ, ಆಚರಣೆ, ಕಲೆ, ಸಾಹಿತ್ಯ, ಸಂಪ್ರದಾಯ ಹಾಗೂ ಸಾಂಸ್ಕೃತಿಕ ಅಸ್ಮಿತೆಯ ಅವಿಭಾಜ್ಯ ಅಂಗವಾಗಿದೆ. ಈ ಮಾನ್ಯತೆಯ ಮೂಲಕ ತುಳು ಭಾಷೆಯ ಸಂರಕ್ಷಣೆ, ಅಭಿವೃದ್ಧಿ ಹಾಗೂ ಮುಂದಿನ ಪೀಳಿಗೆಗೆ ಅದರ ಶ್ರೀಮಂತ ಪರಂಪರೆಯನ್ನು ಪರಿಚಯಿಸಲು ಹೊಸ ಅವಕಾಶಗಳು ದೊರೆಯಲಿವೆ. ತುಳು ಭಾಷೆಯ ಶಿಕ್ಷಣ, ಸಾಹಿತ್ಯ, ಸಂಶೋಧನೆ ಹಾಗೂ ಆಡಳಿತಾತ್ಮಕ ಬಳಕೆಗೆ ಹೆಚ್ಚಿನ ಪ್ರೋತ್ಸಾಹ ದೊರೆಯುವಂತಾಗಲಿ. ಕರಾವಳಿಯ ವಿಶಿಷ್ಟ ಭಾಷಾ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ನಿರ್ಧಾರ ಮಹತ್ವದ ಹೆಜ್ಜೆಯಾಗಲಿ.

ಈ ಐತಿಹಾಸಿಕ ನಿರ್ಧಾರ ಕೈಗೊಂಡ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಸರ್ಕಾರಕ್ಕೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ತುಳು ಭಾಷೆಯ ಅಭಿವೃದ್ಧಿಗೆ ಹಲವು ವರ್ಷಗಳಿಂದ ಶ್ರಮಿಸಿದ ಎಲ್ಲಾ ತುಳುಪರ ಸಂಘಟನೆಗಳು, ಸಾಹಿತಿಗಳು, ಹೋರಾಟಗಾರರು, ಜನಪ್ರತಿನಿಧಿಗಳು ಹಾಗೂ ತುಳು ಭಾಷಾಭಿಮಾನಿಗಳಿಗೂ ಅಭಿನಂದನೆಗಳು.

ತುಳು ಭಾಷೆಯ ಬೆಳವಣಿಗೆಯೊಂದಿಗೆ ತುಳುನಾಡಿನ ವಿಶಿಷ್ಟ ಸಂಸ್ಕೃತಿ, ಪರಂಪರೆ ಮತ್ತು ಅಸ್ಮಿತೆಯೂ ಮತ್ತಷ್ಟು ಬಲವಾಗಿ ಉಳಿಯಲಿ ಎಂದು ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ. ಯು.ಸಿ. ಪೌಲೋಸ್ ಅವರು ತಿಳಿಸಿದ್ದಾರೆ.

Related posts

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಆತಂಕ: ಮಳೆಗಾಲದಲ್ಲಿ ಪ್ರವಾಸಿಗರಿಗೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ

Suddi Udaya

ಗರ್ಡಾಡಿ ನಿವಾಸಿ ಲೀಲಾ ಹೃದಯಾಘಾತದಿಂದ ನಿಧನ

Suddi Udaya

ತೆಕ್ಕಾರು ಶ್ರೀ ಗೋಪಾಲ ಕೃಷ್ಣ ದೇವರಿಗೆ ವಿಶೇಷ ಪೂಜೆ: ಶಾಸಕ ಹರೀಶ್ ಪೂಂಜರಿಂದ ಅಭಿವೃದ್ಧಿಕಾರ್ಯದ ಬಗ್ಗೆ ಸಭೆ

Suddi Udaya

ಎಸ್ ಡಿ ಎಂ ಎನ್ ಎಸ್ ಎಸ್ ಘಟಕಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಜಯವಿಕ್ರಮ್ ಕಲ್ಲಾಪು

Suddi Udaya

ನಿಡ್ಲೆ ಅಗ್ರಿಲೀಫ್ ಸಂಸ್ಥೆಗೆ ಝೆಡ್ ಬೆಳ್ಳಿ ಪ್ರಮಾಣ ಪತ್ರ

Suddi Udaya
error: Content is protected !!