November 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೌರ ನೀರು ಸರಬರಾಜು ನೌಕರರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು : ಜಯಾನಂದ ಗೌಡ ಪ್ರಜ್ವಲ್

ಬೆಳ್ತಂಗಡಿ: ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ಪೌರ ನೀರು ಸರಬರಾಜು ಸೇರಿದಂತೆ ಅಗತ್ಯ ಸೇವೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ನಡೆಸುತ್ತಿರುವ ಪ್ರತಿಭಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಬೆಳ್ತಂಗಡಿ ಪಟ್ಟಣ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್ ಒತ್ತಾಯಿಸಿದ್ದಾರೆ.

ಕುಡಿಯುವ ನೀರು ಸರಬರಾಜು ಸಾರ್ವಜನಿಕರ ದೈನಂದಿನ ಬದುಕಿಗೆ ನೇರವಾಗಿ ಸಂಬಂಧಿಸಿದ ಅತ್ಯಗತ್ಯ ಸೇವೆಯಾಗಿದೆ. ಯಾವುದೇ ಪರಿಸ್ಥಿತಿಯಲ್ಲೂ ಜನರಿಗೆ ನೀರು ಪೂರೈಸುವಲ್ಲಿ ಪೌರ ನೀರು ಸರಬರಾಜು ನೌಕರರ ಸೇವೆ ಮಹತ್ವದ್ದಾಗಿದೆ. ಇಂತಹ ನೌಕರರ ಸೇವಾ ಸಮಸ್ಯೆಗಳು, ವೇತನ ಹಾಗೂ ಇತರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷಿಸದೆ, ಅವರೊಂದಿಗೆ ತಕ್ಷಣ ಮಾತುಕತೆ ನಡೆಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು.

ನೌಕರರು ತಮ್ಮ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಅವರ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಪರಿಗಣಿಸಿ, ನ್ಯಾಯಯುತ ಹಾಗೂ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಶೀಘ್ರ ಕ್ರಮ ಕೈಗೊಳ್ಳಬೇಕು. ಅದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನಂತಹ ಅಗತ್ಯ ಸೇವೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.

ಸ್ಥಳೀಯ ಸಂಸ್ಥೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಅಲ್ಲಿನ ನೌಕರರ ಸೇವಾ ಭದ್ರತೆ, ಗೌರವ ಮತ್ತು ಕಲ್ಯಾಣವೂ ಅತ್ಯಂತ ಮುಖ್ಯವಾಗಿದೆ. ಆದ್ದರಿಂದ ಸರ್ಕಾರವು ಪೌರ ನೀರು ಸರಬರಾಜು ನೌಕರರ ಪ್ರತಿನಿಧಿಗಳೊಂದಿಗೆ ಶೀಘ್ರ ಮಾತುಕತೆ ನಡೆಸಿ, ಅವರ ನ್ಯಾಯಯುತ ಬೇಡಿಕೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸುತ್ತೇನೆ ಎಂದರು.


Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವ ಎನ್.ಎಸ್. ಬೋಸರಾಜು ಭೇಟಿ: ಅಂರ್ತಜಲ ವೃದ್ಧಿ ನಮ್ಮೆಲ್ಲರ ಜವಾಬ್ದಾರಿ

Suddi Udaya

ಉರುವಾಲು : ವಿಷ ಸೇವಿಸಿ ಯುವಕ ಆತ್ಮಹತ್ಯೆ

Suddi Udaya

ಶಿಶಿಲ : 9 ವರ್ಷದ ಬಾಲಕ ಅಶ್ವಿನ್ ನಿಧನ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸನ್ಮಾನ

Suddi Udaya

ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ

Suddi Udaya

ಬುರುಡೆ ಪ್ರಕರಣ: ಚಿನ್ನಯ್ಯನನ್ನು ಮಹಜರು ನಡೆಸಲು ಕರೆದುಕೊಂಡು ಹೋದ ಎಸ್.ಐ.ಟಿ

Suddi Udaya
error: Content is protected !!