September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಿಳಾ ಸಬಲೀಕರಣಕ್ಕೆ ಒತ್ತು: ಮೇಲಂತಬೆಟ್ಟುವಿನಲ್ಲಿ ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟ, ಮೇಲಂತಬೆಟ್ಟು ಇದರ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ. 21ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸೀತಾ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ರೀಮತಿ ಪ್ರತಿಮಾ ಅವರು, ಮಹಿಳೆಯರು ಎನ್‌ಆರ್‌ಎಲ್‌ಎಂ (NRLM) ಯೋಜನೆಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಆರ್ಥಿಕ ಹಾಗೂ ಸಾಮಾಜಿಕವಾಗಿ ಸಬಲರಾಗಬೇಕು ಎಂದು ಕರೆ ನೀಡಿದರು. ಉಳಿತಾಯ, ಸಾಲ ಸೌಲಭ್ಯ, ಉದ್ಯಮ ಹಾಗೂ ಜೀವನೋಪಾಯ ಚಟುವಟಿಕೆಗಳ ಮೂಲಕ ಸ್ವಸಹಾಯ ಸಂಘಗಳು ಮತ್ತಷ್ಟು ಅಭಿವೃದ್ಧಿ ಹೊಂದಬೇಕು ಎಂದು ಸಲಹೆ ನೀಡಿದರು.

ವಲಯ ಮೇಲ್ವಿಚಾರಕ ಜಯಾನಂದ ಮಾತನಾಡಿ, ಎನ್‌ಆರ್‌ಎಲ್‌ಎಂ ಯೋಜನೆಯ ಮೂಲಕ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಹಾಗೂ ಸಾಲ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಇರುವ ಅವಕಾಶಗಳ ಕುರಿತು ಮಾಹಿತಿ ನೀಡಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಜಗದೀಶ್ ಅವರು ಮಹಿಳೆಯರ ಸಂಘಟಿತ ಕಾರ್ಯವನ್ನು ಶ್ಲಾಘಿಸಿದರು. ಆರೋಗ್ಯ ಇಲಾಖೆಯ ಸಿಎಚ್‌ಒ ಇಗ್ನೇಶ್ ಅವರು ಪೌಷ್ಟಿಕ ಆಹಾರ, ಆರೋಗ್ಯಕರ ಜೀವನಶೈಲಿ ಹಾಗೂ ಕುಟುಂಬದ ಆರೋಗ್ಯ ಕಾಪಾಡುವಲ್ಲಿ ಮಹಿಳೆಯರ ಪ್ರಮುಖ ಪಾತ್ರದ ಕುರಿತು ಅರಿವು ಮೂಡಿಸಿದರು.

ಸಭೆಯಲ್ಲಿ ಎಂಬಿಕೆ ಮಲ್ಲಿಕಾ ಅವರು 2025–26ನೇ ಸಾಲಿನ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರವನ್ನು ಮಂಡಿಸಿದರು. ವರದಿ ಮತ್ತು ಲೆಕ್ಕಪತ್ರಗಳನ್ನು ಸಭೆಯಲ್ಲಿ ಸರ್ವಾನುಮತದಿಂದ ಅನುಮೋದಿಸಲಾಯಿತು. ಉತ್ತಮ ದಾಖಲಾತಿ ಹಾಗೂ ಕಾರ್ಯನಿರ್ವಹಣೆ ಮಾಡಿದ ಸಂಘಗಳು, ನಿರ್ಗಮಿತ ಪದಾಧಿಕಾರಿಗಳು ಮತ್ತು ಸದಸ್ಯರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಪದಾಧಿಕಾರಿಗಳ ಬದಲಾವಣೆ ಪ್ರಕ್ರಿಯೆ ಪೂರ್ಣಗೊಂಡು ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಲಾಯಿತು.

ಸಭೆಯ ವಿಶೇಷ ಆಕರ್ಷಣೆಯಾಗಿ ಸಂಜೀವಿನಿ ಮಹಿಳಾ ಸದಸ್ಯರು ತಯಾರಿಸಿದ ವಿವಿಧ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ನಡೆಯಿತು.

ಕಾರ್ಯಕ್ರಮದಲ್ಲಿ ಸಂಜೀವಿನಿ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು , ಮಾಜಿ ಸದಸ್ಯರು, ಪಶು ಸಖಿ, ಕೃಷಿ ಸಖಿ ಹಾಗೂ ಎಲ್‌ಸಿಆರ್‌ಪಿಗಳು (LCRP) ಉಪಸ್ಥಿತರಿದ್ದರು. ಸೌಮ್ಯ ಕಾರ್ಯಕ್ರಮ ನಿರೂಪಿಸಿದರು. ಅಶ್ವಿತಾ ಸ್ವಾಗತಿಸಿ. ಜಯಲಕ್ಷ್ಮಿ ವಂದನಾರ್ಪಣೆ ಸಲ್ಲಿಸಿದರು.

Related posts

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಯುವ ಸಂಸತ್ತು ಸ್ಪರ್ಧೆ: ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಶಿಬಾಜೆ: ಭಂಡಿಹೊಳೆಯಲ್ಲಿ ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದಿಂದ ರಸ್ತೆ ದುರಸ್ತಿ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಯೋಗ ರತ್ನ ಪ್ರಶಸ್ತಿಗೆ ಖುಷಿ. ಹೆಚ್, ಮೈಸೂರು ಆಯ್ಕೆ

Suddi Udaya

ಕಾಜಿಮುಗೇರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತರಾಮ ಹೆಬ್ಬಾರ್ ವಿಧಿವಶ

Suddi Udaya

ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: 6 ಮಂದಿಗೆ ಗಂಭೀರ ಗಾಯ

Suddi Udaya
error: Content is protected !!