ಬೆಳ್ತಂಗಡಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟವು ಸರ್ಕಾರಿ ಪದವಿಪೂರ್ವ ಕಾಲೇಜು ಅಳದಂಗಡಿಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೆeಸರರಾದ ಶಿವಪ್ರಸಾದ್ ಅಜಿಲರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ವಿದ್ಯಾರ್ಥಿಗಳು ಸಕಾರಾತ್ಮಕ ಮನೋಭಾವ ದಿಂದ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಸಮಾಜಮುಖಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯ ಶಿಕ್ಷಕರಾದ ಯಶೋಧರ ಸುವರ್ಣ, ಪ್ರೌಢಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸದಾಶಿವ ಪೂಜಾರಿ, ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಶಾಂತಿಮರಿಯ ಸಲ್ದಾನ, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಶೇಖರ್ ಮತ್ತು ಆಮಂತ್ರಣ ಪತ್ರಿಕೆಯ ವಿಜಯಕುಮಾರ್ ಜೈನ್ ಉಪಸ್ಥಿತರಿದ್ದರು.
ಸಂಸ್ಥೆಯ ಪ್ರಾಂಶುಪಾಲರಾದ ಸನ್ನಿ ಕೆ ಎಮ್ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಉಪನ್ಯಾಸಕ ಪ್ರಶಾಂತ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.











