September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತುಳು ನಮ್ಮ ತಾಯಿ ಭಾಷೆ, ಶ್ರೀಮಂತ ಸಂಸ್ಕೃತಿಯ ಪ್ರತೀಕ: ಪೀತಾಂಬರ ಹೆರಾಜೆ

ತುಳು ಭಾಷೆ ನಮ್ಮ ತಾಯಿ ಭಾಷೆಯಾಗಿದ್ದು,ಶ್ರೀಮಂತ ಸಂಸ್ಕೃತಿ ಹಾಗೂ ಪರಂಪರೆಯ ಪ್ರತೀಕವಾಗಿದೆ. ತುಳುನಾಡಿನ ನೆಲ, ಜಲ ಹಾಗೂ ಭಾಷೆಗೆ ವಿಶೇಷ ಮಹತ್ವವಿದ್ದು, ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ತುಳು ಭಾಷೆಗೆ ಕರ್ನಾಟಕ ಸರ್ಕಾರವು ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ನೀಡಿರುವುದು ಸಂತಸದ ವಿಚಾರವಾಗಿದೆ ಎಂದು ನಿವೃತ್ತ ಎಸ್‌ಪಿ ಪೀತಾಂಬರ ಹೆರಾಜೆ ತಿಳಿಸಿದ್ದಾರೆ.

ತುಳು ಭಾಷೆಗೆ ಮಾನ್ಯತೆ ನೀಡಬೇಕೆಂಬ ತುಳುವರ ಹಲವು ವರ್ಷಗಳ ಹೋರಾಟಕ್ಕೆ ಸರ್ಕಾರ ಸ್ಪಂದಿಸಿದ್ದು, ತಾಯಿನಾಡಿನ ನುಡಿಗೆ ಸಿಗಬೇಕಾದ ರಾಜಮರ್ಯಾದೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ಸಮಯದಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಸಹೋದ್ಯೋಗಿಗಳಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಸಭೆ

Suddi Udaya

ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ನಲ್ಲಿ ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಸೌಭಾಗ್ಯ ವಿಕಲಚೇತನರ ಪತ್ತಿನ‌ ಸಹಕಾರಿ ಸಂಘದ ನಿರ್ದೇಶಕರಾಗಿ ಅಶ್ರಫ್ ಆಲಿಕುಂಞಿ ಆಯ್ಕೆ

Suddi Udaya

ಎಸ್.ಕೆ.ಎಸ್.ಎಸ್.ಎಫ್ ಬೊಳ್ಮನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ನೀಡದೆ ಇದ್ದಲ್ಲಿ ಕ್ಷೇತ್ರದಲ್ಲಿ ಚಾಕರಿ ಕೆಲಸ ಮತ್ತು ರಥ ಕಟ್ಟುವ ಕೆಲಸವನ್ನು ನಿಲ್ಲಿಸ ಬೇಕಾದೀತು: ಜಿಲ್ಲಾ ಮಲೆಕುಡಿಯ ಸಂಘ

Suddi Udaya
error: Content is protected !!