September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಮೀಸಲು ಅರಣ್ಯ ಪ್ರದೇಶಕ್ಕೆ ಅಕ್ರಮ ಪ್ರವೇಶ: ಇಬ್ಬರ ವಿರುದ್ಧ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಅರಣ್ಯ ಇಲಾಖೆಯ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಮೀಸಲು ಅರಣ್ಯದೊಳಗೆ ಪ್ರವೇಶ ಮಾಡಿದ ಪ್ರಕರಣ ಸಂಬಂಧ ಇಬ್ಬರ ವಿರುದ್ಧ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯವರು ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಬಂಗ್ಲೆಗುಡ್ಡೆ ಮೀಸಲು ಅರಣ್ಯ ಪ್ರದೇಶದೊಳಗೆ ಯೂನೈಟೆಡ್ ಮೀಡಿಯಾ ಯೂಟ್ಯೂಬರ್ ಅಭಿಷೇಕ್ ಮತ್ತು ಬೆಂಗ್ಳೂರು ಪೋಸ್ಟ್ ವೆಬ್ ಸೈಟ್ ನ ಶ್ರೇಯಸ್ ಎಂಬವರು ಸೆ.20 ರಂದು ಯಾವುದೇ ಇಲಾಖೆಯ ಅನುಮತಿ ಇಲ್ಲದೆ ಅಕ್ರಮವಾಗಿ ಪ್ರವೇಶ ಮಾಡಿದಾಗ ಧರ್ಮಸ್ಥಳ ಗ್ರಾಮಸ್ಥರು ಹಿಡಿದು ಧರ್ಮಸ್ಥಳ ಪೊಲೀಸರಿಗೆ ಒಪ್ಪಿಸಿದ್ದರು. ಬಳಿಕ ಧರ್ಮಸ್ಥಳ ಪೊಲೀಸರು ಬೆಳ್ತಂಗಡಿ ಅರಣ್ಯ ಇಲಾಖೆಗೆ ಇಬ್ಬರನ್ನು ಒಪ್ಪಿಸಿದ್ದರು. ಈ ಬಗ್ಗೆ ಧರ್ಮಸ್ಥಳದ ನಿವಾಸಿ ನಿತಿನ್ ಎಂಬವರು ಬೆಳ್ತಂಗಡಿ ವಲಯ ಅರಣ್ಯ ಇಲಾಖೆಗೆ ದೂರು ನೀಡಿದ್ದರು.

ಈ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯವರು ದೂರಿನ ಬಗ್ಗೆ ವಿಚಾರಣೆ ನಡೆಸಿ ಬಳಿಕ ವರದಿ ತಯಾರಿಸಿ ಸೆ.21 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಪ್ರಕರಣ ದಾಖಲಿಸಲು ಅನುಮತಿಗೆ ಕೇಳಿದ್ದರು. ನ್ಯಾಯಾಲಯ ಸೆ.22 ರಂದು ಅನುಮತಿ ನೀಡಿದ ಬಳಿಕ ಸಂಜೆ ಕರ್ನಾಟಕ ಅರಣ್ಯ ಕಾಯ್ದೆ ಕಲಂ 24C(ii) ಅಡಿಯಲ್ಲಿ ಶ್ರೇಯಸ್ ಮತ್ತು ಅಭಿಷೇಕ್ ವಿರುದ್ಧ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಸೆ.22 ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

Suddi Udaya

ಬಿ ಕೆ ಹರಿಪ್ರಸಾದ್‌ರವರಿಗೆ ನೂತನ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿಗಳಾಗಿ ನೇಮಕ ಮಾಡುವಂತೆ ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರ ಸಂಘದಿಂದ ಆಗ್ರಹ: ಸಂಜೀವ ಪೂಜಾರಿ

Suddi Udaya

ಅರಸಿನಮಕ್ಕಿಯಲ್ಲಿ ನಾಟಿ ಕೋಳಿ ಮೊಟ್ಟೆ ಸಾಕಾಣಿಕೆ ತರಬೇತಿ

Suddi Udaya

ಸಹಕಾರಿ ಸಪ್ತಾಹದಲ್ಲಿ ಸವಣಾಲು ಹಾ.ಉ. ಸ. ಸಂಘದ ಸದಸ್ಯ ಲೋಕೇಶ್ ಗೌಡ ರಿಗೆ “ಕ್ಷೀರ ರತ್ನ” ಪ್ರಶಸ್ತಿ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ರಕ್ತದಾನದ ಜಾಗೃತಿ – ಮಾಹಿತಿ ಕಾರ್ಯಾಗಾರ

Suddi Udaya
error: Content is protected !!