September 23, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಸ.ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ರವರಿಗೆ ರಾಜ್ಯಮಟ್ಟದ “ಶಿಕ್ಷಣ ಸೇವಾ ರತ್ನ” ಪ್ರಶಸ್ತಿ

ಬೆಳ್ತಂಗಡಿ: ಡಾ| ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನಾಚರಣೆಯ ಅಂಗವಾಗಿ ಸೆ.20ರಂದು ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆದ 2026-27 ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ “ಶಿಕ್ಷಣ ಸೇವಾ ರತ್ನ” ಪ್ರಶಸ್ತಿಯನ್ನು ನಡ ಸ.ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ರವರಿಗೆ ನೀಡಿ ಗೌರವಿಸಲಾಯಿತು.

ಇವರ ಶಿಕ್ಷಣ ಕ್ಷೇತ್ರದ ಸೇವೆ, ಭೋದನಾ ಕೌಶಲ್ಯ, ಮಾರ್ಗದರ್ಶನ , ನಿಸ್ವಾರ್ಥ ಸೇವೆ , ಹೊಣೆಗಾರಿಕೆ, ಜವಾಬ್ದಾರಿ, ಆಡಳಿತ ನಿರ್ವಹಣೆ, ಸಂಪನ್ಮೂಲ ವ್ಯಕ್ತಿ, ಸಮರ್ಪಣಾ ಭಾವನೆ, ಶಿಕ್ಷಣ ಸಂಯೋಜಕಿಯಾದ ಶ್ರೀಮತಿ ಪುಷ್ಪಾ ರವರಿಗೆ ಪ್ರಶಸ್ತಿಯನ್ನು ನೀಡಲಾಯಿತು.

ಈ ಹಿಂದೆ ಇವರಿಗೆ 2001ರಲ್ಲಿ ಜನಮೆಚ್ಚಿದ ಶಿಕ್ಷಕಿ ಪ್ರಶಸ್ತಿ, 2010 ರಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಇವರು ಉಜಿರೆಯ ನಿವಾಸಿಯಾಗಿದ್ದು ಕೆಪಿಎಸ್ ಸಿ ಪುಂಜಾಲಕಟ್ಟೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ವಿಶ್ವನಾಥ್ ರವರ ಪತ್ನಿ.

Related posts

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Suddi Udaya

ಮಲವಂತಿಗೆ ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯ ಮಾಪನ: ಲಾಯಿಲ ವಿದ್ಯಾರ್ಥಿನಿ ತನ್ವಿ ಭಟ್ ಎಂ ಅವರಿಗೆ 624 ಅಂಕ, ರಾಜ್ಯಕ್ಕೆ 2 ನೇ ಸ್ಥಾನ, ಬೆಳ್ತಂಗಡಿ ತಾಲೂಕಿಗೆ ಪ್ರಥಮ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ಕಚೇರಿಯ ವಿಜಯ ರೈ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಆರಂಬೋಡಿಯ ಚೈತ್ರಾ ವಿ. ಪೂಜಾರಿರವರು ವಿಟ್ಲ ಕನ್ಯಾನ ಸ.ಪ್ರ. ದರ್ಜೆ ಕಾಲೇಜಿನ. ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಆಯ್ಕೆ

Suddi Udaya

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya
error: Content is protected !!