September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಪತ್ನಿ ಚಿನ್ನಮ್ಮ ರವರ ಶವ ಕೆರೆಯಲ್ಲಿ ಪತ್ತೆಯಾದ ಐದು ದಿನದ ಬಳಿಕ ಪತಿ ತನಿಯಪ್ಪ ಗೌಡ ನೇಣುಬಿಗಿದು ಆತ್ಮಹತ್ಯೆ

ಶಿಶಿಲ : ಇಲ್ಲಿಯ ಗುಂಡಿಕ್ಕಾಡು ನಿವಾಸಿ ತನಿಯಪ್ಪ ಗೌಡ ರವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.23 ರಂದು ಬೆಳಕಿಗೆ ಬಂದಿದೆ.

ಎರಡು ಮೂವರು ದಿನಗಳಿಂದ ತನಿಯಪ್ಪ ರವರು ಎಲ್ಲಿಯೂ ಪತ್ತೆಯಾಗದ ಕಾರಣ ಶೌರ್ಯ ವಿಪತ್ತು ನಿರ್ವಹಣಾ ತಂಡ ಸದಸ್ಯರಾದ ರಾಧಾಕೃಷ್ಣ ಗುತ್ತು, ಕುಶಾಲಪ್ಪ ಗೌಡ ಬದ್ರಿಜಾಲು, ಸುಬ್ರಾಯ ಗೌಡ ಬದ್ರಿಜಾಲು, ಶೀನಪ್ಪ ನಾಯ್ಕ ಮುಚ್ಚಿರಡ್ಕ ರವರು ಹುಡುಕಾಟ ನಡೆಸಿದಾಗ ತನಿಯಪ್ಪ ಗೌಡರು ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ.

ಇತ್ತೀಚೆಗೆ ಅವರ ಪತ್ನಿ ಚಿನ್ನಮ್ಮ ರವರ ಮೃತದೇಹ ಅವರ ಪಕ್ಕದ ಜಮೀನಿನ ಕೆರೆಯಲ್ಲಿ ಪತ್ತೆಯಾಗಿದ್ದು ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ ಈ ಬಗ್ಗೆ ಚಿನ್ನಮ್ಮ ರವರ ಸಹೋದರ ಗಂಗಾಧರ ಗೌಡರವರು ಮೃತರ ಮರಣದಲ್ಲಿ ಸಂಶಯ ಕಂಡು ಬರುತ್ತದೆ ಎಂಬುದಾಗಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಪತಿ ತನಿಯಪ್ಪ ರವರ ಮೃತದೇಹ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದು ಪೊಲೀಸರ ತನಿಖೆಯಿಂದ ನಿಖರ ಕಾರಣ ತಿಳಿದುಬರಬೇಕಿದೆ.

ಮೃತರು ಮಕ್ಕಳಾದ ಸತ್ಯಶ್ರೀ, ಆದಿತ್ಯ ರವರನ್ನುಅಗಲಿದ್ದಾರೆ.

Related posts

ಸೇಕ್ರೆಡ್ ಹಾರ್ಟ್ ಪ. ಪೂ ಕಾಲೇಜಿನ ಅನೀಶ್ ಎನ್.ಸಿಸಿ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya

ಅಳದಂಗಡಿ ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ: 18216 ಮತಗಳ ಅಂತರದಿಂದ ಹರೀಶ್ ಪೂಂಜ ಪ್ರಚಂಡ ಗೆಲುವು: ರಕ್ಷಿತ್ ಶಿವರಾಂಗೆ ಸೋಲು

Suddi Udaya

ಭಾರೀ ಗಾಳಿ ಮಳೆ: ನೆರಿಯ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಹಾನಿ

Suddi Udaya

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

Suddi Udaya

ಬೆಳಾಲು ಎನ್ ಎಸ್ ಎಸ್ ಶಿಬಿರಾರ್ಥಿ ಮತ್ತು ಪಂಚಾಯತ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya
error: Content is protected !!