September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಡಗಕಾರಂದೂರು ಶಾಲೆಯಲ್ಲಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ಯಶಸ್ವಿ

ಬಡಗಕಾರಂದೂರು: ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಹಾಗೂ ಸತ್ಯದೇವತೆ ದೇವಸ್ಥಾನದ ಸಮೀಪದಲ್ಲಿರುವ ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸೆ 22ರಂದು ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟವು ಯಶಸ್ವಿಯಾಗಿ ನಡೆಯಿತು.

ಗ್ರಾಮೀಣ ಕ್ರೀಡೆಯಾದ ಕಬಡ್ಡಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಆಯೋಜಿಸಲಾದ ಈ ಪಂದ್ಯಾಟದಲ್ಲಿ 14 ವರ್ಷ ವಯೋಮಾನದ ಬಾಲಕ ಬಾಲಕಿಯರು ಉತ್ಸಾಹದಿಂದ ಪಾಲ್ಗೊಂಡರು. ಪಂದ್ಯಾಟವು ಕ್ರೀಡಾಭಿಮಾನಿಗಳಲ್ಲಿ ಹಾಗೂ ಗ್ರಾಮಸ್ಥರಲ್ಲಿ ವಿಶೇಷ ಸಂತಸ ಮೂಡಿಸಿತು.

ಪಂದ್ಯಾಟದ ಯಶಸ್ವಿಗೆ ಅಳದಂಗಡಿ ಅರಸರಾದ ಪದ್ಮಪ್ರಸಾದ್ ಅಜಿಲರು ಸಂಪೂರ್ಣ ಸಹಕಾರ ನೀಡಿದರು. ಶಾಲೆಯನ್ನು ದತ್ತು ಸ್ವೀಕರಿಸಿರುವ ಶಿವಪ್ರಸಾದ್ ಅಜಿಲರು ಕೂಡ ಕಾರ್ಯಕ್ರಮಕ್ಕೆ ಅಗತ್ಯ ಸಹಕಾರವನ್ನು ನೀಡಿದರು.

ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರು ಹಾಗೂ ಸದಸ್ಯರು, ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ, ಹಳೆ ವಿದ್ಯಾರ್ಥಿಗಳು, ಶಾಲಾ ಪೋಷಕರು ಹಾಗೂ ವಿದ್ಯಾರ್ಥಿಗಳು ಪಂದ್ಯಾಟದ ಯಶಸ್ಸಿಗೆ ಸಹಕಾರ ನೀಡಿದರು. ಎಲ್ಲರ ಒಗ್ಗಟ್ಟಿನ ಪ್ರಯತ್ನದಿಂದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟವು ಉತ್ತಮ ರೀತಿಯಲ್ಲಿ ನೆರವೇರಿತು.

ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ, ತಂಡದ ಮನೋಭಾವ ಹಾಗೂ ಶಿಸ್ತು ಬೆಳೆಸಲು ಸಹಕಾರಿಯಾಗುತ್ತವೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

Suddi Udaya

ಜು.8ರಿಂದ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನ.30: ಬಜಿರೆ ಹೊಸಪಟ್ಣ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಆಶ್ರಯದಲ್ಲಿ ಹೊನಲು ಬೆಳಕಿನ ಪುರುಷರ 60 ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ತಾಲೂಕು ಮರಾಟಿ ಸಂಘದ ಗೌರವಾಧ್ಯಕ್ಷ ಲಿಂಗಪ್ಪ ನಾಯ್ಕ್ ನಿಧನ

Suddi Udaya
error: Content is protected !!