September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಲಯ ಮಟ್ಟದ ಪುರುಷರ ಶೆಟಲ್ ಬ್ಯಾಡ್ಮಿಂಟನ್ : ಎಸ್.ಡಿ.ಎಂ ಚಾಂಪಿಯನ್ಸ್

ಉಜಿರೆ : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ಆರ್‌ಜಿಯುಹೆಚ್‌ಎಸ್) ಬೆಂಗಳೂರು ಹಾಗೂ ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಮಂಗಳೂರು ವಲಯ ಮಟ್ಟದ ಪುರುಷರ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನ ಮಹಾವಿದ್ಯಾಲಯದ ಪುರುಷರ ತಂಡವು ಅಮೋಘ ಸಾಧನೆ ತೋರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ವಲಯದ ವಿವಿಧ ವೈದ್ಯಕೀಯ ಸಂಸ್ಥೆಗಳ ಒಟ್ಟು 26 ತಂಡಗಳು ಭಾಗವಹಿಸಿದ್ದ ಈ ಪಂದ್ಯಾವಳಿಯಲ್ಲಿ ಎಸ್‌ಡಿಎಂ ಕಾಲೇಜು ತಂಡವು ಆರಂಭದಿಂದಲೇ ಅತ್ಯುತ್ತಮ ಆಟ ಪ್ರದರ್ಶಿಸಿತು. ತೀವ್ರ ಪೈಪೋಟಿಯಿಂದ ಕೂಡಿದ್ದ ಸೆಮಿಫೈನಲ್ ಪಂದ್ಯದಲ್ಲಿ ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ತಂಡವನ್ನು 3-1 ಅಂತರದಿಂದ ಪರಾಭವಗೊಳಿಸಿ ಫೈನಲ್ ತಲುಪಿತು. ತರುವಾಯ ನಡೆದ ರೋಚಕ ಫೈನಲ್ ಹೆಣಗಾಟದಲ್ಲಿ ಮಂಗಳೂರಿನ ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪತಿ ಮೆಡಿಕಲ್ ಕಾಲೇಜು ತಂಡದ ವಿರುದ್ಧ 3-1 ಅಂತರದ ಭರ್ಜರಿ ಜಯ ಸಾಧಿಸಿ ಚಾಂಪಿಯನ್‌ಷಿಪ್ ಕಿರೀಟವನ್ನು ತನ್ನದಾಗಿಸಿಕೊಂಡಿತು.

ಈ ಪಂದ್ಯಾವಳಿಯಲ್ಲಿ ವಲಯ ಮಟ್ಟದ ಚಾಂಪಿಯನ್ ಆಗಿ ಮೂಡಿಬಂದಿರುವ ಉಜಿರೆ ಎಸ್‌ಡಿಎಂ ತಂಡವು ಅಕ್ಟೋಬರ್ 1 ರಂದು ಬೆಂಗಳೂರಿನ ಆದಿತ್ಯ ಕಾಲೇಜಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಅಂತರ್ ವಲಯ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಆಯ್ಕೆಯಾಗಿದೆ. ತಂಡವನ್ನು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಧರ್ಮೇಂದ್ರ ಕುಮಾರ್ ಸಂಯೋಜಿಸಿದರು.

ಸಾಧಕ ಕ್ರೀಡಾಪಟುಗಳನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರಾದ ಡಾ. ಶಿವಪ್ರಸಾದ್ ಶೆಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿ, ಮುಂದಿನ ಹಂತದ ಪಂದ್ಯಾವಳಿಗೆ ಶುಭ ಹಾರೈಸಿದ್ದಾರೆ.

Related posts

ಗುರುವಾಯನಕೆರೆ ಶ್ರೀ ಕ್ಷೇತ್ರಮಂಚಕಲ್ಲಿನಲ್ಲಿ ದೈವಗಳಿಗೆ ಪರ್ವ ಸೇವೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ದಿ. ಪ್ರವೀಣ್ ನೆಟ್ಟಾರುರವರ ಮನೆಗೆ ಬೆಳ್ತಂಗಡಿ ಯುವಮೋರ್ಚಾ ಮಂಡಲದ ಪದಾಧಿಕಾರಿಗಳ ಭೇಟಿ

Suddi Udaya

ರಾಷ್ಟ್ರ ಪ್ರಶಸ್ತಿ ವಿಜೇತ, ನಿರ್ದೇಶಕ ಚೇತನ್ ಮುಂಡಾಡಿ ರವರ ಬಹುಭಾಷಾ ಚಿತ್ರಕ್ಕೆ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಭವನದಲ್ಲಿ ಆಡಿಷನ್

Suddi Udaya

ಮೌಲ್ಯ ನಾಯಕ್ ರವರಿಗೆ ಸಂಸ್ಕೃತ ಒಲಂಪಿಯಾಡ್ ನಲ್ಲಿ ಸ್ವರ್ಣಪದಕ

Suddi Udaya

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

Suddi Udaya
error: Content is protected !!