September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸುಶೀಲ ಕರ್ತವ್ಯದಿಂದ ಅಮಾನತು

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚಿಸಲು ಗ್ರಾಮಸಭೆ ಕರೆದು ಸಭೆಗೆ ಗೈರು ಹಾಜರಾಗಿ ಗ್ರಾಮಸ್ಥರ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಶಿರ್ಲಾಲು ಗ್ರಾಮಪಂಚಾಯತು ಅಭಿವೃದ್ಧಿ ಅಧಿಕಾರಿ ಸುಶೀಲ ಇವರನ್ನು ಕರ್ತವ್ಯದಿಂದ ಅಮಾನತು ಗೊಳಿಸಿ ದ.ಕ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಆದೇಶ ಹೊರಡಿಸಿದ್ದಾರೆ.

ಶಿರ್ಲಾಲು ಗ್ರಾಮಪಂಚಾಯತಿನಲ್ಲಿ ಕಸ್ತೂರಿ ರಂಗನ್ ವರದಿಯ ಬಗ್ಗೆ ಚರ್ಚಿಸಲು ವಿಶೇಷ ಗ್ರಾಮಸಭೆಯನ್ನು ಸೆ.25 ರಂದು ನಡೆಸಲು ನಿಗಧಿಪಡಿಸಲಾಗಿತ್ತು. ಅಭಿವೃದ್ಧಿ ಅಧಿಕಾರಿಯವರು ಈ ಸಭೆಯನ್ನು ಸೆ.21 ರಂದು ನಿಗಧಿ ಪಡಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದರು. ಆದರೆ ಸಭೆಗೆ ಜನರು ಬಂದರೂ ಅಭಿವೃದ್ಧಿ ಅಧಿಕಾರಿ ಗೈರುಹಾಜರಾಗಿದ್ದರು ಇದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಈಬಗ್ಗೆ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರೂ ಗ್ರಾ.ಪಂ ಗೆ ಆಗಮಿಸಿ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು. ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಲ್ಲಿಯೂ ಕೇಳಿಕೊಂಡಿದ್ದರು.

ಘಟನೆಯ ಬಗ್ಗೆ ಪರಿಶೀಲನೆ ನಡೆಸಿದ ಬೆಳ್ತಂಗಡಿ ತಾಲೂಕು ಪಂಚಾಯತು ಕಾರ್ಯನಿರ್ವಹಣಾಧಿಕಾರಿ ಯವರು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರಿಗೆ ವರದಿ ನೀಡಿದ್ದು ಈ ವರದಿಯ ಆಧಾರದ ಮೇಲೆ ಶಿರ್ಲಾಲು ಗ್ರಾಮೊಂಚಾಯತು ಅಭಿವೃದ್ಧಿ ಅಧಿಕಾರಿ ಸುಶೀಲ ಅವರನ್ನು ಕೆಲಸದಿಂದ ಅಮಾನತುಗೊಳಿಸಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಸೆ 22 ರಂದು ಆದೇಶ ಹೊರಡಿಸಿದ್ದಾರೆ.

Related posts

ತೆಕ್ಕಾರು ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಕ್ರೈಸ್ಟ್ ಅಕಾಡಮೆ (ಐಸಿಎಸ್ಇ) ಮುಂಡಾಜೆ ಶಾಲೆಗೆ ಶೇ 100 ಫಲಿತಾಂಶ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ ಆಡಳಿತ ಮಂಡಳಿಯವರಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಪಡ್ಡoದಡ್ಕ ನೂರುಲ್ ಹುಧಾ ಮಸೀದಿ ವತಿಯಿಂದ ಈದ್ ಮಿಲಾದ್ ರ‍್ಯಾಲಿ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya
error: Content is protected !!