27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬ್ಯಾಂಕ್ ಮುಷ್ಕರದ ಹಿನ್ನೆಲೆ : ಸೆ. 27 ರಂದು ಎಲ್ಲಾ ಬ್ಯಾಂಕ್ ಗಳು ಓಪನ್

ಬೆಳ್ತಂಗಡಿ: ಸೆಪ್ಟೆಂಬರ್ 28 ರಿಂದ 3 ದಿನಗಳ ಕಾಲ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರದ ಹಿನ್ನೆಲೆಯಲ್ಲಿ, ಗ್ರಾಹಕರ ಹಿತದೃಷ್ಟಿಯಿಂದ ಸೆಪ್ಟೆಂಬರ್ 27ರ ಭಾನುವಾರದಂದು ದೇಶದ ಎಲ್ಲಾ ಸಾರ್ವಜನಿಕ ವಲಯದ ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಕಾರ್ಯನಿರ್ವಹಿಸಲಿವೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಪ್ರಕಟಿಸಿದೆ.

ಸೆಪ್ಟೆಂಬರ್ 26 (4ನೇ ಶನಿವಾರ) ಹಾಗೂ ಸೆಪ್ಟೆಂಬರ್ 27 (ಭಾನುವಾರ) ರಜೆಯ ನಂತರ ಸತತ 3 ದಿನ ಮುಷ್ಕರ ನಡೆಯುವುದರಿಂದ, ಒಟ್ಟು 5 ದಿನ ಬ್ಯಾಂಕಿಂಗ್ ಸೇವೆ ಸ್ಥಗಿತಗೊಳ್ಳುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಆಲ್ಬಐ ಅನುಮೋದನೆಯೊಂದಿಗೆ ಭಾನುವಾರ ಬ್ಯಾಂಕ್ ಶಾಖೆಗಳು, ಕಚೇರಿಗಳು ಹಾಗೂ ಕರೆನ್ಸಿ ಚೆಸ್ಟ್ ಗಳು ಪೂರ್ಣ ಪ್ರಮಾಣದಲ್ಲಿ ತೆರೆದಿರಲಿವೆ.

ವಾರಕ್ಕೆ 5 ದಿನಗಳ ಬ್ಯಾಂಕಿಂಗ್ ಜಾರಿ, ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ಉದ್ಯೋಗಿಗಳು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಸಾರ್ವಜನಿಕರು ತುರ್ತು ವಹಿವಾಟಿಗೆ ಯುಪಿಐ, ಇಂಟರ್ನೆಟ್ ಬ್ಯಾಂಕಿಂಗ್ ಹಾಗೂ ಎಟಿಎಂನಂತಹ ಡಿಜಿಟಲ್ ಸೇವೆಗಳನ್ನು ಬಳಸಿಕೊಳ್ಳುವಂತೆ ಸೂಚಿಸಲಾಗಿದೆ.

Related posts

ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿಯಲ್ಲಿ ಮನೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜ ಹಾಗೂ ಅಧಿಕಾರಿಗಳ ಭೇಟಿ, ಶೀಘ್ರ ಕ್ರಮಕ್ಕೆ ಸೂಚನೆ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಬೆಂದ್ರಾಳ ಸೈಂಟ್ ಸಾವಿಯೋ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾ ರವರಿಗೆ ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯಿಂದ ವಾರ್ಷಿಕ ಮಹಾಸಭೆ: ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!