27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ. 2: ಗಾಂಧಿ ಜಯಂತಿ ಪ್ರಯುಕ್ತ ಧರ್ಮಸ್ಥಳದಲ್ಲಿ ಜಿಲ್ಲಾ ಮಟ್ಟದ ಜನಜಾಗೃತಿ ಸಮಾವೇಶ: ತಾ. ಜನಜಾಗೃತಿ ವೇದಿಕೆ ಸಭೆಯಲ್ಲಿ ನಿರ್ಧಾರ

ಬೆಳ್ತಂಗಡಿ: ಮದ್ಯವರ್ಜನ ಶಿಬಿರಗಳು ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳ ಮೂಲಕ ವ್ಯಸನಿಗಳ ಬದುಕು ಕಟ್ಟುವ ಮಹಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಜನಜಾಗೃತಿ ವೇದಿಕೆಯ ವತಿಯಿಂದ ಅ‌. 2 ರ ಗಾಂಧಿ ಜಯಂತಿಯಂದು
ಧರ್ಮಸ್ಥಳದಲ್ಲಿ ಜಿಲ್ಲಾ ಮಟ್ಟದ ಜನಜಾಗೃತಿ ಸಮಾವೇಶ ಹಾಗೂ ನವಜೀವನ ಸಮಿತಿ ಸದಸ್ಯರ ಸಮ್ಮಿಳನ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಯಿತು.

ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಗಿರೀಶ್ ಕೆ.ಎಸ್ ವೇಣೂರು ಅವರ ಅಧ್ಯಕ್ಷತೆಯಲ್ಲಿ ಎಸ್.ಡಿ.ಎಂ ಕಲಾಭವನ ಬೆಳ್ತಂಗಡಿ ಯಲ್ಲಿ ನಡೆದ ತಾಲೂಕು ವೇದಿಕೆಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆಯ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರುಗಳಾದ ಪ್ರತಾಪಸಿಂಹ ನಾಯಕ್, ಡಿ.ಎ ರಹಿಮಾನ್, ಕಿಶೋರ್ ಹೆಗ್ಡೆ, ಶಾರದಾ ಆರ್ ರೈ, ತಿಮ್ಮಪ್ಪ ಗೌಡ ಬೆಳಾಲು ಮತ್ತು ಎಂ.ಎ ಕಾಸಿಂ ಮಲ್ಲಿಗೆಮನೆ, ಗ್ರಾ.‌ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಖಿಲ‌ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿ ವಿವೇಕ್ ವಿನ್ಸೆಂಟ್ ಪಾಯಸ್ ಕಾರ್ಯಯೋಜನೆಗಳನ್ನು ಮಂಡಿಸಿದರು. ಕಾರ್ಯಕ್ರಮದ ರೂಪುರೇಷೆಗಳನ್ನು ಅಂತಿಮಗೊಳಿಸಿ ತಾಲೂಕಿನ 18 ವಲಯಗಳಲ್ಲಿ ಮಂಗಳವಾರಕ್ಕಿಂತ ಮುಂಚೆ ವಲಯವಾರು ಸಭೆಗಳನ್ನು ಕೈಗೊಂಡು ಕಾರ್ಯಕ್ರಮದ ಯಶಸ್ವಿಗೆ ಸಿದ್ಧತೆ ನಡೆಸುವ ಬಗ್ಗೆ ತೀರ್ಮಾನಿಸಲಾಯಿತು.
ಜ.‌ಜಾಗೃತಿ ವೇದಿಕೆಯ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ತಾ
ಯೋಜನಾಧಿಕಾರಿಗಳಾದ ಯಶೋಧರ ಬೆಳ್ತಂಗಡಿ ಸ್ವಾಗತಿಸಿ, ಹರೀಶ್ ಗುರುವಾಯನಕೆರೆ ವಂದಿಸಿದರು.

Related posts

ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ರಾಜ್ಯಮಟ್ಟದ ಕ್ರೀಡಾಕೂಟ: ಮುಂಡಾಜೆ ಸರಸ್ವತಿ ಶಾಲಾ ವಿದ್ಯಾರ್ಥಿ ಜೀವಿತ ಬಿ.ಎಸ್ ಕುಮಿಟಿ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ

Suddi Udaya

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

Suddi Udaya

ಕೊಕ್ಕಡ ಗ್ರಾ.ಪಂ. ನಿಂದ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ಹಣ ಎಗರಿಸುವುದನ್ನು ತಡೆಯುವ ಸಲುವಾಗಿ ಬ್ಯಾಂಕ್‌ನ ಪ್ರತಿನಿಧಿಗಳೊಂದಿಗೆ ತುರ್ತು ಸಭೆ

Suddi Udaya

ಗುರುವಾಯನಕೆರೆ ವ್ಯಾಪ್ತಿಯಲ್ಲಿ ದಾಖಲೆಗಳಿದ್ದ ಪರ್ಸ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ

Suddi Udaya

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭದ ಶೋಭಾಯಾತ್ರೆಗೆ ಉಜಿರೆಯಲ್ಲಿ ಗಣ್ಯರಿಂದ ಚಾಲನೆ

Suddi Udaya
error: Content is protected !!