27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ‘ಮಂಕುತಿಮ್ಮನ ಕಗ್ಗ – ಜೀವನ ಮೌಲ್ಯ’ ವಿಶೇಷ ಉಪನ್ಯಾಸ ಕಾರ್ಯಕ್ರಮ

ಉಜಿರೆ : ಮಂಕುತಿಮ್ಮನ ಕಗ್ಗವು ಕೇವಲ ಕಾವ್ಯ ಸಂಕಲನವಾಗಿರದೆ ಬದುಕನ್ನು ಅರ್ಥೈಸುವ ಮಹತ್ವದ ಗ್ರಂಥವಾಗಿದೆ. ಕಗ್ಗದಲ್ಲಿರುವ ಜೀವನ ದರ್ಶನ ಮತ್ತು ಸಾತ್ವಿಕ ಚಿಂತನೆಗಳು ಸಕಾರಾತ್ಮಕ ಜೀವನದೃಷ್ಟಿಯನ್ನು ಬೆಳೆಸಲು ಸಹಕಾರಿಯಾಗಿದೆ. ಕಗ್ಗದಲ್ಲಿನ ಪ್ರತಿಯೊಂದು ಸಾಲುಗಳಲ್ಲಿ ಮಾನವನ ಜೀವನಾನುಭವಗಳ ಸಾರವನ್ನು ಒಳಗೊಂಡಿದ್ದು, ಸುಖ-ದುಃಖ, ಯಶಸ್ಸು-ವಿಫಲತೆ, ಆತ್ಮವಿಶ್ವಾಸ, ಸಹನೆ, ಮಾನವೀಯತೆ ಹಾಗೂ ಸಾಮಾಜಿಕ ಜವಾಬ್ದಾರಿಗಳ ಬಗ್ಗೆ ಅಮೂಲ್ಯ ಸಂದೇಶಗಳನ್ನು ನೀಡುತ್ತದೆ ಎಂದು ನಾವೂರಿನ ಧಾರ್ಮಿಕ ಚಿಂತಕ, ನಾವೂರಿನ ಆರೋಗ್ಯ ಕ್ಲಿನಿಕ್‌ನ ಡಾ. ಪ್ರದೀಪ್ ಆಟಿಕುಕ್ಕೆ ಅಭಿಪ್ರಾಯ ಪಟ್ಟರು.

ಇವರು ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಮಹಾವಿದ್ಯಾಲಯದ ಸೆಮಿನಾರ್ ಹಾಲ್‌ನಲ್ಲಿ ಆಯೋಜಿಸಲಾದ “ಮಂಕುತಿಮ್ಮನ ಕಗ್ಗ – ಜೀವನ ಮೌಲ್ಯ” ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಉಪನ್ಯಾಸ ನೀಡಿದರು.

ಇಂದಿನ ವೇಗದ ಮತ್ತು ಸ್ಪರ್ಧಾತ್ಮಕ ಜೀವನದಲ್ಲಿ ಯುವಜನತೆ ಅನೇಕ ಸವಾಲುಗಳನ್ನು ಎದುರಿಸುತ್ತಿದ್ದು, ಮಾನಸಿಕ ಒತ್ತಡ ಮತ್ತು ಗೊಂದಲಗಳಿಂದ ಹೊರಬರಲು ಮಂಕುತಿಮ್ಮನ ಕಗ್ಗದ ಚಿಂತನೆಗಳು ಮಾರ್ಗದರ್ಶನ ನೀಡುತ್ತವೆ. ಜೀವನದಲ್ಲಿ ಯಶಸ್ಸಿನ ಹಾದಿಯಲ್ಲಿ ಸಾಗಲು ಜ್ಞಾನದ ಜೊತೆಗೆ ಉತ್ತಮ ಮೌಲ್ಯಗಳು, ನೈತಿಕತೆ ಮತ್ತು ಮಾನವೀಯ ಗುಣಗಳು ಅತ್ಯಗತ್ಯವಾಗಿವೆ ಎಂದು ಬದುಕಿನ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಕುರಿತು ಕಗ್ಗದ ಆಯ್ದ ಪದ್ಯಗಳ ಮೂಲಕ ವಿವರಿಸಿದರು.

ಕಗ್ಗದಲ್ಲಿ ಪ್ರತಿಪಾದಿಸಲಾದ ತತ್ವಗಳು ಇಂದಿನ ಸಮಾಜಕ್ಕೂ ಪ್ರಸ್ತುತವಾಗಿದ್ದು, ವಿದ್ಯಾರ್ಥಿಗಳು ಅದರ ಸಂದೇಶಗಳನ್ನು ಅಳವಡಿಸಿಕೊಂಡರೆ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಜೀವನದ ಪ್ರತಿಯೊಂದು ಹಂತದಲ್ಲಿಯೂ ಆತ್ಮಾವಲೋಕನ, ಕರ್ತವ್ಯನಿಷ್ಠೆ ಮತ್ತು ಸಕಾರಾತ್ಮಕ ಚಿಂತನೆಗಳ ಅಗತ್ಯತೆಯನ್ನು ಅವರು ಉದಾಹರಣೆಗಳ ಮೂಲಕ ತಿಳಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರು ಮಾತನಾಡಿ, ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಸಾಹಿತ್ಯ ಮತ್ತು ಮೌಲ್ಯಾಧಾರಿತ ಚಿಂತನೆಗಳು ಅತ್ಯಗತ್ಯವಾಗಿದ್ದು, ಮಂಕುತಿಮ್ಮನ ಕಗ್ಗದ ಸಂದೇಶಗಳು ಯುವಜನತೆಗೆ ಬದುಕಿನ ದಾರಿದೀಪವಾಗಿವೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ ಅವರು ವಹಿಸಿ, ಕನ್ನಡ ಸಾಹಿತ್ಯವು ಜೀವನ ಮೌಲ್ಯಗಳನ್ನು ಪೀಳಿಗೆಯಿಂದ ಪೀಳಿಗೆಗೆ ವರ್ಗಾಯಿಸುವ ಶಕ್ತಿಯುತ ಮಾಧ್ಯಮವಾಗಿದ್ದು, ಯುವಜನತೆ ಸಾಹಿತ್ಯದೊಂದಿಗೆ ಹೆಚ್ಚು ಬೆರೆಯಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ. ಯದುಪತಿ ಗೌಡ ಅವರು ಉಪಸ್ಥಿತರಿದ್ದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಅವಿನಾಶ್ ಕೃಷ್ಣ, ಗಾನವಿ ಮತ್ತು ನವ್ಯ ಗೀತೆ ಗಾಯನ ಹಾಡಿದರು.

ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಮತ್ತು ಸಾಹಿತ್ಯಾಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಕೃಷ್ಣಪ್ರಸಾದ್ ಪಿ. ಎ. ಸಂಯೋಜಿಸಿದರು. ಉಪನ್ಯಾಸಕ ರಕ್ಷಿತ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಮಂಕುತಿಮ್ಮನ ಕಗ್ಗದ ಮೂಲಕ ಜೀವನದ ಮೌಲ್ಯಗಳನ್ನು ಅರಿಯುವ ಮತ್ತು ಅವುಗಳನ್ನು ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳುವ ಸಂದೇಶವನ್ನು ಸಾರಿದ ಈ ಕಾರ್ಯಕ್ರಮವು ಅರ್ಥಪೂರ್ಣವಾಗಿ ನೆರವೇರಿತು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ನಾವೂರು ಬೃಹತ್ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು

Suddi Udaya

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸ.ಸಂಘದ-ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ಹರೀಶ್ ರಾವ್ ಕಾಯಡ ಆಯ್ಕೆ

Suddi Udaya

ಮುಂಡೂರು  ನಾಗ ಕಲ್ಲುರ್ಟಿ ದೈವಸ್ಥಾನ ಮಂಗಳಗಿರಿಯಲ್ಲಿ ನಾಗರ ಪಂಚಮಿ ಆಚರಣೆ

Suddi Udaya

ಕುಸಿಯುವ ಮೊದಲು ಹೊಸ ಸೇತುವೆ ನಿರ್ಮಾಣವಾಗುವುದೇ…? ಚುನಾವಣೆ ಬಹಿಷ್ಕಾರ ಹಾಕಿದರೂ ಕ್ಯಾರೇ ಅನ್ನದ ಅಧಿಕಾರಿಗಳು…!!!

Suddi Udaya
error: Content is protected !!