September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.28- ಅ.4: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ 28ನೇ ವರ್ಷದ ಭಜನಾ ಕಮ್ಮಟವು ಸೆ.28ರಿಂದ ಅ.4ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ ಎಂದು ಭಜನಾ ಕಮ್ಮಟದ ಕಾರ್ಯದರ್ಶಿ ಎ.ವಿ. ಶೆಟ್ಟಿ ತಿಳಿಸಿದ್ದಾರೆ.

ಸೆ.28ರಂದು ಬೆಳಿಗ್ಗೆ 11ಕ್ಕೆ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಭಜನಾ ಕಮ್ಮಟದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾಸಂಸ್ಥಾನ ಶ್ರೀ ಸುಬ್ರಹ್ಮಣ್ಯ ಮಠದ ಪರಮಪೂಜ್ಯ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದಂಗಳವರು ಉದ್ಘಾಟಿಸಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದಾರೆ.

ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಸೇವಾ ಪ್ರತಿಷ್ಠಾನದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ದಿವ್ಯ ಉಪಸ್ಥಿತಿ ವಹಿಸಲಿದ್ದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ಉಪಾಧ್ಯಕ್ಷರಾದ ಡಾ. ಹೇಮಾವತಿ ವೀ. ಹೆಗ್ಗಡೆ ಹಾಗೂ ಡಿ. ಹರ್ಷೇಂದ್ರ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಅ.4ರಂದು ಬೆಳಿಗ್ಗೆ 11ಕ್ಕೆ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠ, ಸುತ್ತೂರಿನ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದಾರೆ.

ಪರಮಪೂಜ್ಯ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದಂಗಳವರು ದಿವ್ಯ ಉಪಸ್ಥಿತಿ ವಹಿಸಲಿದ್ದು, ಶಾಸಕ ಹರೀಶ್ ಪೂಂಜ, ಮಂಗಳೂರು ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಭಜನಾ ಪರಿಷತ್‌ನ ಉಪಾಧ್ಯಕ್ಷರಾದ ಡಾ. ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಹಾಗೂ ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಭಜನಾ ಕಮ್ಮಟದ ಸಂಚಾಲಕ ಜಿ. ಸುಬ್ರಹ್ಮಣ್ಯ ಪ್ರಸಾದ್, ಶ್ರೀ ಧ.ಮಂ. ಪ್ರಾದೇಶಿಕ ಭಜನಾ ಪರಿಷತ್ ಅಧ್ಯಕ್ಷ ಚಂದ್ರಶೇಖರ್ ಸಾಲಿಯಾನ್, ಕಾರ್ಯದರ್ಶಿ ಎ.ವಿ. ಶೆಟ್ಟಿ, ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿರುವರು.

ಭಜನೋತ್ಸವ: 400 ಭಜನಾ ತಂಡಗಳ 6000 ಭಜನಾ ಪಟುಗಳ ಸಂಗಮ

ಅ.4ರಂದು ಬೆಳಿಗ್ಗೆ 9.30ಕ್ಕೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕಾಸರಗೋಡು ಜಿಲ್ಲೆಗಳ ಆಯ್ದ ಭಜನಾ ಮಂಡಳಿಗಳ ಸುಮಾರು 400 ಭಜನಾ ತಂಡಗಳ 6000ಕ್ಕೂ ಅಧಿಕ ಭಜನಾ ಪಟುಗಳಿಂದ ಶೋಭಾಯಾತ್ರೆ ನಡೆಯಲಿದೆ. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಭಜನೆಯೊಂದಿಗೆ ನೃತ್ಯ ಭಜನಾ ಕಾರ್ಯಕ್ರಮ ನಡೆಯಲಿದೆ.

Related posts

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ತೋಟತ್ತಾಡಿ ಗ್ರಾಮದ ದಡ್ಡುಗೆ ಲೋಕೋಪಯೋಗಿ ಸಚಿವರ ಭೇಟಿ: ಸ್ಥಳೀಯರ ಅಹವಾಲು ಸ್ವೀಕಾರ

Suddi Udaya

ಬೆಳ್ತಂಗಡಿ: ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕಲ್ಮಂಜದ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಬೆಳ್ತಂಗಡಿ: ಜಯಲಕ್ಷ್ಮಿ ಲೇತ್ ಅಂಡ್ ಇಂಜಿನಿಯರಿಂಗ್ ವರ್ಕ್ ಶಾಪ್ ಪುನರಾರಂಭ

Suddi Udaya

ಇಂದಬೆಟ್ಟು-ನಾವೂರು 27 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
error: Content is protected !!