September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತುಳು ಭಾಷೆಯ ಮಾನ್ಯತೆ ಕರಾವಳಿ ಅಭಿವೃದ್ಧಿಗೆ ಪೂರಕವಾಗಲಿ: ಕೆ. ಮೋಹನ್ ಕುಮಾರ್

ಬೆಳ್ತಂಗಡಿ: ತುಳು ಭಾಷೆಗೆ ಐತಿಹಾಸಿಕ ಮಾನ್ಯತೆ ದೊರೆತಿರುವುದು ತುಳುನಾಡಿನ ಭಾಷೆ, ಸಂಸ್ಕೃತಿ, ಆಚಾರ–ವಿಚಾರ ಹಾಗೂ ಪರಂಪರೆಗೆ ಸಿಕ್ಕ ಗೌರವವಾಗಿದೆ. ಈ ಮಾನ್ಯತೆ ಕರಾವಳಿಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಲಿ ಎಂದು ‘ಬದುಕು ಕಟ್ಟೋಣ ಬನ್ನಿ’ ತಂಡದ ಸಂಚಾಲಕ ಹಾಗೂ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್‌ ಕನಸಿನ ಮನೆ ಮಾಲಕ ಕೆ. ಮೋಹನ್ ಕುಮಾರ್ ಹೇಳಿದರು.

ತುಳುನಾಡಿನ ಯಕ್ಷಗಾನ, ಕಂಬಳ, ನೇಮ, ದೇವರಾಧನೆ, ದೈವಾರಾಧನೆ, ನಾಗಾರಾಧನೆ ಸೇರಿದಂತೆ ಇಲ್ಲಿನ ವಿಶಿಷ್ಟ ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಜಗತ್ತಿಗೆ ಪರಿಚಯಿಸುವಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ನಡೆದ ವಿಶ್ವ ತುಳು ಸಮ್ಮೇಳನ ಮಹತ್ವದ ಪಾತ್ರ ವಹಿಸಿವೆ. ತುಳು ಭಾಷೆ ಮತ್ತು ಸಂಸ್ಕೃತಿಯ ಜಾಗತಿಕ ಪರಿಚಯಕ್ಕೆ ಇಂತಹ ಪ್ರಯತ್ನಗಳು ಬಲ ನೀಡಿವೆ ಎಂದರು.

ತುಳು ಭಾಷೆಗೆ ದೊರೆತಿರುವ ಮಾನ್ಯತೆ ಶಿಕ್ಷಣ, ಆರೋಗ್ಯ, ಪ್ರವಾಸೋದ್ಯಮ ಹಾಗೂ ಉದ್ಯೋಗ ಕ್ಷೇತ್ರಗಳ ಅಭಿವೃದ್ಧಿಗೂ ಹೊಸ ಅವಕಾಶಗಳನ್ನು ಸೃಷ್ಟಿಸಲಿ. ವಿಶೇಷವಾಗಿ ಕರಾವಳಿಯ ಸಾಂಸ್ಕೃತಿಕ ವೈಭವವನ್ನು ಉಳಿಸಿ ಬೆಳೆಸುವ ದೃಷ್ಟಿಯಿಂದ ಯಕ್ಷಗಾನ, ನಾಟಕ ಹಾಗೂ ಧಾರ್ಮಿಕ–ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರಾತ್ರಿ ನಡೆಸಲು ಅಗತ್ಯ ಅನುಮತಿ ಮತ್ತು ಸೂಕ್ತ ಅವಕಾಶ ಕಲ್ಪಿಸಬೇಕು. ಇದರಿಂದ ಕಲಾವಿದರು, ಸಂಘ–ಸಂಸ್ಥೆಗಳು ಹಾಗೂ ಸಾಂಸ್ಕೃತಿಕ ಕ್ಷೇತ್ರಕ್ಕೆ ಮತ್ತಷ್ಟು ಉತ್ತೇಜನ ದೊರೆಯಲಿದೆ ಎಂದು ಕೆ.ಮೋಹನ್ ಕುಮಾರ್ ಹೇಳಿದರು.

Related posts

ನಾವೂರು: ರಸ್ತೆ ಅವಘಡದಲ್ಲಿ ಮೃತಪಟ್ಟ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಉಪ್ಪಿನಂಗಡಿ ಸ.ಪ.ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿ ಸಂಘದ ರಚನಾ ಸಭೆ

Suddi Udaya

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ವಿಜ್ಞಾನ ಒಲಿಂಪಿಯಾಡ್‌ನಲ್ಲಿ ಅಭೂತಪೂರ್ವ ಸಾಧನೆ

Suddi Udaya

ಉಜಿರೆ: ನಿನ್ನಿಕಲ್ಲು ರಸ್ತೆ ಬಳಿ ಬೈಕ್ ಮತ್ತು ಪಿಕಪ್ ಅಪಘಾತ: ಬೈಕ್ ಸವಾರ ಗಂಭೀರ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಪವಿತ್ರ ಗರಿಗಳ ಆಶೀರ್ವಾದ ಭಾನುವಾರ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

Suddi Udaya
error: Content is protected !!