September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿಠಲ ಗೌಡರಿಗೆ ಕಾರಾಗೃಹ ಶಿಕ್ಷೆ: ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ವಿಠಲ ಗೌಡ ಅವರಿಗೆ ಬೆಂಗಳೂರು ನ್ಯಾಯಾಲಯ ಆದೇಶ ನೀಡಿದ್ದ ಒಂದು ತಿಂಗಳ ಕಾರಾಗೃಹ ಶಿಕ್ಷೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡದಂತೆ ನಿರ್ಬಂಧ ವಿಧಿಸಿದ್ದರೂ ನ್ಯಾಯಾಲಯದ ಆದೇಶ ಉಲ್ಲಂಘಿಸಿದ್ದಕ್ಕಾಗಿ ವಿಠಲ ಗೌಡ ಅವರಿಗೆ ಬೆಂಗಳೂರು ನ್ಯಾಯಾಲಯ ಒಂದು ತಿಂಗಳ ಸಜೆ ವಿಧಿಸಿ ಐದು ತಿಂಗಳ ಹಿಂದೆ ಆದೇಶ ನೀಡಿದ್ದು ಬಳಿಕ ತಲೆ ಮರೆಸಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ವಿಠಲ ಗೌಡ ಅವರನ್ನು ಬಂಧಿಸಲು ಜೂ.27ರಂದು ಬೆಂಗಳೂರಿನಿಂದ ಕೋರ್ಟ್ ಅಧಿಕಾರಿಗಳೊಂದಿಗೆ ಆಗಮಿಸಿದ್ದ ಪೊಲೀಸರು ವಿವಿಧೆಡೆ ಶೋಧ ನಡೆಸಿದ್ದರು.

ಈ ಮಧ್ಯೆ ಬೆಂಗಳೂರು ನ್ಯಾಯಾಲಯದ ಆದೇಶ ಪ್ರಶ್ನಿಸಿ ವಿಠಲ ಗೌಡ ಉಚ್ಛ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ವಿಠಲ ಗೌಡ ಅವರ ಅರ್ಜಿಯನ್ನು ಪುರಸ್ಕರಿಸಿದ್ದು ಬೆಂಗಳೂರು ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯ ಆದೇಶಕ್ಕೆ ತಡೆ ನೀಡಿದೆ.

Related posts

ನಾಲ್ಕೂರು: ಕೆಲ ಸಮಯದಿಂದ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಕಾಟ ಮನೆಯ ಸಾಕು ಪ್ರಾಣಿಗಳ ಮೇಲೆ ದಾಳಿ, ಭಯಬೀತರಾದ ಗ್ರಾಮಸ್ಥರು, ಅರಣ್ಯ ಇಲಾಖೆಗೆ ಮಾಹಿತಿ, ಸ್ಪಂದನೆ

Suddi Udaya

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ

Suddi Udaya

ಫೆ.15: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ನಾರಾವಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya

ಮಚ್ಚಿನ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇಮಕ

Suddi Udaya

ಬೆಳ್ತಂಗಡಿ: ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಎಚ್ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!