ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಪ್ರಭಾರ ಸಹಾಯಕ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅಶೋಕ್ ದೇವಾಡಿಗ ಅವರು ಸೆ.30ರಂದು ನಿವೃತ್ತಿ ಹೊಂದಲಿದ್ದಾರೆ.
1988ರಲ್ಲಿ ವೇಣೂರು ಮಂಡಲ ಪಂಚಾಯಿತಿಯಲ್ಲಿ ಗುಮಾಸ್ತರಾಗಿ ಸೇರ್ಪಡೆಗೊಂಡು ತಮ್ಮ ವೃತ್ತಿ ಜೀವನ ಆರಂಭಿಸಿದ ಇವರು ಅಲ್ಲಿಯೇ 10 ವರ್ಷಗಳ ಕಾಲ ಸೇವೆ ಸಲ್ಲಿಸಿ, 1998ರಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಕಳಿಯ ಗ್ರಾಮ ಪಂಚಾಯತ್ ಗೆ ಭಡ್ತಿಯಾಗಿ ವರ್ಗಾವಣೆಗೊಂಡು 10 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅವಧಿಯಲ್ಲಿ 3 ವರ್ಷಗಳ ಕಾಲ ಬಳಂಜ ಗ್ರಾಮ ಪಂಚಾಯತ್‌ನಲ್ಲಿಯೂ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ, 2013ರಲ್ಲಿ ಮುಂಬಡ್ತಿಗೊಂಡು ಅಳದಂಗಡಿ ಗ್ರಾಮ ಪಂಚಾಯತ್‌ಗೆ ಗ್ರೇಡ್-1 ಕಾರ್ಯದರ್ಶಿಯಾಗಿ ಮುಂಭಡ್ತಿಗೊಂಡು ನಿಯೋಜಿಸಲ್ಪಟ್ಟಿರುತ್ತಾರೆ. ತದನಂತರ ತಾಲೂಕು ಪಂಚಾಯತ್‌ನಲ್ಲಿ ವಿಷಯ ನಿರ್ವಾಹಕರಾಗಿ ಸೇವೆ ಸಲ್ಲಿಸಿದ್ದಾರೆ.












