September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 32 ಕೋಟಿ ವ್ಯವಹಾರ, ರೂ. 8 ಲಕ್ಷ ಲಾಭ ; ಶೇ.14 ಡಿವಿಡೆಂಡ್ : ಸಂಘದ ಅಧ್ಯಕ್ಷ ಲ್ಯಾನ್ಸಿ ಎ. ಪಿರೇರಾ

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿರುವ ರಾಜೀವ್ ಗಾಂಧಿ ವಾಣಿಜ್ಯ ಸಂಕೀರ್ಣದ ಮೊದಲ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಬೆಳ್ತಂಗಡಿ ಹೋಲಿ ರೀಡಿಮರ್ ಚರ್ಚ್ ಮಿನಿಹಾಲ್‌ನಲ್ಲಿ ಸಂಘದ ಅಧ್ಯಕ್ಷ ಲ್ಯಾನ್ಸಿ ಎ.ಪಿರೇರಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬೆಳ್ತಂಗಡಿ ಹೊಲಿ ರಿಡಿಮರ್ ಚರ್ಚ್ ಪ್ರಧಾನ ಧರ್ಮಗುರು ವಂ. ವಾಲ್ಟರ್ ಡಿಮೆಲ್ಲೊ ಆಶೀರ್ವಚನಗೈದರು. ಸಂಘದಲ್ಲಿ ಒಟ್ಟು 752 ಸದಸ್ಯರಿದ್ದು ರೂ. 18,63,960 ಬಂಡವಾಳ ಹೊಂದಿದೆ. ರೂ. 6.22ಕೋಟಿ ಠೇವಣಿಯೊಂದಿಗೆ ರೂ 7.40 ಕೋಟಿ ಸಾಲ ವಿತರಿಸಿ ರೂ. 32,07,50,000 ಕೋಟಿ ವ್ಯವಹಾರ ನಡೆಸಿ ರೂ. 8,64,166 40 ಲಕ್ಷ ಲಾಭಗಳಿಸಿ ಸದಸ್ಯರಿಗೆ ಶೇ.14 ಡಿವಿಡೆಂಡ್ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ಲ್ಯಾನ್ಸಿ ಎ. ಪಿರೇರಾ ಘೋಷಿಸಿದರು.

ಉಪಾಧ್ಯಕ್ಷ ವಿಲ್ಸನ್ ಜೋರ್ಜ್ ಗೊನ್ಸಾಲ್ವಿಸ್, ನಿರ್ದೇಶಕರಾದ ಜಾನ್ ಅರ್ವಿನ್ ಡಿಸೋಜಾ, ಎಲೋಸಿಯಸ್ ಎಸ್.ಲೋಬೊ, ವಿನ್ಸೆಂಟ್ ಟಿ. ಡಿ ಸೋಜ, ಜಾನ್ ಅಶ್ವಿನ್ ಪಿಂಟೊ, ಮ್ಯಾಕ್ಸಿಮ್ ಡಿಕೋಸ್ತಾ, ತಿಯೋಫಿಲಾ ಡಿಸೋಜ, ಸ್ಟೆಲ್ಲಾ ಪ್ರಾಂಕ್, ಸೆಲಿನ್ ನೊರೊನ್ಹಾ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಐರಿನ್ ಡಿಸೋಜ ವಾರ್ಷಿಕ ವರದಿ ಮಂಡಿಸಿದರು. ಉಪಾ ಉಪಾಧ್ಯಕ್ಷ ವಿಲ್ಸನ್ ಗೊನ್ಸಾಲ್ವಿಸ್ ಸ್ವಾಗತಿಸಿದರು. ನಿರ್ದೇಶಕ ಜಾನ್ ಅರ್ವಿನ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಸಭೆಯಲ್ಲಿ ಲಕ್ಕಿ ಕೂಪನ್ ಡ್ರಾ ನಡೆಸಲಾಯಿತು. ಎಸ್ಎಸ್ ಎಲ್‌ಸಿ ಮತ್ತು ಮೇಲ್ಪಟ್ಟ ಶೇ.90ಕ್ಕಿಂತ ಹೆಚ್ಚು ಅಂಕಗಳಿಸಿದ ಸಂಘದ ಸದಸ್ಯರ ಐದು ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

Related posts

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆ

Suddi Udaya

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಸೆ.12: ಬೆಳ್ತಂಗಡಿಯಲ್ಲಿ ಮುಳಿಯ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ – ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯ ಬರವಣಿಗೆಯ ಕಾರ್ಯಾಗಾರ

Suddi Udaya

ಎಸ್.ಐ.ಟಿ ಯ ಮಂಜುನಾಥ್ ಗೌಡ ಲೋಕಾಯುಕ್ತ ಡಿವೈಎಸ್ಪಿಯಾಗಿ ನೇಮಕ

Suddi Udaya
error: Content is protected !!