24.2 C
ಪುತ್ತೂರು, ಬೆಳ್ತಂಗಡಿ
September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವ ಸಂಸತ್ ಸ್ಪರ್ಧೆ:ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯ ವಿದ್ಯಾರ್ಥಿನಿ ಸೃಜನ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳಾಲು: ಸರ್ಕಾರಿ ಪ್ರೌಢಶಾಲೆ ಕಲ್ಮಂಜದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಯುವ ಸಂಸತ್ ಸ್ಪರ್ಧೆಯಲ್ಲಿ ಬೆಳಾಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸೃಜನ್ಯ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಸಂಸದೀಯ ಮೌಲ್ಯಗಳು, ಪ್ರಜಾಸತ್ತಾತ್ಮಕ ಚಿಂತನೆಗಳು ಹಾಗೂ ಜಾಗೃತ ನಾಯಕತ್ವದ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಅತ್ಯುತ್ತಮ ವಾಗ್ದರಿ ಹಾಗೂ ನಿರೂಪಣೆ ತೋರಿದ ಸೃಜನ್ಯ, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ತಾಲೂಕನ್ನು ಹಾಗೂ ತಮ್ಮ ಶಾಲೆಯನ್ನು ಪ್ರತಿನಿಧಿಸಲಿದ್ದಾರೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರಿಗೆ ಸ್ವಿಟ್ಜರ್ಲೆಂಡ್‌ನ ಪ್ರತಿಷ್ಠಿತ ಡನ್‌ಸ್ಟರ್ ಬಿಸಿನೆಸ್ ಸ್ಕೂಲ್‌ನಿಂದ ಗೌರವ ಡಾಕ್ಟರೇಟ್ ಪ್ರದಾನ

Suddi Udaya

ಮಡಂತ್ಯಾರು : ಮಾದಕ ವಸ್ತು ಸೇವನೆಯ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗಿರಿಜಾ ಮಡಿವಾಳ ನಿಧನ

Suddi Udaya

ನಂದಿ ರಥ ಯಾತ್ರೆಗೆ ಗುರುವಾಯನಕೆರೆಯಲ್ಲಿ ಸ್ವಾಗತ

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!