31 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ಮಟ್ಟದ ಕ್ರಾಸ್ ಕಂಟ್ರಿ ಓಟದಲ್ಲಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ವಿದ್ಯಾರ್ಥಿಗಳ ಸಾಧನೆ

ಉಜಿರೆ: ಆಳ್ವಾಸ್ ಸೆಂಟ್ರಲ್ ಸ್ಕೂಲ್, ಮೂಡುಬಿದಿರೆಯಲ್ಲಿ ಸೆ.25 ರಂದು 2026ನೇ ಸಾಲಿನ AICS ಜಿಲ್ಲಾ ಮಟ್ಟದ ಕ್ರಾಸ್ ಕಂಟ್ರಿ ಓಟ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದರು.

ಅಂಡರ್-17 ಬಾಲಕಿಯರ 4 ಕಿ.ಮೀ. ಓಟದಲ್ಲಿ 10ನೇ ತರಗತಿಯ ವಿದ್ಯಾರ್ಥಿನಿ ನಿಶಾ ಅವರು ಅತ್ಯುತ್ತಮ ಪ್ರದರ್ಶನ ನೀಡಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದರು. 9ನೇ ತರಗತಿಯ ವಿದ್ಯಾರ್ಥಿನಿ ತ್ರಿಶಾ ಅವರು ಐದನೇ ಸ್ಥಾನ ಗಳಿಸಿದರು.

ಅಂಡರ್-14 ಬಾಲಕಿಯರ 3 ಕಿ.ಮೀ. ಓಟದಲ್ಲಿ 8ನೇ ತರಗತಿಯ ವಿದ್ಯಾರ್ಥಿನಿ ನಿಯತಿ ಅವರು ಐದನೇ ಸ್ಥಾನ ಪಡೆದು ತಮ್ಮ ಪ್ರತಿಭೆಯನ್ನು ಮೆರೆದರು. ಅಂಡರ್-14 ಬಾಲಕರ 4 ಕಿ.ಮೀ. ಓಟದಲ್ಲಿ 8ನೇ ತರಗತಿ ವಿದ್ಯಾರ್ಥಿ ಸ್ವಯಂ ಗೌಡ ಅವರು ಹತ್ತನೇ ಸ್ಥಾನ ಗಳಿಸಿದರು.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದರು. ಕ್ರೀಡಾಪಟುಗಳ ಪರಿಶ್ರಮ, ಆತ್ಮವಿಶ್ವಾಸ, ಶಿಸ್ತು ಮತ್ತು ಕ್ರೀಡಾಸ್ಫೂರ್ತಿಯನ್ನು ಶ್ಲಾಘಿಸಿ, ಮುಂದಿನ ಸ್ಪರ್ಧೆಗಳಲ್ಲಿಯೂ ಇನ್ನಷ್ಟು ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು.

Related posts

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಾರ್ಷಿಕೋತ್ಸವ

Suddi Udaya

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ನಾಳೆಯಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ

Suddi Udaya

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಡೈನಾ ಪ್ರವೀಣ್ ವಿಜಯ್ ಪಾರಳರವರಿಂದ ಪ್ರೋತ್ಸಾಹ ಧನ ವಿತರಣೆ

Suddi Udaya

ಧರ್ಮಸ್ಥಳ: ದೊಂಡೋಲೆ ಪರಶುರಾಮ ದೇವಸ್ಥಾನಕ್ಕೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗೋಪಾಲ್ ಪಿ. ಎ ಭೇಟಿ

Suddi Udaya
error: Content is protected !!