25.4 C
ಪುತ್ತೂರು, ಬೆಳ್ತಂಗಡಿ
September 26, 2026
ಅಭಿನಂದನೆಬೆಳ್ತಂಗಡಿಸಂಘ-ಸಂಸ್ಥೆಗಳು

ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಶಶಿಧರ ಪೈ, ಕಾರ್ಯದರ್ಶಿ ಚಿದಾನಂದ ಇಡ್ಯಾ, ಕೋಶಾಧಿಕಾರಿ‌ ವಿಲ್ಸನ್ ಗೊನ್ಸಾಲ್ವಿಸ್ ಆಯ್ಕೆ

ಬೆಳ್ತಂಗಡಿ: ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್ ಬೆಳ್ತಂಗಡಿಯ ನೂತನ ಅಧ್ಯಕ್ಷರಾಗಿ ಶಶಿಧರ ಪೈ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ .ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆದಿದ್ದು, ಅಧ್ಯಕ್ಷರಾಗಿ ಶಶಿಧರ ಪೈ ಅವರೊಂದಿಗೆ ವಿವಿಧ ಜವಾಬ್ದಾರಿಗಳಿಗೆ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಕಾರ್ಯದರ್ಶಿಯಾಗಿ ಚಿದಾನಂದ ಇಡ್ಯಾ, ಜಂಟಿ ಕಾರ್ಯದರ್ಶಿಯಾಗಿ ಶಾಂಭವಿ ಪಿ.ಬಂಗೇರ, ಉಪಾಧ್ಯಕ್ಷರಾಗಿ ಶೀತಲ್ ಜೈನ್ ಹಾಗೂ ಕೋಶಾಧಿಕಾರಿಯಾಗಿ ವಿಲ್ಸನ್ ಗೊನ್ಸಾಲ್ವಿಸ್ ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ವ್ಯಾಪಾರ, ಕೈಗಾರಿಕೆ ಹಾಗೂ ಉದ್ಯಮ ಕ್ಷೇತ್ರದ ಅಭಿವೃದ್ಧಿಗೆ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್ ಪ್ರಮುಖ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತಿದೆ. ಸ್ಥಳೀಯ ಉದ್ಯಮಿಗಳು ಹಾಗೂ ವ್ಯಾಪಾರಸ್ಥರ ಸಮಸ್ಯೆಗಳಿಗೆ ಸ್ಪಂದಿಸುವುದು, ವ್ಯಾಪಾರ–ವಾಣಿಜ್ಯ ಕ್ಷೇತ್ರದ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಿಸುವುದು ಹಾಗೂ ಉದ್ಯಮಿಗಳ ಹಿತಾಸಕ್ತಿಗಳನ್ನು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತರುವುದು ಸಂಘದ ಪ್ರಮುಖ ಕಾರ್ಯಗಳಲ್ಲಿ ಒಂದಾಗಿದೆ.

ನೂತನ ಪದಾಧಿಕಾರಿಗಳ ನೇತೃತ್ವದಲ್ಲಿ ಸಂಘವು ಇನ್ನಷ್ಟು ಸಕ್ರಿಯವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ವ್ಯಕ್ತವಾಗಿದ್ದು, ಬೆಳ್ತಂಗಡಿ ತಾಲೂಕಿನ ವ್ಯಾಪಾರ–ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಹಲವು ಹೊಸ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶ ಹೊಂದಿದೆ ಎಂದು ತಿಳಿದುಬಂದಿದೆ.ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆಗೆ ಸಂಘದ ಸದಸ್ಯರು, ಉದ್ಯಮಿಗಳು ಹಾಗೂ ವ್ಯಾಪಾರಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರನ್ನು ಭೇಟಿಯಾದ ಎಸ್‌ಡಿಪಿಐಯ ಜಿಲ್ಲಾ ನಾಯಕರು

Suddi Udaya

ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್‌‌ ವತಿಯಿಂದ ಕರಂಬಾರು ಸ. ಹಿ. ಪ್ರಾ. ಶಾಲೆಯಲ್ಲಿ ‘ಶಾಲೆಡೊಂಜಿ ದಿನ’

Suddi Udaya

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

Suddi Udaya

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

Suddi Udaya

ಅ ಭಾ ಸಾ ಪ ಬೆಳ್ತಂಗಡಿ ತಾ| ಸಮಿತಿ ಪ್ರಥಮ ಅಧಿವೇಶನ “ತೆಂಕಣದಲ್ಲಿ ನುಡಿದಿಬ್ಬಣ “

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು

Suddi Udaya
error: Content is protected !!