
ಶಿಕ್ಷಣ ಮತ್ತು ಆರೋಗ್ಯ ಎಲ್ಲರಿಗೂ ಸಿಗುವುದೇ ಸರಕಾರದ ಆಶಯ. ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಾಣುತ್ತಿದೆ. ನಾಡಿನ ಬೆಳಕಾಗುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಎಲ್ಲ ಶಿಕ್ಷಕರಿಗೆ ಅನಂತ ಅಭಿನಂದನೆಗಳು. ಜೀವನ ಶಿಕ್ಷಣ ನೀಡುವ ಮೂಲಕ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರಿಗೆ ಸ್ವಾವಲಂಬಿ ಜೀವನದ ಅಡಿಪಾಯ ಹಾಕಿರುತ್ತದೆ. ಮೌಲ್ಯಯುತ ಶಿಕ್ಷಣ ನೀಡುವ ಕರ್ತವ್ಯ ಸರಕಾರದ್ದು. ಶಿಕ್ಷಣ ಸಂಸ್ಥೆಗಳ ಸಂಬಂಧ ಅತೀ ಮುಖ್ಯ. ಶಿಕ್ಷಕರ ವೃತ್ತಿ ಅತ್ಯಂತ ಪವಿತ್ರ ಕೆಲಸ. ಶಿಸ್ತುಬದ್ಧ ಶಿಕ್ಷಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಗುತ್ತಿದ್ದು ಅತೀ ಹೆಚ್ಚು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಇಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದಾರೆ. ಇವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುವ ಕೆಲಸ ಎಲ್ಲ ಶಿಕ್ಷಕರ ಜವಾಬ್ದಾರಿ ಎಂದು ಕರ್ನಾಟಕ ಸರಕಾರದ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಹಾಗೂ ಶಾಸಕರಾದ ಎಸ್ ಎಲ್ ಬೋಜೇಗೌಡ ಹೇಳಿದರು.
ಇವರು ದ ಕ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಂಘ ಮತ್ತು ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಸೆಪ್ಟೆಂಬರ್ 27 ರಂದು ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಧರ್ಮಸ್ಥಳದ ಶಿಕ್ಷಣ ಸಂಸ್ಥೆಗಳು ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಕೊಡುಗೆ ಅಪಾರ ಎಂದು ಈ ಸಂದರ್ಭದಲ್ಲಿ ನೆನಪಿಸಿಕೊಂಡರು.
ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಇಂದಿನ ಕಾಲಮಾನದಲ್ಲಿ ಸಾಮಾಜಿಕ ಜಾಲತಾಣಗಳಿಂದ ಮಕ್ಕಳನ್ನು ಹೊರತಂದು ಅವರ ಸರ್ವತೋಮುಖ ಬೆಳವಣಿಗೆಗೆ ಎಲ್ಲ ಶಿಕ್ಷಕರು ಅವಿರತವಾಗಿ ಶ್ರಮಿಸಬೇಕು ಎಂದು ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ತಿಳಿಸಿದರು.
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಜಯಾನಂದ ಎನ್ ಸುವರ್ಣ, ಪ್ರಾಂಶುಪಾಲರು, ಸರಕಾರಿ ಪದವಿ ಪೂರ್ವ ಕಾಲೇಜು ನಾರ್ಲಪದವು, ಪ್ರೇಮನಾಥ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕರು, ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು, ಎಡಪದವು, ಸುಬ್ರಮಣ್ಯ ಉಪನ್ಯಾಸಕರು ಕೆನರಾ ಪದವಿ ಪೂರ್ವ ಕಾಲೇಜು ಮಂಗಳೂರು, ಪೂರ್ಣಿಮಾ ಡಿ ಶೆಟ್ಟಿ ಪ್ರಾಂಶುಪಾಲರು ವಿಶ್ವನಂಗಳ ಪದವಿ ಪೂರ್ವ ಕಾಲೇಜು, ಕೊಣಾಜೆ, ಕಿರಣಾ ಶೆಟ್ಟಿ, ಉಪನ್ಯಾಸಕರು ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜು ಮಂಗಳೂರು, ಅನಿತಾ ವಿ ಜೈನ್ ಕಚೇರಿ ಅಧೀಕ್ಷಕರು ಆಳ್ವಾಸ್ ಪದವಿ ಪೂರ್ವ ಕಾಲೇಜು ಮೂಡುಬಿದಿರೆ ಇವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿ ಪಡೆದ ಇಬ್ರಾಹಿಂ ಕನ್ನಡ ಉಪನ್ಯಾಸಕರು ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿ, ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘದ ಕಾರ್ಯಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹರೀಶ್ ಎನ್, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಂಟಿ ಕಾರ್ಯದರ್ಶಿಯಾಗಿ ಅವಿಯೋಧವಾಗಿ ಆಯ್ಕೆಯಾದ ವಿಠ್ಠಲ ಎ, ರಾಷ್ಟ್ರೀಯ ಸ್ವರ್ಣ ಕಮಲ ಪದಕ ಪ್ರಶಸ್ತಿ ವಿಜೇತ ಸರಕಾರಿ ಪದವಿ ಪೂರ್ವ ಕಾಲೇಜು ಗಾಂಧಿ ನಗರ ಸುಳ್ಯ ಇಲ್ಲಿನ ಇತಿಹಾಸ ಉಪನ್ಯಾಸಕರಾದ ಡಾ. ಪ್ರದೀಪ್ ಕೆಂಚನೂರು ಇವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶೇಕಡ ನೂರು ಫಲಿತಾಂಶ ಪಡೆದ ಜಿಲ್ಲೆಯ 78 ಕಾಲೇಜುಗಳ ಪ್ರಾಚಾರ್ಯರನ್ನು ಮತ್ತು ಸಿಬ್ಬಂದಿ ವರ್ಗದವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಶಿಕ್ಷಕರಿಗೆ ನೃತ್ಯ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ವೇದಿಕೆಯಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದಕ್ಷಿಣ ಕನ್ನಡ ಇದರ ಉಪ ನಿರ್ದೇಶಕರು ರಾಜೇಶ್ವರಿ ಹೆಚ್ ಹೆಚ್, ದ ಕ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷ ಡಾ. ನವೀನ್ ಶೆಟ್ಟಿ ಕೆ, ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘದ ಅಧ್ಯಕ್ಷ ಡಾ. ಹರೀಶ್ ಎನ್, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಬೆಂಗಳೂರು ಇದರ ಸಹಾಯಕ ನಿರ್ದೇಶಕ ಆನಂದ ಪಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದ ಕ ಜಿಲ್ಲೆ ಇದರ ಶಾಖಾಧಿಕಾರಿ ನಿತಿನ್ ಬಿ ಟಿ, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಕಾರ್ಯದರ್ಶಿ ಜಯಾನಂದ ಸುವರ್ಣ, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಂಟಿ ಕಾರ್ಯದರ್ಶಿ ವಿಠ್ಠಲ ಅಬುರ, ದ ಕ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಅನುದಾನಿತ ನೌಕರರ ಸಂಘದ, ಮಂಗಳೂರು ಇದರ ಅಧ್ಯಕ್ಷ ಸೋಮಶೇಖರ ನಾಯಕ್, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ದ ಕ ಜಿಲ್ಲೆ ಇದರ ಅಧ್ಯಕ್ಷ ಹರಿಪ್ರಕಾಶ್ ಬಿ, ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ನೌಕರರ ಸಂಘ ದ ಕ ಜಿಲ್ಲೆ ಇದರ ಅಧ್ಯಕ್ಷ ಪ್ರೇಮನಾಥ ಶೆಟ್ಟಿ, ಪದವಿ ಪೂರ್ವ ಕಾಲೇಜುಗಳ ನೌಕರರ ಸಹಕಾರಿ ಸಂಘ ಮಂಗಳೂರು ಇದರ ಅಧ್ಯಕ್ಷ ದುಗ್ಗಪ್ಪ ಎನ್, ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ, ಐಟಿ ಮತ್ತು ವಸತಿ ನಿಲಯಗಳ ಕಾರ್ಯ ನಿರ್ವಾಹಕ ಅಧಿಕಾರಿ ಪೂರನ್ ವರ್ಮ, ಎಸ್ ಡಿ ಎಂ ಸ್ವಾಯತ್ತ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ. ವಿಶ್ವನಾಥ್ ಪಿ, ಇವರು ಮತ್ತು ಎಲ್ಲ ವಿಷಯವಾರು ಉಪನ್ಯಾಸಕರ ಸಂಘದ ಅಧ್ಯಕ್ಷರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ ಸ್ವಾಗತಿಸಿ, ಸರಕಾರಿ ಪದವಿ ಪೂರ್ವ ಕಾಲೇಜು ಕಾವೂರಿನ ಪ್ರಾಂಶುಪಾಲೆ ಮಮತಾ ಎ ವಂದಿಸಿದರು. ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ಮಹಾವೀರ ಜೈನ್ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಬಲ್ಮಠ, ಮಂಗಳೂರು ಇಲ್ಲಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಉಮೇಶ್ ನಿರೂಪಿಸಿದರು.












