31.1 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ಪದವಿಪೂರ್ವ ಕಾಲೇಜಿನ ಅರಮಲೆಬೆಟ್ಟ ಕ್ಯಾಂಪಸ್ ನಲ್ಲಿ ನೂತನ ಮಹಾದ್ವಾರ ಉದ್ಘಾಟನೆ

ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ನೂತನ ಅರಮಲೆಬೆಟ್ಟ ಕ್ಯಾಂಪಸ್‌ನ ಭವ್ಯ ಮಹಾದ್ವಾರದ ಉದ್ಘಾಟನಾ ಸಮಾರಂಭವು ಇತ್ತೀಚಿಗೆ ನೆರವೇರಿತು.

ವಿಧಾನ ಪರಿಷತ್ ಸದಸ್ಯರಾದ ಎಸ್. ಎಲ್. ಭೋಜೇಗೌಡ ಅವರು ನೂತನ ಮಹಾದ್ವಾರವನ್ನು ಅಧಿಕೃತವಾಗಿ ಉದ್ಘಾಟಿಸಿ, “ಸರಕಾರ ಮಾಡಲು ಅಸಾಧ್ಯವಾದ ಶೈಕ್ಷಣಿಕ ಸಾಧನೆಯನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳು ಸಾಧಿಸಿ ತೋರಿಸಿವೆ. ಗುಣಮಟ್ಟದ ಶಿಕ್ಷಣದ ಮೂಲಕ ಎಕ್ಸೆಲ್ ರಾಜ್ಯ- ರಾಷ್ಟ್ರದ ಗಮನ ಸೆಳೆದಿದೆ “ಎನ್ನುತ್ತಾ ಸಂಸ್ಥೆಯ ಶೈಕ್ಷಣಿಕ ಪ್ರಗತಿ ಹಾಗೂ ವಿದ್ಯಾರ್ಥಿ ಸ್ನೇಹಿ ಮೂಲಸೌಕರ್ಯಗಳನ್ನು ಶ್ಲಾಘಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ವಿಠ್ಠಲ್, ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಪ್ರೇಮನಾಥ್ ಶೆಟ್ಟಿ, ರಾಜ್ಯಾಧ್ಯಕ್ಷರಾದ ಚೌಡಪ್ಪ ಅವರು ಉಪಸ್ಥಿತರಿದ್ದು ಸಂಸ್ಥೆಯ ಬೆಳವಣಿಗೆಗೆ ಬೆಂಬಲ ಸೂಚಿಸಿದರು. ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ ಆರ್., ಕಾರ್ಯಾಧ್ಯಕ್ಷ ಹರಿಪ್ರಕಾಶ್ ಮತ್ತು ಸಂಘಟನೆಯ ಉಪಸ್ಥಿತರಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ. ಅವರು ವಹಿಸಿದ್ದರು. ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ.ಪ್ರಜ್ವಲ್ ಕಜೆ ಹಾಗೂ ಶ್ರೀಮತಿ ಸುಮಿತ್ರಾ ಗೌಡ , ಶೈಕ್ಷಣಿಕ ಸಂಯೋಜಕರಾದ ನಿಶಾ ಪೂಜಾರಿ , ಉಪ ಪ್ರಾಂಶುಪಾಲರಾದ ರೋಹಿತ್, ಹರೀಶ್ , ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ಆಡಳಿತಾಧಿಕಾರಿ ಕೀರ್ತಿನಿಧಿ, ವ್ಯವಸ್ಥಾಪಕರಾದ ಪ್ರಶಾಂತ್ ಬಳಂಜ ಮೊದಲಾದವರು ಉಪಸ್ಥಿತರಿದ್ದರು.ಕಾಲೇಜಿನ ಎಲ್ಲಾ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

Suddi Udaya

ವಿ.ಹಿಂ.ಪ. ಮತ್ತು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇಂದಬೆಟ್ಟು-ನಾವೂರು ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ಸ್ವಯಂಸೇವಕರ ಪಥಸಂಚಲನ

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯಕಾರಿಣಿ ಸಭೆ: ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್,ಮಣ್ಣುಗಣಿಗಾರಿಕೆ ನಿಷೇಧ, ರಸ್ತೆ ಕಾಮಗಾರಿಗಳಿಗೆ ಚುರುಕು ಸೇರಿದಂತೆ ಹಲವು ನಿರ್ಣಯ ಅಂಗೀಕಾರ

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಜಿನ ಭಜನಾ ಪುಸ್ತಕ ಬಿಡುಗಡೆ ಮತ್ತು ಪರಮ ಪೂಜ್ಯ ಆಚಾರ್ಯ 108 ಕಾಮಕುಮಾರ ನಂದಿ ಮಹಾರಾಜರ ವಿನಯಾಂಜಲಿ ಸಭೆ,

Suddi Udaya

ಮೇ 17ರಂದು ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಪ್ರಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಸಂಭ್ರಮ’ ಮತ್ತು ಬಹುಭಾಷಾ ಕವಿಗೋಷ್ಠಿ’ ಎಂಬ ವಿನೂತನ ಕಾರ್ಯಕ್ರಮ

Suddi Udaya
error: Content is protected !!