30.6 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಸಿದ್ದಬೈಲು ಪರಾರಿ ಸ.ಹಿ ಪ್ರಾಥಮಿಕ ಶಾಲೆಯಲ್ಲಿ “ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ”

ಕಲ್ಮಂಜ : “ಶ್ರೀ ಕೃಷ್ಣ ಆಸ್ಪತ್ರೆ,ಕಕ್ಕಿಂಜೆ, ಬೆಂದ್ರಾಳ ವೆಂಕಟಕೃಷ್ಣ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ (ರಿ), ಕಕ್ಕಿಂಜೆ ಕೆ.ಎಂ.ಸಿ ಆಸ್ಪತ್ರೆ ತುರ್ತು ಚಿಕಿತ್ಸಾ ವಿಭಾಗ-ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಇವರ ಸಹಯೋಗದಲ್ಲಿ ರೋಟರಿ ಕ್ಲಬ್, ಬೆಳ್ತಂಗಡಿ ಹಾಗೂ ರೋಟರಿ ಸಮುದಾಯ ದಳ, ಕಲ್ಮಂಜ. ಇವರ ಸಂಯುಕ್ತ ಆಶ್ರಯದಲ್ಲಿ. ಮಹಿಳಾ ಹಾಲು ಉತ್ಪಾದಕರ ಸಹಕಾರಿ ಸಂಘ ಸತ್ಯನಪಲ್ಕೆ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಂಗಮಶ್ರೀ ಯುವಕ ಮಂಡಲ (ರಿ) ಕಲ್ಮಂಜ,
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಕಲ್ಮಂಜ. ಇವರ ಸಂಪೂರ್ಣ ಸಹಕಾರದೊಂದಿಗೆ ಸಂಘ ಸಂಸ್ಥೆಗಳ ಸದಸ್ಯರಿಗೆ ಹಾಗೂ ಸಾರ್ವಜನಿಕರಿಗೆ “ಪ್ರಥಮ ಚಿಕಿತ್ಸೆ (First Aid,Basic Life Support) ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರವು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ, ಅತಿಥಿಗಳನ್ನು ಸ್ವಾಗತಿಸಿ, ರೋಟರಿ ಸಮುದಾಯ ದಳ, ಕಲ್ಮಂಜದ ಅಧ್ಯಕ್ಷ ಶ್ರೀನಿವಾಸ ರಾವ್ ಮಾತನಾಡಿದರು. ಮುಖ್ಯ ಅತಿಥಿಗಳಾದ ವೆಂಕಟರಮಣ ಹೆಬ್ಬಾರ್ ಪರಾರಿ,ಕಲ್ಮಂಜ ಮಾತನಾಡಿ ಗ್ರಾಮೀಣ ಪ್ರದೇಶದ ಜನರಿಗೆ ತಮ್ಮ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ,ತುರ್ತು ಸಂದರ್ಭದಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಕನಿಷ್ಠ ಮೂಲಭೂತ ಜ್ಞಾನ ಅತ್ಯಗತ್ಯ ಈ ಸಲುವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಅಧ್ಯಕ್ಷವೆಂಕಟೇಶ್ ಭಟ್,ಕಜೆ, ಶ್ರೀ ಕೃಷ್ಣ ಆಸ್ಪತ್ರೆ, ಕಕ್ಕಿಂಜೆ ಪಿ ಆರ್ ಓ ಮ್ಯಾಥ್ಯೂ,ಕೆಎಂಸಿ ಆಸ್ಪತ್ರೆಯ ಪಿ ಆರ್ ಓ ಶ್ರೀಮತಿ ಸುಪ್ರೀತಾ,ಪ್ಯಾರಮೇಡಿಕ್ ಸಿಬ್ಬಂದಿ ಕು.ಶ್ರೇಯಾ ಶಿಬಿರದಲ್ಲಿ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ತುರ್ತು ಸಂದರ್ಭಗಳಲ್ಲಿ ಹಾಗೂ ಇನ್ನಿತರ ಆನಾರೋಗ್ಯ ಅಥವಾ ಅನಾಹುತಗಳು ಸಂಭವಿಸುವ ಸಮಯದಲ್ಲಿ ಜೀವ ಉಳಿಸಲು ಧೈರ್ಯದಿಂದ ಹಾಗೂ ಎದೆಗುಂದದೆ ಪ್ರಥಮ ಚಿಕಿತ್ಸೆ ನೀಡಬೇಕು, ಹೃದಯಾಘಾತ, ಪಾರ್ಶ್ವವಾಯು,ನೀರಿನಲ್ಲಿ ಮುಳುಗುವುದು, ಅಗ್ನಿ ಅವಘಡ ಹಾಗೂ ಅಪಘಾತಗಳು/ಆಘಾತ, ಹಾವು ಕಡಿತ, ನಾಯಿ ಕಡಿತ, ವಿದ್ಯುತ್ ಆಘಾತ ಮತ್ತು ಸುಟ್ಟಗಾಯಗಳು, ಸಿಡಿಲು/ಮಿಂಚು,ರಕ್ತಸ್ರಾವದ ಗಾಯಗಳು ಮುಂತಾದ ಸಂದರ್ಭಗಳಲ್ಲಿ ಪ್ರತಿಯೊಬ್ಬ ಏನು ಮಾಡಬೇಕು ಮತ್ತು ಏನು ತಪ್ಪು ಮಾಡಬಾರದು ಎಂಬುದರ ಬಗ್ಗೆ ಇನ್ನಿತರ ತುರ್ತು ಸಂದರ್ಭದಲ್ಲಿ ಆರೋಗ್ಯದ ಬಗ್ಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ವಿವರಿಸಿದರು, ಹೃದಯ ಸ್ತಂಭನ ಸಂದರ್ಭದಲ್ಲಿ CPR ಕೊಡುವುದರ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ತರಬೇತಿಯನ್ನು ನಡೆಸಿಕೊಟ್ಟರು, ಸಂಘ ಸಂಸ್ಥೆಗಳ ಸದಸ್ಯರು ಸಾರ್ವಜನಿಕರು ಹಾಗೂ ಗ್ರಾಮಸ್ಥರು ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

ರೋಟರಿ ಸಮುದಾಯ ದಳ ಕಲ್ಮಂಜದ ಕಾರ್ಯದರ್ಶಿ ವಸಂತಿ ಕಾರ್ಯಕ್ರಮ ನಿರೂಪಿಸಿ, ಶ್ರೀನಿವಾಸ ರಾವ್ ಧನ್ಯವಾದವಿತ್ತರು. ಕಲ್ಮಂಜ ಸಿದ್ದಬೈಲು ಪರಾರಿ ಅಂಗನವಾಡಿ ಕೇಂದ್ರಕ್ಕೆ, ಕೆಎಂಸಿ ಆಸ್ಪತ್ರೆಯ ವತಿಯಿಂದ ಪ್ರಥಮ ಚಿಕಿತ್ಸೆ ಕಿಟ್ ನನ್ನು ನೀಡಲಾಯಿತು, ಹಾಗೂ ಶಿಬಿರದಲ್ಲಿ ಪಾಲ್ಗೊಂಡವರಿಗೆ ವೈದ್ಯಕೀಯ ತುರ್ತು ಚಿಕಿತ್ಸೆಯ ಮಾಹಿತಿಯನ್ನು ಒಳಗೊಂಡ ಪುಸ್ತಕವನ್ನು ವಿತರಿಸಲಾಯಿತು.

Related posts

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಸಂಘ ಮತ್ತು ವಿವಿಧ ಕ್ಲಬ್ ಗಳ ಉದ್ಘಾಟನೆ : ನಾಯಕತ್ವ ಭವಿಷ್ಯದ ಜೀವನಕ್ಕೆ ಬುನಾದಿ: ಸಿ.ಕೆ. ರೋಹಿಣಿ

Suddi Udaya

ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ; 2 ನೇ ಅವಧಿಗೆ ಅಧ್ಯಕ್ಷರಾಗಿ ಸುಧಾಕರ ಭಂಡಾರಿ, ಉಪಾಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ಮುಂಡಾಜೆ ಮಂಜುಶ್ರೀ ಭಜನಾ ಮಂದಿರದ ವತಿಯಿಂದ ಭಜನಾ ಮಂಡಳಿಯ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಗುರುವಾಯನಕೆರೆ ನಿವಾಸಿ ಹನುಮಾನ್ ಟ್ರಾವೆಲ್ಸ್ ಏಜೆಂಟ್ ಪಂಡರಿನಾಥ್ ನಾಯಕ್ ನಿಧನ

Suddi Udaya
error: Content is protected !!