30.6 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ವಿಶ್ವ ರೇಬೀಸ್ ದಿನಾಚಾರಣೆ ಅಂಗವಾಗಿ ನಾಯಿ ಹಾಗೂ ಬೆಕ್ಕುಗಳಿಗೆ ಉಚಿತ ರೇಬೀಸ್ ನಿರೋಧಕ ಲಸಿಕ ಅಭಿಯಾನ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ತಾಲೂಕು ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಬೆಳ್ತಂಗಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳ್ತಂಗಡಿ ಇವರ ಸಹಯೋಗದಲ್ಲಿ ವಿಶ್ವ ರೇಬೀಸ್ ದಿನಾಚಾರಣೆ ಅಂಗವಾಗಿ ನಾಯಿ ಮತ್ತು ಬೆಕ್ಕುಗಳಿಗೆ ಉಚಿತ ರೇಬೀಸ್ ನಿರೋಧಕ ಲಸಿಕ ಅಭಿಯಾನ ಕಾರ್ಯಕ್ರಮ ಸೆ28 ರಂದು ನೇತ್ರಾವತಿ ಸಭಾಂಗಣ ತಾಲೂಕು ಪಂಚಾಯತ್ ಬೆಳ್ತಂಗಡಿ ಇಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಕಾರ್ಯನಿರ್ವಹಣಾಧಿಕಾರಿಯವರಾದ ಭವಾನಿ ಶಂಕರ್ ರವರು ರೇಬಿಸ್ ಲಸಿಕೆಯ ಲಭ್ಯತೆ ಇದ್ದು ಹಾಕಿಸಿಕೊಳ್ಳುವ ಮಹತ್ವವನ್ನು ತಿಳಿಸಿದರು. ಬೀದಿ ನಾಯಿಗಳ ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಲು ಧರ್ಮಸ್ಥಳದಲ್ಲಿ ಪ್ರಾರಂಭಿಸಲು ಯೋಜನೆಗಳನ್ನು ರೂಪಿಸಿರುವುದಾಗಿ ತಿಳಿಸಿದರು.
ತಾಲೂಕು ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಧಿಕಾರಿಯವರಾದ ಡಾ. ರವಿಕುಮಾರ್ ರವರು ಪ್ರಾಸ್ತಾವಿಕ ನೋಡಿಗಳನ್ನು ಆಡಿ ರೇಬಿಸ್ ಜಾಗೃತಿ ಕಾರ್ಯಕ್ರಮಗಳನ್ನು ಈಗಾಗಲೇ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ತಾಲೂಕಿನ 36 ಶಾಲೆಗಳಲ್ಲಿ 3500 ಕ್ಗ್ಕು ಅಧಿಕ ಮಕ್ಕಳಿಗೆ ಶಿಬಿರದ ಮೂಲಕ ಮಾಹಿತಿಯನ್ನು ಮನೆಮನೆಗೂ ತಲುಪುವಂತೆ ನೀಡಿದ್ದು ಅಕ್ಟೋಬರ್ ತಿಂಗಳಿನಲ್ಲಿ ಪಶುಪಾಲನಾ ಇಲಾಖೆಯಿಂದ ಉಚಿತ ರೇಬಿಸ್ ಲಸಿಕೆಯನ್ನು ಪ್ರತಿ ಗ್ರಾಮಗಳಲ್ಲಿ ನಡೆಸಲಾಗುವುದು ಈ ಲಸಿಕ ಅಭಿಯಾನದ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ತಿಳಿಸಿದರು.

ತಾಲೂಕು ಆರೋಗ್ಯ ಅಧಿಕಾರಿ ವರಾದ ಡಾಕ್ಟರ್ ಸಂಜತ್ ರವರು ಮಾತನಾಡಿ ಆರೋಗ್ಯ ಇಲಾಖೆಯಿಂದ ರೇಬೀಸ್ ಗೆ ಸಂಬಂಧಿಸಿದಂತೆ ಚಿಕಿತ್ಸೆಯ ವಿಧಾನವನ್ನು ಮೂರು ವಿಭಾಗಗಳಾಗಿ ಮಾಡಿ ಪ್ರಾಥಮಿಕ ಚಿಕಿತ್ಸೆ ನೀಡುವುದರ ಜೊತೆಗೆ ಲಸಿಕೆಯ ವಿಧಾನವನ್ನು ವಿವರಿಸಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಡಾ. ರಾಜಶ್ರೀರವರು ಮಾತನಾಡಿ ಶಾಲಾ ವಿದ್ಯಾರ್ಥಿಗಳಿಗೆ ರೇಬಿಸ್ ಕುರಿತಾದ ಮಾಹಿತಿಯನ್ನು ಶಾಲಾ ಹಂತದಲ್ಲಿ ಏಕೋ ಕ್ಲಬ್ ಚಟುವಟಿಕೆಯ ಮೂಲಕ ಮಾಹಿತಿಯನ್ನು ನೀಡುತ್ತಿರುವ ಬಗ್ಗೆ ತಿಳಿಸಿದರು ಅಂತೆಯೇ ಮುಂದಿನ ದಿನಗಳಲ್ಲಿ ಪಶುಪಾಲನಾ ಇಲಾಖೆಯ ಯಾವುದೇ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.

ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಆದ ರಾಜೇಶ್ ಕೆ ರವರು ಜಿಲ್ಲಾ ಮಟ್ಟದ ಆದೇಶದಂತೆ ಬೀದಿ ನಾಯಿಗಳಿಗೆ ವ್ಯವಸ್ಥೆಯನ್ನು ಮಾಡಲು ಮೆಲಂತವೆಟ್ಟು ಗ್ರಾಮದಲ್ಲಿ ಸ್ಥಳ ಗುರುತಿಸಲಾಗಿದೆ ಅನುಮೋದನೆ ಸಿಕ್ಕಿದ ಕೂಡಲೇ ತಾಲೂಕು ಪಂಚಾಯತ್ ಸಹಕಾರದೊಂದಿಗೆ ಕಟ್ಟಡವನ್ನು ನಿರ್ಮಾಣ ಮಾಡಲಾಗುವುದು ತದನಂತರ ನಾಯಿಗಳ ಹಾರೈಕೆಗೆ ಬೇಕಾದಂತಹ ಲಸಿಕೆ ಆಹಾರ ಔಷಧಿ ಪ್ರತಿಯೊಂದರ ಜವಾಬ್ದಾರಿಯನ್ನು ಪಟ್ಟಣ ಪಂಚಾಯಿತಿಯಿಂದ ಮಾಡಲು ಇಚ್ಚಿಸುತ್ತೇವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೆಎಂಎಫ್ ಸ್ಥಾಪಕರಾದ ಡಾ. ಗಣಪತಿ ರವರು ಉಪಸ್ಥಿತರಿದ್ದರು

ಕಾರ್ಯಕ್ರಮವನ್ನು ನಾಗಶಯನ ರಾವ್ ಜಾನುವಾರು ಅಧಿಕಾರಿ ಅವರದ ಸ್ವಾಗತಿಸಿ ನಿರೂಪಿಸಿ ಧನ್ಯವಾದ ಸಲ್ಲಿಸಿದರು
ರೇಬಿಸ್ ಲಸಿಕೆಯ ಕೈಪಿಡಿಯನ್ನು ವೇದಿಕೆಯಲ್ಲಿದ್ದ ಅತಿಥಿಗಳು ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಎರಡು ನಾಯಿಗಳಿಗೆ ರೇಬಿಸ್ ಲಸಿಕೆ ಕೊಡುವ ಮೂಲಕ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕಿನ ಪಶುವೈದ್ಯ ಸಂಸ್ಥೆಯ ಹಿರಿಯ ಪಶು ವೈದ್ಯ ಅಧಿಕಾರಿ, ಜಾನುವಾರು ಅಧಿಕಾರಿ ಪಶು ವೈದ್ಯ ಪರೀಕ್ಷಕರು, ಪಶು ವೈದ್ಯ ಪರಿವೀಕ್ಷಕರು, ಹೊರಗುತ್ತಿಗೆ ಡಿ ಗ್ರೂಪ್ ನೌಕರರು, ಮೈತ್ರಿ ಕಾರ್ಯಕರ್ತರು ಹಾಗೂ ಪಶು ಸಖಿಯರು ಭಾಗವಹಿಸಿದ್ದರು.

ಆರೋಗ್ಯ ಇಲಾಖೆಯ ಸಿಬ್ಬಂದಿಯವರು ಭಾಗವಹಿಸಿ ಪಶುಪಾಲನ ಇಲಾಖೆಯ ಲಸಿಕೆ ನೀಡುವ ಸಿಬ್ಬಂದಿಯವರಿಗೆ ಸುರಕ್ಷತೆಗಾಗಿ ರೇಬಿಸ್ ಲಸಿಕೆಯನ್ನು ಹಾಕಿದರು.

Related posts

ಸಿರಿ ಸಂಸ್ಥೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಭೇಟಿ

Suddi Udaya

ಬೆಳ್ತಂಗಡಿ ತಾಲೂಕಿನ ಭಕ್ತರಿಂದ ಸಮಾಲೋಚನಾ ಸಭೆ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಹಸಿರು ಹೊರೆಕಾಣಿಕೆ

Suddi Udaya

ಡಿಕೆಶಿ ಮುಖ್ಯಮಂತ್ರಿ, ಇದು ಕಾರ್ಯಕರ್ತರ ಗೆಲುವು: ರಂಜನ್ ಜಿ ಗೌಡ

Suddi Udaya
error: Content is protected !!