31.1 C
ಪುತ್ತೂರು, ಬೆಳ್ತಂಗಡಿ
September 28, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

VTU ರೆಸ್ಟ್ ಆಫ್ ಬೆಂಗಳೂರು ವಿಭಾಗದ ನೆಟ್‌ಬಾಲ್ : ಎಸ್.ಡಿ.ಎಂ ತಂಡಕ್ಕೆ ಪ್ರಶಸ್ತಿ

ಉಜಿರೆ : ಹಾಸನದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ವತಿಯಿಂದ ಆಯೋಜಿಸಲಾಗಿದ್ದ ‘ರೆಸ್ಟ್ ಆಫ್ ಬೆಂಗಳೂರು’ (Rest of Bengaluru) ವಿಭಾಗ ಮಟ್ಟದ ನೆಟ್‌ಬಾಲ್ ಪಂದ್ಯಾವಳಿಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ (SDMIT) ಪುರುಷರ ನೆಟ್‌ಬಾಲ್ ತಂಡವು ಅಮೋಘ ಪ್ರದರ್ಶನ ನೀಡಿ ರನ್ನರ್ಸ್ ಅಪ್ (ದ್ವಿತೀಯ ಸ್ಥಾನ) ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಪಂದ್ಯಾವಳಿಯುದ್ದಕ್ಕೂ SDMIT ತಂಡದ ಆಟಗಾರರು ಅತ್ಯುತ್ತಮ ತಂಡದ ಸಮನ್ವಯ, ವೇಗ, ಕೌಶಲ್ಯ ಹಾಗೂ ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿ ಗಮನ ಸೆಳೆದರು. ಕಠಿಣ ಪೈಪೋಟಿಯ ನಡುವೆಯೂ ಆತ್ಮವಿಶ್ವಾಸದಿಂದ ಆಟವಾಡಿದ ತಂಡವು ಅಂತಿಮ ಹಂತದವರೆಗೂ ಉತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಗಳಿಸುವಲ್ಲಿ ಯಶಸ್ವಿಯಾಯಿತು.

ಈ ಸಾಧನೆಯೊಂದಿಗೆ SDMIT ಪುರುಷರ ನೆಟ್‌ಬಾಲ್ ತಂಡವು VTU ರಾಜ್ಯಮಟ್ಟದ ನೆಟ್‌ಬಾಲ್ ಪಂದ್ಯಾವಳಿಗೆ ಅಧಿಕೃತವಾಗಿ ಆಯ್ಕೆಯಾಗಿದೆ.

ತಂಡದ ನಾಯಕ ರೋಹಿತ್ ಬಿ. ಅವರ ನೇತೃತ್ವದಲ್ಲಿ ರಾಘವೇಂದ್ರ ಕೆ., ಸಂಕೇತ್ ಪಿ., ಆರ್ಯನ್ ರಾವ್, ಶ್ರೀನಿವಾಸ್ ರಾವ್, ಸಾಹಿಲ್, ಸಾಯಿ ಕುಮಾರ್ ನಾಯಕ್, ಜಗದೀಶ ಜಿ.ಎಸ್., ವಿದ್ಯಾನಂದ, ಮನಿತ್, ಚಿನ್ಮಯ್, ಅನ್ವಿತ್, ಕಾರ್ತಿಕ್ ಹಾಗೂ ವಿಕಾಸ್ ಅವರು ಪಂದ್ಯಾವಳಿಯಲ್ಲಿ ಭಾಗವಹಿಸಿ ತಂಡದ ಈ ಗಮನಾರ್ಹ ಸಾಧನೆಗೆ ಪ್ರಮುಖ ಕೊಡುಗೆ ನೀಡಿದರು. ತಂಡಕ್ಕೆ ತಾಂತ್ರಿಕ ಮಹಾವಿದ್ಯಾಲಯ ದೈಹಿಕ ಶಿಕ್ಷಣ ನಿರ್ದೇಶಕ ಪ್ರಭಾಕರ್ ತರಬೇತಿ ನೀಡಿದ್ದಾರೆ.

ಈ ಸಾಧನೆಗೆ SDM ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, SDMIT ಪ್ರಾಂಶುಪಾಲ ಡಾ. ಸಂದೀಪ್ ಆರ್., ಕ್ರೀಡಾ ವಿಭಾಗದ ತರಬೇತುದಾರರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ತಂಡದ ಆಟಗಾರರನ್ನು ಅಭಿನಂದಿಸಿ, ರಾಜ್ಯಮಟ್ಟದ ಪಂದ್ಯಾವಳಿಗೆ ಶುಭ ಹಾರೈಸಿದ್ದಾರೆ.

Related posts

8ನೇ ರಾಷ್ಟ್ರೀಯ ಪ್ರಾಕೃತಿಕ ಚಿಕಿತ್ಸೆ ದಿನದ ಪ್ರಯುಕ್ತ ಎಸ್.ಡಿ.ಎಂ. ನ್ಯಾಚುರೋಪತಿ ಕಾಲೇಜಿನಿಂದ ಪ್ರಾಕೃತಿಕ ಚಿಕಿತ್ಸೆ ಜಾಗೃತಿ ಮತ್ತು ಆರೋಗ್ಯ ಶಿಬಿರ

Suddi Udaya

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

Suddi Udaya

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ಬಡಕೋಡಿ ಸ. ಹಿ. ಪ್ರಾ. ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

Suddi Udaya

ಮಿತ್ತ ಬಾಗಿಲು ಹಾಲು ಉತ್ಪಾದಕರ ಸಂಘಕ್ಕೆ ಜಿಲ್ಲಾ ಮಟ್ಟದ ಸಾಧನಾ ಪ್ರಶಸ್ತಿ,

Suddi Udaya
error: Content is protected !!